ವಯನಾಡು:ದೇವರ ನಾಡು ಕೇರಳದ ವಯನಾಡಿನಲ್ಲಿ ಮಂಗಳವಾರ (ಜುಲೈ 30) ಭಾರಿ ಮಳೆಗೆ ಸಂಭವಿಸಿದ ಬೃಹತ್​ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಏರತ್ತಲೇ ಇದೆ. ಇದೀಗ ಸಾವಿನ ಸಂಖ್ಯೆ 360ಕ್ಕೆ ಏರಿಕೆಯಾಗಿದ್ದು, ಇನ್ನೂ ಮಣ್ಣಿನಡಿ ಹಾಗೂ ಅವಶೇಷಗಳಡಿ ಸಿಲುಕಿರುವ ಹಾಗೂ ಬದುಕುಳಿದಿರುವವರ ಪತ್ತೆಗಾಗಿ ನಿರಂತರವಾಗಿ ರಕ್ಷಣಾ ಕಾರ್ಯ ನಡೆಯುತ್ತಲೇ ಇದೆ. ಇನ್ನು ಭಾರತೀಯ ಸೇನೆಯೊಂದಿಗೆ ಕೈಜೋಡಿಸಿರುವ ರಕ್ಷಣಾ ಪಡೆ, ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡುತ್ತಿದೆ. ಈ ಮಧ್ಯೆ ಮೃತರನ್ನು ಪತ್ತೆಹಚ್ಚುವ ಸಲುವಾಗಿ ಇದೀಗ ಡಿಎನ್​ಎ ಮಾದರಿ ಸಂಗ್ರಹ ಆರಂಭವಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್​ ತಿಳಿಸಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ ನಿಂದ ರಾಜಭವನ ಅತಿಹೆಚ್ಚು ದುರ್ಬಳಕೆ: ಸಂಸದ ಬೊಮ್ಮಾಯಿ ಆರೋಪ
ವಯನಾಡಿನ ಚೂರಲ್‌ಮಲಾ ಮತ್ತು ಮುಂಡಕ್ಕೈನಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ ಮೃತಪಟ್ಟವರ ದೇಹ ಮತ್ತು ದೇಹದ ಭಾಗಗಳನ್ನು ಗುರುತಿಸಲು ಡಿಎನ್‌ಎ ಮಾದರಿ ಸಂಗ್ರಹವನ್ನು ಪ್ರಾರಂಭಿಸಲಾಗಿದೆ ಎಂದು ಪರಿಶೀಲನಾ ಸಭೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದರು. “ಇಲ್ಲಿಯವರೆಗೆ 49 ಡಿಎನ್‌ಎ ಸ್ಯಾಂಪಲ್​ಗಳನ್ನು ಸಂಗ್ರಹಿಸಲಾಗಿದೆ. ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲು ಒಟ್ಟು 149 ಆಂಬ್ಯುಲೆನ್ಸ್‌ಗಳನ್ನು ಏರ್ಪಡಿಸಲಾಗಿದೆ. ಶವಗಳನ್ನು ಸಂಗ್ರಹಿಸಲು 129 ಫ್ರೀಜರ್‌ಗಳು ಲಭ್ಯವಿದೆ” ಎಂದರು.
“ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏರಿಕೆಯಾಗುತ್ತಲೆ ಇದೆ. ಇದುವರೆಗೆ 221 ದೇಹಗಳು ಮತ್ತು 166 ಮೃತದೇಹದ ಭಾಗಗಳನ್ನು ವಶಪಡಿಸಿಕೊಳ್ಳಲಾಗಿದೆ. 380ಕ್ಕೂ ಹೆಚ್ಚು ಮರಣೋತ್ತರ ಪರೀಕ್ಷೆಗಳನ್ನು ನಡೆಸಲಾಗಿದೆ” ಎಂದರು. ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಕಿಡಿಕಾರಿದ ಆರೋಗ್ಯ ಸಚಿವೆ, “ಖಾಸಗಿ ಆಸ್ಪತ್ರೆಗಳಿಂದ ದತ್ತು ಪಡೆಯಲು ಮಕ್ಕಳ ಲಭ್ಯತೆ ಕುರಿತು ಸುಳ್ಳು ಮಾಹಿತಿ ಹರಡುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಖಡಕ್ ಎಚ್ಚರಿಕೆ ನೀಡಿದರು,(ಏಜೆನ್ಸೀಸ್).
ನಿವೃತ್ತಿ ಪಡೆಯಲಿರುವ ಗೋಲ್​ಕೀಪರ್​ ಪಿ.ಆರ್​ ಶ್ರೀಜೇಶ್​ ಭಾವುಕ; ಹಾಕಿ ಸ್ಟಿಕ್​ ಮೇಲೆ ಪತ್ನಿ ಹೆಸರು ಅರಳಿಸಿದ ದಿಗ್ಗಜ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:12 − eight =
Remember me
