ಬೆಂಗಳೂರು:ನಿರಂತರವಾಗಿ ಸುರಿದ ಮಳೆಗೆ ಕೇರಳದ ವಯನಾಡಿನಲ್ಲಿ ಭೂಕುಸಿತ ಉಂಟಾಗಿದ್ದು, ಮಣ್ಣಿನಡಿಯಲ್ಲಿ ಸಿಲುಕಿ 41 ಮಂದಿ ಮೃತಪಟ್ಟಿದ್ದಾರೆ. ಘಟನೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಕೇರಳದ ವಯನಾಡು ಬಳಿ ಉಂಟಾಗಿರುವ ಭೀಕರ ಭೂಕುಸಿತದಿಂದ ಅನೇಕರು ಧಾರುಣ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಇನ್ನು ಅನೇಕರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ ಎಂದರು.
ಇದನ್ನೂ ಓದಿ:ವಯನಾಡು ಭೂಕುಸಿತ: ಏರುತ್ತಲೇ ಇದೆ ಸಾವಿನ ಸಂಖ್ಯೆ, 41 ಮಂದಿ ದುರ್ಮರಣ, ಮುಗಿಲು ಮುಟ್ಟಿದ ಆಕ್ರಂದನ
“ಪ್ರಧಾನಿ ನರೇಂದ್ರ ಮೋದಿ ಅವರು ತುರ್ತಾಗಿ ಸ್ಪಂದಿಸಿದ್ದು, ಕೇರಳದ ಮುಖ್ಯಮಂತ್ರಿಗಳ ಜತೆ ಮಾತನಾಡಿ, ರಕ್ಷಣಾ ಕಾರ್ಯಗಳಿಗೆ ಸಕಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಮಾನ್ಯ ಪ್ರಧಾನಿಗಳನ್ನು ನಾನು ಅಭಿನಂದಿಸುತ್ತೇನೆ. ದುರಂತದಲ್ಲಿ ಸಾವನ್ನಪ್ಪಿದವರಿಗೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಎಲ್ಲಾ ಕುಟುಂಬಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಂತಾಪ ಸೂಚಿಸಿದರು.
“ಕೇರಳ ಸೇರಿ ದೇಶದೆಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ, ನೆರೆ ಉಂಟಾಗಿದೆ. ಕರ್ನಾಟಕದಲ್ಲಿಯೂ ಅನೇಕ ಜಿಲ್ಲೆಗಳಲ್ಲಿ ಇದೇ ಸಮಸ್ಯೆ ಸೃಷ್ಟಿಯಾಗಿದೆ. ಈ ಬಗ್ಗೆ ಸಾರ್ವಜನಿಕರು ಬಹಳ ಎಚ್ಚರಿಕೆ ವಹಿಸಬೇಕು ಹಾಗೂ ರಾಜ್ಯ ಸರಕಾರವೂ 24X7 ರಕ್ಷಣಾ ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿಟ್ಟು, ಅಪಾಯವಿರುವ ಸ್ಥಳಗಳಲ್ಲಿ ಅಧಿಕಾರಿಗಳನ್ನು ನಿಯೋಜಿಸಬೇಕು” ಎಂದು ಸಲಹೆ ನೀಡಿದರು.
ಟೀಮ್ ಇಂಡಿಯಾ ಹೆಡ್​ ಕೋಚ್​ಗೆ ಹೊಸ ಪಟ್ಟ! ಗೌತಿ ಕುರಿತು ಆ್ಯಂಡಿ ಫ್ಲವರ್​ ಗುಣಗಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
