ನವದೆಹಲಿ:ಲೋಕಸಭೆ ಚುನಾವಣೆಯ ಕೊನೆಯ ಹಂತಕ್ಕೆ ತಲುಪಿದ್ದು, ರಾಜಕೀಯ ಮುಖಂಡರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಈ ನಡುವೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ರಾಜ್ಯದ ದಕ್ಷಿಣ 24 ಪರಗಣದಲ್ಲಿ ತಮ್ಮ ಸಾರ್ವಜನಿಕ ರ‍್ಯಾಲಿಯಲ್ಲಿ ವೇದಿಕೆಯ ಮೇಲೆ ಹಲವು ಮಹಿಳೆಯರೊಂದಿಗೆ ನೃತ್ಯ ಮಾಡಿದ್ದಾರೆ.
ಇದನ್ನೂ ಓದಿ:ಕೇರಳ: ಚಲಿಸುವ ಕಾರಿನಲ್ಲಿ ಈಜುಕೊಳ ದುಸ್ಸಾಹಸ, ಯೂಟ್ಯೂಬರ್ ಬಂಧನ!
ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಸಿಎಂ ಮಮತಾ ಬ್ಯಾನರ್ಜಿ ಭಾಗವಹಿಸಿದ್ದ ರ‍್ಯಾಲಿ ಮುಕ್ತಾಯವಾಗುತ್ತಿದ್ದಂತೆ, ಅವರು ವೇದಿಕೆಯಲ್ಲಿ ತೃಣಮೂಲ ಕಾಂಗ್ರೆಸ್‌ನ ಮಹಿಳಾ ಕಾರ್ಯಕರ್ತರೊಂದಿಗೆ ಸೇರಿಕೊಂಡು ಸಾಂಪ್ರದಾಯಿಕ ಗೀತೆಗೆ ನೃತ್ಯ ಮಾಡಿದ್ದಾರೆ.
#WATCH| West Bengal CM Mamata Banerjee joins a few women as they dance together on stage, at her public rally in South 24 Parganas.#LokSabhaElections2024pic.twitter.com/ZhSNC2ZZLj
— ANI (@ANI)May 29, 2024

ಮಮತಾ ಬ್ಯಾನರ್ಜಿ ಮಹಿಳೆಯರೊಂದಿಗೆ ನಿಂತು ಕಾಲು ಕುಣಿಸುತ್ತಾ, ಅವರ ಕೈ ಹಿಡಿದು ಹೆಜ್ಜೆ ಹಾಕುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನಂತರ ಅವರು ವೇದಿಕೆಯಿಂದ ಕೆಳಗಿಳಿದು, ನೃತ್ಯ ಮಾಡಲು ತನ್ನನ್ನು ಹುರಿದುಂಬಿಸಿದ ಜನರತ್ತ ಕೈ ಬೀಸಿದರು.
ಪಶ್ಚಿಮ ಬಂಗಾಳದಲ್ಲಿ ಕೊನೆಯ ಹಂತದ ಲೋಕಸಭೆ ಚುನಾವಣೆಗೆ 72 ಗಂಟೆಗಳಿಗಿಂತ ಕಡಿಮೆ ಸಮಯ ಉಳಿದಿದ್ದು, ಮಮತಾ ಬ್ಯಾನರ್ಜಿ ಮತ್ತು ಅವರ ಪಕ್ಷವು ರಾಜ್ಯದಲ್ಲಿ ಪ್ರಬಲ ಮತ್ತು ಪ್ರಮುಖ ಪ್ರಚಾರವನ್ನು ನಡೆಸುತ್ತಿದೆ.  ಜೂನ್ 1 ರಂದು ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಪ್ರತಿನಿಧಿಸುವ ಡೈಮಂಡ್ ಹಾರ್ಬರ್ ಸೇರಿದಂತೆ ಒಂಬತ್ತು ಸ್ಥಾನಗಳು ಏಳನೇ ಹಂತದಲ್ಲಿ ಮತದಾನ ನಡೆಯಲಿದೆ.
ಶ್ರೀನಗರ: ಸೇನಾ ಸಿಬ್ಬಂದಿ ಥಳಿತ, ನಾಲ್ವರು ಪೊಲೀಸರಿಗೆ ಗಂಭೀರ ಗಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 13 =
Remember me
