ನವದೆಹಲಿ:ಬಾಲಿವುಡ್​ನ ಸಂಗೀತ ನಿರ್ದೇಶಕ, ಗಾಯಕ ದಿ. ವಾಜಿದ್​ ಖಾನ್​ ಅವರ ತಾಯಿಗೆ ಕರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
ಕಿಡ್ನಿ ಸೋಂಕು ಸೇರಿ ಇತರ ಸಮಸ್ಯೆಯಿಂದ ಬಳಲುತ್ತಿದ್ದ ವಾಜಿದ್​ ಅವರನ್ನು ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗನನ್ನು ನೋಡಿಕೊಳ್ಳಲೆಂದು ತಾಯಿ ರಾಜಿನಾ ಖಾನ್ ಆಸ್ಪತ್ರೆಯಲ್ಲೇ ಇದ್ದರು. ಆ ವೇಳೆ ತಾಯಿಗೆ ಸೋಂಕು ತಗುಲಿದೆ. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿರಿಬಾಲಿವುಡ್​ನ ಸಂಗೀತ ನಿರ್ದೇಶಕ ವಾಜಿದ್ ಖಾನ್ ನಿಧನ
ವಾಜೀದ್​ಗೆ ಕಿಡ್ನಿ ಸಮಸ್ಯೆ ಇತ್ತು. ಜತೆಗೆ ಹೃದ್ರೋಗವೂ ಕಾಣಿಸಿಕೊಂಡು ಚಿಕಿತ್ಸೆ ಫಲಿಸದೆ ಸೋಮವಾರ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು ಎಂದು ಅವರ ಸಹೋದರ ಸಾಜಿದ್ ತಿಳಿಸಿದ್ದಾರೆ. ಅಂದು ಮಧ್ಯಾಹ್ನವೇ ವಾಜೀದ್​ ಅಂತ್ಯಸಂಸ್ಕಾರ ನೆರವೇರಿಸಿದ್ದು, ಕುಟುಂಬಸ್ಥರು ಮತ್ತು ಆಪ್ತರು ಸೇರಿ 20 ಮಂದಿಯಷ್ಟೇ ಪಾಲ್ಗೊಂಡಿದ್ದರು ಎಂದು ವಿವರಿಸಿದ್ದಾರೆ.
ಇದನ್ನೂ ಓದಿರಿಹೋಟೆಲ್​ ಮಾಲೀಕನ ಮಗನೇ ಎಂಜಲು ಮಾಡ್ತಾನೆ.. ಇಲ್ಲಿ ಊಟ ಮಾಡೋಕು ಮುನ್ನ ಎಚ್ಚರ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 11 =
Remember me
