ಲಖನೌ:ಉತ್ತರ ಪ್ರದೇಶ ರಾಜಧಾನಿ ಲಖನೌದ ಕೇಂದ್ರ ಹಜರತ್​ಗಂಜ್​ನಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ನಡೆದ ಗುಂಡಿನ ದಾಳಿಯಲ್ಲಿ ವಿಶ್ವ ಹಿಂದು ಮಹಾಸಭಾದ ರಾಜ್ಯಾಧ್ಯಕ್ಷ ರಂಜಿತ್​ ಬಚ್ಚನ್​ ಹತ್ಯೆಯಾಗಿದ್ದಾರೆ.
ಬೆಳಗ್ಗೆ ವಾಯುವಿಹಾರಕ್ಕೆಂದು ತೆರಳಿದ್ದಾಗ ಬೈಕ್​ ಮೇಲೆ ಬಂದ ದುಷ್ಕರ್ಮಿಗಳು ರಂಜಿತ್​ ಬಚ್ಚನ್​ ಮೇಲೆ ಫೈರಿಂಗ್​ ಮಾಡಿದ್ದಾರೆ. ತಲೆಗೆ ಗುರಿಯಾಗಿರಿಸಿಕೊಂಡು ಅನೇಕ ಬಾರಿ ಶೂಟ್​ ಮಾಡಿದ್ದು, ಪರಿಣಾಮ ಬಚ್ಚನ್​ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ​
ಲಖನೌದ ಹಜರತ್​ಗಂಜ್​ನಲ್ಲಿರುವ ಸಿಡಿಆರ್​ಐ ಕಟ್ಟಡ ಸಮೀಪದಲ್ಲಿ ಈ ಆತಂಕಕಾರಿ ಘಟನೆ ನಡೆದಿದೆ. ಫೈರಿಂಗ್​ನಲ್ಲಿ ಬಚ್ಚನ್​ ಸಹೋದರನಿಗೂ ಗುಂಡು ತಾಗಿದ್ದು, ಗಂಭೀರ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಂಜಿತ್​ ಬಚ್ಚನ್​ ಗೋರಖ್​ಪುರದ ನಿವಾಸಿಯಾಗಿದ್ದರು.
ಈ ಬಗ್ಗೆ ಮಾತನಾಡಿರುವ ಲಖನೌ ಕೇಂದ್ರ ಡಿಸಿಪಿ ದಿನೇಶ್​ ಸಿಂಗ್​, ಮೃತದೇಹವನ್ನು ರಂಜಿತ್​ ಬಚ್ಚನ್​ ಎಂದು ಗುರುತಿಸಲಾಗಿದೆ. ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದಾಗ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸ್​ ತಂಡವೊಂದನ್ನು ರಚನೆ ಮಾಡಲಾಗಿದ್ದು, ತನಿಖೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + fifteen =
Remember me
