ವಿಶಾಖಪಟ್ಟಣಂ:ಯುವಕನ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದ ಅಪ್ರಾಪ್ತ ಮಗಳನ್ನೇ ತಂದೆಯೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ.
ಮೃತ ಹುಡುಗಿಯನ್ನು 15 ವರ್ಷದ ಲಿಖಿತಾ ಶ್ರೀ ಎಂದು ಗುರುತಿಸಲಾಗಿದೆ. ಆಕೆಯ ತಂದೆ ವರ ಪ್ರಸಾದ್​ನಿಂದಲೇ ಲಿಖಿತಾ ಕೊಲೆಯಾಗಿದ್ದಳೆ. ಆರೋಪಿ ವೃತ್ತಿಯಲ್ಲಿ ಆಂಬ್ಯುಲೆನ್ಸ್​ ಚಾಲಕನಾಗಿದ್ದು, ರೆಲ್ಲಿ ವೀಧಿಯಲ್ಲಿ ಕೆಲಸ ಮಾಡುತ್ತಿದ್ದ.
ಕೊಲೆ ಮಾಡಿದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿರುವ ವರ ಪ್ರಸಾದ್​, ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಕ್ಕೆ ಮಗಳನ್ನು ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಒಂದೇ ಏರಿಯಾದಲ್ಲಿ ವಾಸವಿದ್ದ ಯುವಕನನ್ನು ಮಗಳು ಲವ್​ ಮಾಡುತ್ತಿದ್ದಳು. ನನ್ನ ಹಿರಿಯ ಮಗಳು ಕೂಡ ಪ್ರೀತಿಸಿದವನ ಜೊತೆ ಓಡಿ ಹೋಗಿದ್ದಾಳೆ. 10 ನೇ ತರಗತಿ ಓದುತ್ತಿದ್ದ ನನ್ನ ಕಿರಿಯ ಮಗಳು ಸಹ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಳು ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ನಾನು ಆಕೆಗೆ ಕೇಳಿದ್ದನ್ನೆಲ್ಲ ಕೊಡಿಸಿದೆ. ಅವಳನ್ನು ತುಂಬಾ ಮುದ್ದು ಮಾಡಿ ಬೆಳೆಸಿದೆ. ಯುವಕನೊಂದಿಗೆ ಮಾತನಾಡಬೇಡ ಎಂದು ಬುದ್ಧಿ ಮಾತು ಹೇಳಿದೆ. ಆದರೆ, ಆಕೆ ಅದನ್ನು ಕೇಳಲಿಲ್ಲ. ಹೀಗಾಗಿ ನಾನು ಆಕೆಯನ್ನು ಕೊಲೆ ಮಾಡಿದೆ ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ.
ವರ ಪ್ರಸಾದ್​ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಮೃತ ಲಿಖಿತಾಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.(ಏಜೆನ್ಸೀಸ್​)
ವಿಜಯವಾಣಿ ಅಚ್ಚಗನ್ನಡ ಅಭಿಯಾನ: ಬನ್ನಿ ಭಾಗವಹಿಸಿ ಬಹುಮಾನ ಗೆಲ್ಲಿ

ಯುವತಿ ಮೇಲೆ ಆ್ಯಸಿಡ್​ ದಾಳಿ ಮಾಡಿದ್ದ ಆ್ಯಸಿಡ್​ ನಾಗನಿಗೆ ವಿಧಿಯಿಂದಲೇ ಘೋರ ಶಿಕ್ಷೆ! ನೋವಿನಿಂದ ನರಳಾಟ

ಮಹಿಳೆಯ ಮೇಲೆ ಅತ್ಯಾಚಾರ: ಆಸ್ಟ್ರೇಲಿಯಾದಲ್ಲಿ ಲಂಕಾ ಕ್ರಿಕೆಟಿಗ ಅರೆಸ್ಟ್​, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಡ್ನಿ ಪೊಲೀಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 6 =
Remember me
