ಲಖನೌ:ಮಕ್ಕಳಿಗೆ ಉತ್ತಮ ಮಾರ್ಗದರ್ಶನ ನೀಡಿ, ತಿದ್ದಿ ಬುದ್ದಿ ಹೇಳಿ ಮುಂದಿನ ಭವಿಷ್ಯಕ್ಕೆ ದಾರಿದೀಪವಾಗಿ ಮಾದರಿಯಾಗಬೇಕಾಗಿರುವ ಶಿಕ್ಷಕರೇ ಹಾದಿ ತಪ್ಪಿದರೆ ಏನೆಲ್ಲಾ ಆಗಬಹುದು ಎಂಬುದಕ್ಕೆ ಈ ಪ್ರಕರಣವೇ ಜೀವಂತ ಸಾಕ್ಷಿಯಾಗಿದೆ. ಉತ್ತರಪ್ರದೇಶದ ಜೌನ್​ಪುರ ಜಿಲ್ಲೆಯ ಪ್ರತಿಷ್ಠಿತ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಪ್ರಾಂಶುಪಾಲ ಹಾಗೂ ಶಿಕ್ಷಕಿ ಶಾಲಾ ಕೊಠಡಿಯಲ್ಲೇ ಹೇಯ ಕೃತ್ಯ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ನೆಟ್ಟಿಗರು ಇವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕಠಿಣ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ.
A viral video on social media shows a school principal and a woman teacher allegedly caught in an obscene act in office in#Jaunpur,#UttarPradesh.The viral clip shows the principal of a convent school in#Sarpathaand a woman teacher engaging in obscene acts in the office on…pic.twitter.com/Az5xLhBXZQ
ಇದನ್ನೂ ಓದಿ:ಕೋಚ್​ ಹುದ್ದೆ ತೊರೆದ ನಂತರ ಮೆಂಟರ್​ ಆಗಲಿದ್ದಾರೆ ರಾಹುಲ್​ ದ್ರಾವಿಡ್​; ಯಾವ ತಂಡ, ಇಲ್ಲಿದೆ ಮಾಹಿತಿ
ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ, ಪ್ರಾಂಶುಪಾಲ ಹಾಗೂ ಶಿಕ್ಷಕಿ ಶಾಲೆಯ ಕೊಠಡಿಯಲ್ಲೇ ರೊಮ್ಯಾನ್ಸ್‌ ಮಾಡಿದ್ದಾರೆ. ಈ ಇಬ್ಬರೂ ಒಬ್ಬರನ್ನೊಬ್ಬರು ತಬ್ಬಿಕೊಂಡು ಸರಸ ಸಲ್ಲಾಪದಲ್ಲಿ ತೊಡಗಿದ್ದು, ಈ ದೃಶ್ಯವನ್ನು ರಹಸ್ಯ ಕ್ಯಾಮೆರಾದಲ್ಲಿ ರೆಕಾರ್ಡ್‌ ಮಾಡಲಾಗಿದೆ. ವೈರಲ್​ ಆಗಿರುವ ವಿಡಿಯೋದಲ್ಲಿ ಮಹಾನ್​ ವ್ಯಕ್ತಿಗಳ ಫೋಟೋ ಕೂಡ ಇದ್ದು, ಫೋಟೋಗಳ ಮುಂದೆಯೇ ಇಂತಹ ಕೃತ್ಯ ಎಸಗಿದ ಈ ಇಬ್ಬರೂ ಶಿಕ್ಷಕರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.
ಹೇಟ್​ ಡಾಕ್ಟರ್​ ಎಂಬುವವರು ಈ ವಿಡಿಯೋವನ್ನು ಹಂಚಿಕೊಂಡಿದ್ದು, ಶಿಕ್ಷಕರು ತಮ್ಮ ಘನತೆಯನ್ನು ಮರೆತಾಗ ವಿದ್ಯಾರ್ಥಿಗಳ ಭವಿಷ್ಯ ಏನಾಗಬಹುದು,  ಶಿಕ್ಷಕರು ನಾಚಿಕೆ ಮತ್ತು ವಿನಯವನ್ನು ಬದಿಗಿಟ್ಟು ವಿದ್ಯಾರ್ಥಿಗಳಿಗೆ ಏನನ್ನು ಕಲಿಸುತ್ತಾರೆ ಎಂದು ಕಮೆಂಟ್​ ಮಾಡುವ ಮೂಲಕ ನೆಟ್ಟಿಗರು ಕಿಡಿಕಾರಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:18 − one =
Remember me
