ನವದೆಹಲಿ: ಇಲ್ಲಿಯ ನಿಜಾಮುದ್ದೀನ್ ಮರ್ಕಜ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ 960 ಮಂದಿ ವಿದೇಶಿಗರ ವೀಸಾವನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ಈಗಾಗಲೇ ಇವರೆಲ್ಲರನ್ನೂ ಕಪ್ಪು ಪಟ್ಟಿಗೆ ಕೂಡ ಸೇರಿಸಲಾಗಿದೆ. ಈ ವಿದೇಶಿಗರು ಟೂರಿಸ್ಟ್‌ ವೀಸಾ ಪಡೆದು ಭಾರತಕ್ಕೆ ಬಂದಿದ್ದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿರ್ದೇಶನದ ಮೇರೆಗೆ ಈ ಕ್ರಮ ತೆಗೆದುಕೊಳ್ಳಲಾಗಿದೆ. ದೇಶದ ಎಲ್ಲ ರಾಜ್ಯಗಳ ಪೊಲೀಸ್ ಮಹಾ ನಿರ್ದೇಶಕರಿಗೆ ವೀಸಾ ರದ್ದತಿ ಕುರಿತಂತೆ ಗೃಹ ಸಚಿವಾಲಯವು ಸೂಚನೆ ನೀಡಿತ್ತು. ಇವರೆಲ್ಲರೂ ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಹಿನ್ನಲೆಯಲ್ಲಿ ವಿದೇಶಿ ಕಾಯ್ದೆ- 1946 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿ ಅವರ ವೀಸಾ ರದ್ದು ಮಾಡುವಂತೆ ನಿರ್ದೇಶಿಸಲಾಗಿತ್ತು.
ಇದೇ ವೇಳೆ ದೆಹಲಿ ನಿಜಾಮುದ್ದೀನ್ ಮಸೀದಿಯ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ ಸುಮಾರು 9 ಸಾವಿರ ಜಮಾತ್ ಸದಸ್ಯರನ್ನು ಮತ್ತು ಅವರೊಂದಿಗೆ ನಿಕಟ ಸಂಪರ್ಕ ಹೊಂದಿರುವವರನ್ನು ಕ್ವಾರಂಟೈನ್‌ನಲ್ಲಿರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ದೆಹಲಿಯಲ್ಲಿ 2,000ದಷ್ಟು ತಬ್ಲಿಗಿ ಜಮಾತ್ ಸದಸ್ಯರಿದ್ದು, 1,804 ಜನರನ್ನು ಕ್ವಾರಂಟೈನ್ ಕೇಂದ್ರದಲ್ಲಿರಿಸಲಾಗಿದೆ. ಸೋಂಕು ಲಕ್ಷಣವಿರುವ 334 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 128, ಬೆಂಗಳೂರಲ್ಲಿ ದಾಖಲಾಗದ ಹೊಸ ಪ್ರಕರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 19 =
Remember me
