ನವದೆಹಲಿ:ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ ಫೈಲ್ಸ್​’ ಚಿತ್ರವು 69ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿಯನ್ನು ಗೆದ್ದಿದೆ. ರಾಷ್ಟ್ರೀಯ ಏಕೀಕರಣದ ಅತ್ಯುತ್ತಮ ಚಿತ್ರಕ್ಕಾಗಿ ಈ ಸಿನಿಮಾ ನರ್ಗೀಸ್ ದತ್ ಪ್ರಶಸ್ತಿಯನ್ನು ಪಡೆದುಕೊಂಡಿದೆ.
69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2023ರ ವಿಜೇತರನ್ನು ಇಂದು (ಆಗಸ್ಟ್ 24) ಸಂಜೆ 5 ಗಂಟೆಗೆ ಅಧಿಕೃತವಾಗಿ ಪ್ರಕಟಿಸಲಾಯಿತು. ದೇಶದಾದ್ಯಂತ ಚಿತ್ರರಂಗದ ಅತ್ಯುತ್ತಮ ಪ್ರತಿಭೆಗಳನ್ನು ಗೌರವಿಸಲು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ವಾರ್ಷಿಕವಾಗಿ ಘೋಷಿಸಲಾಗುತ್ತದೆ.
1990ರ ದಶಕದಲ್ಲಿ ಕಣಿವೆ ರಾಜ್ಯದಲ್ಲಿ ಕಾಶ್ಮೀರಿ ಪಂಡಿತರ ವಲಸೆ ಹಾಗೂ ಉಗ್ರವಾದದ ಕುರಿತ ಚಿತ್ರವನ್ನು ವಿವೇಕ್​ ಅಗ್ನಿಹೋತ್ರಿ ರಚಿಸಿ ನಿರ್ದೇಶಿಸಿದ್ದರು. 2022ರ ಮಾರ್ಚ್​ ತಿಂಗಳಲ್ಲಿ ಈ ಚಿತ್ರ ಬಿಡುಗಡೆಯಾಗಿತ್ತು.
📡LIVE NOW📡Press Conference by Jury to announce winners of 69th National Film Awards.@PIB_Indiahttps://t.co/ZJo2yjpPpc
ಇದನ್ನೂ ಓದಿ:ವಿಜ್ಞಾನಿಗಳ ಪರಿಶ್ರಮದ ಶ್ರೇಯಸ್ಸನ್ನು ಪಡೆಯಲು ಪ್ರಧಾನಿ ಮೋದಿ ಮುಂದಾಗಿರುವುದು ದುರಾದೃಷ್ಟಕರ: ಕಾಂಗ್ರೆಸ್​
ಚಿತ್ರ ಬಿಡುಗಡೆಯಾದ ಹೊಸದರಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದವು. ಕೆಲವರು ಕೋಮು ಸೌಹಾರ್ದತೆ ಹಾಗೂ ಧಾರ್ಮಿಕ ಭಾವನೆಗಳಿಗೆ ಈ ಚಿತ್ರ ಧಕ್ಕೆ ಉಂಟು ಮಾಡುತ್ತದೆ ಎಂದು ಆರೋಪಿಸಿದ್ದರು. ಈ ಚಿತ್ರವು ವಾಸ್ತವಾಂಶವನ್ನು ಮರೆಮಾಚಿ ಹಿಂದೂ-ಮುಸ್ಲಿಮರ ನಡುವೆ ವಿಷ ಬೀಜ ಬಿತ್ತುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತರು ಹಾಗೂ ವಿಪಕ್ಷ ನಾಯಕರು ಆರೋಪಿಸಿದ್ದರು.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಚಿತ್ರವನ್ನು ಹಾಡಿ ಹೊಗಳಿದ್ದರು. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಚಿತ್ರಕ್ಕೆ ತೆರಿಗೆ ವಿನಾಯ್ತಿಯನ್ನು ಘೋಷಿಸಲಾಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 1 =
Remember me
