ವಯನಾಡ್​:ಭೂ ಕುಸಿತ ಸಂಭವಿಸಿದ ವಯನಾಡ ಸ್ಥಳಗಳಲ್ಲಿ ಸಂತ್ರಸ್ತರ ಕಾಳಜಿ ಕೇಂದ್ರಗಳಾಗಿ ಶಾಲೆಗಳು ಪರಿವರ್ತಿತವಾಗಿದ್ದು, ಅಲ್ಲಿ ಶೀಘ್ರವೇ ತರಗತಿಗಳನ್ನು ಪುನರಾರಂಭಿಸಲಾಗುವುದು ಎಂದು ಕೇರಳ ಶಿಕ್ಷಣ ಮತ್ತು ಕಾರ್ಮಿಕ ಸಚಿವ ವಿ. ಶಿವನ್ ಕುಟ್ಟಿ ತಿಳಿಸಿದ್ದಾರೆ.
ಇದನ್ನೂ ಓದಿ:ಹಾನಗಲ್ಲ ಗ್ಯಾಂಗ್ ರೇಪ್ ಪ್ರಕರಣ: 10 ಮಂದಿ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು
ಅನೇಕ ಶಾಲೆಗಳನ್ನು ಕಾಳಜಿ ಶಿಬಿರಗಳಾಗಿ ಪರಿವರ್ತಿಸಲಾಗಿದೆ. ಶಿಕ್ಷಕರು, ಪೋಷಕರು ಮತ್ತು ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸಲಾಗಿದ್ದು, 10-20 ದಿನಗಳಲ್ಲಿ ತರಗತಿಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ತರಗತಿಗಳ ಆರಂಭಕ್ಕೂ ಮುನ್ನ ಶಾಲೆಗಳಿಗೆ ಮೂಲಸೌಕರ್ಯಗಳನ್ನು ಒದಗಿಸಬೇಕಾದ ಅಗತ್ಯವಿದೆ. ಭೂಕುಸಿತ ಪೀಡಿತ ಪ್ರದೇಶಗಳಲ್ಲಿನ ಮಕ್ಕಳ ಶಿಕ್ಷಣಕ್ಕೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿರ್ದೇಶನದ ನೀಡಿದ್ದಾರೆ ಎಂದು ಹೇಳಿದರು.
ಭೂಕುಸಿತದಲ್ಲಿ 36 ಮಕ್ಕಳು ಸಾವನ್ನಪ್ಪಿದ್ದಾರೆ. 17 ಮಂದಿ ಮಕ್ಕಳು ನಾಪತ್ತೆಯಾಗಿದ್ದಾರೆ. 316 ಮಂದಿಯನ್ನು ಕಾಳಜಿ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಮತ್ತು ಐವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಾಮಾನ್ಯ ಶಿಕ್ಷಣ ಇಲಾಖೆ ತಿಳಿಸಿದೆ.  ದುರಂತದಲ್ಲಿ 276 ವಿದ್ಯಾರ್ಥಿಗಳು ಪಠ್ಯಪುಸ್ತಕಗಳನ್ನು ಕಳೆದುಕೊಂಡಿದ್ದಾರೆ. 438 ವಿದ್ಯಾರ್ಥಿಗಳು ಇತರ ಅಧ್ಯಯನ ಸಾಮಗ್ರಿಗಳನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದೆ.
ಭೂಕುಸಿತದಲ್ಲಿ ಗಾಯಗೊಂಡ ಕಾರ್ಮಿಕರು ಮತ್ತು ಸಾವನ್ನಪ್ಪಿದ ಕಾರ್ಮಿಕರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲು ಕಾರ್ಮಿಕ ಮಂಡಳಿ ನಿರ್ಧರಿಸಿದೆ ಎಂದು ಸಚಿವರು ಹೇಳಿದರು. ವಲಸೆ ಕಾರ್ಮಿಕರಿಗೆ ಚಿಕಿತ್ಸೆ ಸೇರಿದಂತೆ ಆರ್ಥಿಕ ನೆರವು ನೀಡಲಾಗುವುದು. ಶಿವನಕುಟ್ಟಿ ಮಾತನಾಡಿ, ಭೂಕುಸಿತದಿಂದ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ಮೊದಲ ಕಂತಾಗಿ 1 ಲಕ್ಷ ರೂ. ನೀಡಲಾಗುವುದು ಎಂದು ಹೇಳಿದ್ದಾರೆ.
ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಯೋಗಿ ಆದಿತ್ಯನಾಥ್‌!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
