ನವದೆಹಲಿ:ಪಶ್ಚಿಮಬಂಗಾಳದಲ್ಲಿ ಜನರು ಸರಸ್ವತಿ ಪೂಜೆ ಸಂಭ್ರಮ ಆಚರಿಸಲು ಇಲ್ಲಿನ ಸರ್ಕಾರ ಅವಕಾಶ ನೀಡುತ್ತಿಲ್ಲ ಎಂದು ಹೂಗ್ಲಿ ಲೋಕಸಭಾ ಕ್ಷೇತ್ರದ ಸಂಸದೆ, ಬಂಗಾಳಿ ನಟಿ ಲಾಕೆಟ್​ ಚಟರ್ಜಿ ಆರೋಪ ಮಾಡಿದ್ದಾರೆ.
ಸಂಸತ್ತಿನ ಶೂನ್ಯವೇಳೆಯಲ್ಲಿ ಈ ವಿಚಾರವನ್ನು ಅವರು ಪ್ರಸ್ತಾಪಿಸಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಒಂದು ಸಮುದಾಯದ ಓಲೈಕೆಯ ರಾಜಕಾರಣ ಮಾಡುತ್ತಿದ್ದಾರೆ. ಹಾಗಾಗಿ ರಾಜ್ಯದ ಜನರಿಗೆ ಸರಸ್ವತಿ ಪೂಜೆ ಮಾಡಲು ಅವಕಾಶ ಕೊಡುತ್ತಿಲ್ಲ. ಅಷ್ಟೇ ಅಲ್ಲ ಸಿಎಎ ವಿರೋಧಿ ಪ್ರತಿಭಟನೆಯನ್ನೂ ಮಮತಾ ಬ್ಯಾನರ್ಜಿ ರಾಜಕೀಯ ಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಅದಾದ ಬಳಿಕ ಟಿಡಿಪಿ ಸಂಸದ ಜಯದೇವ್​ ಗಲ್ಲಾ ಅವರು ತಮ್ಮ ರಾಜ್ಯ ಆಂಧ್ರಪ್ರದೇಶದಲ್ಲಿ ಮೂರು ರಾಜಧಾನಿ ನಿರ್ಮಾಣ ಮಾಡುವುದನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವವರ ಮೇಲೆ ಸರ್ಕಾರ ಲಾಠಿ ಚಾರ್ಜ್ ಮಾಡಿಸುತ್ತಿದೆ ಎಂದು ಅಲವತ್ತುಕೊಂಡಿದ್ದಾರೆ. (ಪಿಟಿಐ)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + seven =
Remember me
