ಮುಂಬೈ:ಒಂದೆಡೆ ಕರೊನಾ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದರೆ ಇನ್ನೊಂದೆಡೆ ಕರೊನಾ ಲಸಿಕೆ ಅಭಿಯಾನವೂ ಭರದಿಂದ ಸಾಗಿದೆ. ಆದರೆ ಹಲವೆಡೆ ಲಸಿಕೆ ಪೂರೈಕೆ ಸರಿಯಾದ ಪ್ರಮಾಣದಲ್ಲಿ ಆಗುತ್ತಿಲ್ಲ ಎನ್ನುವ ದೂರೂ ಇದೆ. ಮಹಾನಗರಿ ಮುಂಬೈ ನಿವಾಸಿಗಳಿಗೆ ಒಂದೇ ದಿನದಲ್ಲಿ ಲಸಿಕೆ ನೀಡುವ ಸಾಮರ್ಥ್ಯ ನಮ್ಮಲ್ಲಿದೆ ಎಂದು ಮುಂಬೈ ಮೇಯರ್ ಕಿಶೋರಿ ಪೆಡ್ನೆಕರ್ ತಿಳಿಸಿದ್ದಾರೆ. ಆದರೆ ಆ ಪ್ರಮಾಣದ ಲಸಿಕೆ ಪೂರೈಕೆ ಆಗುತ್ತಿಲ್ಲವೆಂದು ಅವರು ಕೇಂದ್ರ ಸರ್ಕಾರದ ಕಾಲೆಳೆದಿದ್ದಾರೆ.
ಒಂದು ವೇಳೆ ಕೇಂದ್ರ ಸರ್ಕಾರದಿಂದ ನಮ್ಮ ಜಿಲ್ಲೆಗೆ ಪೂರ್ತಿ ಪ್ರಮಾಣದ ಲಸಿಕೆ ಪೂರೈಕೆಯಾಗಿದ್ದೇ ಹೌದಾದಲ್ಲಿ ನಾವು ಒಂದೇ ದಿನದಲ್ಲಿ ಲಸಿಕೆ ಅಭಿಯಾನ ಮಾಡಲು ಸಿದ್ಧರಿದ್ದೇವೆ. 24 ಗಂಟೆಗಳ ಕಾಲ ಮೂರು ಶಿಫ್ಟ್ನಲ್ಲಿ ಕೆಲಸ ಮಾಡಿ ಜಿಲ್ಲೆಯ ಪ್ರತಿಯೊಬ್ಬ ನಾಗರಿಕನಿಗೆ ಲಸಿಕೆ ನೀಡುತ್ತೇವೆ ಎಂದು ಕಿಶೋರಿ ಮಾಧ್ಯಮದವರಿಗೆ ತಿಳಿಸಿದ್ದಾರೆ.
ಮಹಾರಾಷ್ಟ್ರ ಮಾತ್ರವಲ್ಲದೆ ಹಲವು ರಾಜ್ಯಗಳಲ್ಲಿ ಲಸಿಕೆ ಪೂರೈಕೆ ಕಡಿಮೆಯಿರುವುದಾಗಿ ವರದಿಯಾಗಿದೆ. ಕಳೆದ ಒಂದು ವಾರದಿಂದ ಮುಂಬೈನ ಕರೊನಾ ಸೋಂಕಿತರ ಸಂಖ್ಯೆಯಲ್ಲೂ ಇಳಿಕೆ ಕಂಡುಬಂದಿದೆ. ಪ್ರತಿದಿನ 4 ಸಾವಿರಕ್ಕೂ ಕಡಿಮೆ ಪ್ರಕರಣ ದಾಖಲಾಗುತ್ತಿದೆ. (ಏಜೆನ್ಸೀಸ್)

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 7 =
Remember me
