ರಾಂಚಿ:ಕರೊನಾವೈರಸ್ ವ್ಯಾಪಕವಾಗಿ ಹರಡುತ್ತಿದ್ದರೂ ಜನ ನಮ್ಮ ಮಾತು ಕೇಳುತ್ತಿಲ್ಲ. ಹಾಗಾಗಿ ಸೇನೆಯನ್ನೇ ಕರಿಸಲು ಯೋಚಿಸುತ್ತಿದ್ದೇವೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಹೇಳಿದ್ದಾರೆ.
ಎನ್​ಡಿಟಿವಿಯೊಂದಿಗೆ ಮಾತನಾಡಿರುವ ಅವರು, ಜಾರ್ಖಂಡ್​ನಲ್ಲಿ ಜನರು ಕೋವಿಡ್ ತಡೆ ನಿಯಮಾವಳಿಗಳನ್ನು ಪಾಲಿಸುತ್ತಿಲ್ಲ. ನಮ್ಮ ಮಾತನ್ನೂ ಕೇಳುತ್ತಿಲ್ಲ. ಮಾಸ್ಕ್​, ಸಾಮಾಜಿಕ ಅಂತರ ಎಂಬುದು ಮರಿಚಿಕೆ ಆಗಿದೆ. ಹೀಗಾಗಿ ರಕ್ಷಣಾ ಇಲಾಖೆ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದೇವೆ. ಅಗತ್ಯ ಸೇನಾ ಸಿಬ್ಬಂದಿಯನ್ನು ಕಳುಹಿಸಿ ಎಂದು ಮನವಿ ಮಾಡಿಕೊಂಡಿದ್ದೇವೆ ಎಂದು ಹೇಳಿದ್ದಾರೆ.
ಜಾರ್ಖಂಡ್​ನಲ್ಲಿ ಶನಿವಾರ 3838 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 30 ಜನ ಮೃತಪಟ್ಟಿದ್ದಾರೆ. ಆ ರಾಜ್ಯದಲ್ಲಿ ಒಟ್ಟು 1400 ಜನ ಕೋವಿಡ್​​ನಿಂದಾಗಿ ಮರಣ ಹೊಂದಿದ್ದಾರೆ. ಇದೀಗ ಪ್ರತಿದಿನ ಸರಾಸರಿ 3000 ಕೇಸುಗಳು ಕಂಡು ಬರುತ್ತಿವೆ.
ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕೆಟ್ಟದಾಗಿದೆ. ಲಸಿಕೆ ಕೊರತೆಯೂ ಕಾಣುತ್ತಿದೆ. ಕೂಡಲೇ ಕೇಂದ್ರ ಸರ್ಕಾರ ಇತ್ತ ಗಮನ ಹರಿಸಬೇಕು ಎಂದು ಹೇಮಂತ್ ಸೋರೆನ್ ಆಗ್ರಹಿಸಿದ್ದಾರೆ.
ಪಶ್ಚಿಮ ಬಂಗಾಳ ಚುನಾವಣೆ ಸಮಾವೇಶಗಳಿಂದ ಹಿಂದೆ ಸರಿದ ರಾಹುಲ್ ಗಾಂಧಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 1 =
Remember me
