ಮುಂಬೈ: ಕರೊನಾ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಹತ್ತನೇ ತರಗತಿ ಪರೀಕ್ಷೆಗಳನ್ನು (ಬೋರ್ಡ್​​ ಎಕ್ಸಾಮ್ಸ್​) ರದ್ದು ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಇಂದು ಸಂಜೆ ರಾಜ್ಯವನ್ನುದ್ದೇಶಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಕರೊನಾ ತಡೆಯಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
12 ನೇ ತರಗತಿಯ ಪರೀಕ್ಷೆಗಳನ್ನೂ ರದ್ದು ಮಾಡಬೇಕೆ ಬೇಡವೇ ಎಂಬುದರ ಬಗ್ಗೆ ನಾವು ಕೇಂದ್ರ ಸರ್ಕಾರದ ನಿರ್ಧಾರದತ್ತ ನೋಡುತ್ತಿದ್ದೇವೆ. 12 ನೇ ತರಗತಿ ಮಹತ್ವದ್ದಾಗಿರುವುದರಿಂದ ಪರೀಕ್ಷೆ ವಿಷಯದಲ್ಲಿ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ಒಂದೇ ನಿಯಮ ಅನ್ವಯವಾಗುವಂತೆ ನಿರ್ಧಾರ ತೆಗೆದುಕೊಂಡರೆ ಉತ್ತಮ ಎಂಬುದು ನಮ್ಮ ಅನಿಸಿಕೆಯಾಗಿದೆ ಎಂದಿದ್ದಾರೆ.
ಸೂಕ್ತ ಸಮಯದಲ್ಲಿ ಲಾಕ್​ಡೌನ್ ಜಾರಿ ಮಾಡಿದ್ದರಿಂದ ಕೋವಿಡ್ ಸೋಂಕು ವ್ಯಾಪಕವಾಗಿ ಪಸರಿಸುವುದನ್ನು ತಡೆಗಟ್ಟಲು ಸಾಧ್ಯವಾಯಿತು. ಇದರಿಂದ ನಮ್ಮ ಹಳ್ಳಿ, ಜಿಲ್ಲೆಗಳನ್ನು ರಕ್ಷಿಸಿಕೊಳ್ಳಲು ಅನುಕೂಲ ಆಯಿತು. ಮುಂಗಾರು ಆರಂಭವಾಗುತ್ತಿರುವುದರಿಂದ ರೈತರಿಗೆ ಲಾಕ್​ಡೌನ್​ನಿಂದ ವಿನಾಯಿತಿ ನೀಡಲಾಗುವುದು ಎಂದು ಸಿಎಂ ಠಾಕ್ರೆ ಹೇಳಿದರು.
ಕರೊನಾ ಮೂರನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ತಜ್ಞರು ಹಾಗೂ ನುರಿತ ವೈದ್ಯರನ್ನೊಳಗೊಂಡ ಟಾಸ್ಕ್​ಫೋರ್ಸ್​ ರಚಿಸಲಾಗುವುದು ಎಂದು ಠಾಕ್ರೆ ಇದೇ ವೇಳೆ ತಿಳಿಸಿದರು.
ರಾಜ್ಯದಲ್ಲಿ ಈವರೆಗೆ 39 ಮಂದಿ ಬ್ಲ್ಯಾಕ್​ ಫಂಗಸ್​ಗೆ ಬಲಿ; ಸಾವಿರಕ್ಕೂ ಹೆಚ್ಚಾಗಿದೆ ಪ್ರಕರಣ

ಕಾರಾಗೃಹದ 50 ಸಾವಿರ ಕೈದಿಗಳಿಗೆ ಕರೊನಾ ಲಸಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 9 =
Remember me
