ಭುವನೇಶ್ವರ:ಜನರ ತೀರ್ಪನ್ನು ಗೌರವಿಸುತ್ತೇನೆ ಎಂದು ಬಿಜೆಡಿ ಮುಖ್ಯಸ್ಥ ನವೀನ್ ಪಟ್ನಾಯಕ್ ಅವರು ಶನಿವಾರ ಹೇಳಿದರು. ಅಲ್ಲದೆ ಸಾಧ್ಯವಿರುವ ಎಲ್ಲಾ ವಿಧಗಳಲ್ಲಿ ಒಡಿಶಾದ ಜನರ ಸೇವೆ ಮಾಡುವುದನ್ನು ಮುಂದುವರಿಸುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ:ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ: ನಾಲ್ವರ ಬಂಧನ
ಪಿಟಿಐ ಸುದ್ದಿಸಂಸ್ಥೆ ಜೊತೆ ಮಾತನಾಡಿರುವ ಅವರು, ಬಿಜೆಡಿ ಸರ್ಕಾರ ಮತ್ತು ಪಕ್ಷದ ಬಗ್ಗೆ ನನಗೆ ಹೆಮ್ಮೆ ಇದೆ. “ನಾವು ನಮ್ಮ ಪ್ರಯತ್ನ ಮಾಡಿದ್ದೇವೆ. ಅತ್ಯುತ್ತಮವಾದ ಕೆಲಸವನ್ನು ಮಾಡಿದ್ದೇವೆ. ನಮ್ಮ ಸರ್ಕಾರ ಮತ್ತು ಪಕ್ಷದ ಬಗ್ಗೆ ನಮಗೆ ಅಪಾರ ಹೆಮ್ಮೆ ಇದೆ. ಪ್ರಜಾಪ್ರಭುತ್ವದಲ್ಲಿ, ನೀವು ಒಂದೋ ಸೋಲಬೇಕು ಅಥವಾ ಗೆಲ್ಲಬೇಕು ಎಂದು ಅವರು ತಿಳಿಸಿದರು.
“ಸುದೀರ್ಘ ಅವಧಿಯ ಬಳಿಕ ನಾವು ಸೋಲನ್ನು ಅನುಭವಿಸಿದ್ದೇವೆ. ಜನರ ತೀರ್ಪನ್ನು ಬಹಳ ಗೌರವದಿಂದ ಸ್ವೀಕರಿಸಬೇಕಿದೆ. ಒಡಿಶಾದ 4.5 ಕೋಟಿ ಜನರು ನನ್ನ ಕುಟುಂಬ ಎಂದು ನಾನು ಹಲವು ಬಾರಿ ಹೇಳಿದ್ದೇನೆ. ಸಾಧ್ಯವಿರುವ ಎಲ್ಲಾ ವಿಧಗಳಲ್ಲಿ ಅವರ ಸೇವೆ ಮಾಡುವುದನ್ನು ಮುಂದುವರೆಯುತ್ತೇನೆ ಎಂದು ಭರವಸೆ ವ್ಯಕ್ತಪಡಿಸಿದರು.
ಒಡಿಶಾದ ಜನರು ನನಗೆ ಪದೇ ಪದೇ ಆಶೀರ್ವಾದವನ್ನು ಮಾಡಿದ್ದಾರೆ. ಅವರಿಗೆ ನಾನು ಋಣಿ ಎಂದು ಮಾಜಿ ಸಿಎಂ ಪಟ್ನಾಯಕ್​ ಹೇಳಿದರು.ಸತತ 24 ವರ್ಷಗಳ ಕಾಲ ಒಡಿಶಾದ ಮುಖ್ಯಮಂತ್ರಿಯಾಗಿದ್ದ ನವೀನ್ ಪಟ್ನಾಯಕ್​, ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೋಲು ಅನುಭವಿಸಿ ಅಧಿಕಾರ ಕಳೆದುಕೊಂಡಿದ್ದರು. 147 ಸದಸ್ಯ ಬಲದ ವಿಧಾನಸಭೆಯಲ್ಲಿ 78 ಸ್ಥಾನಗಳನ್ನು ಗೆಲ್ಲುವ ಮೂಲಕ ಪಟ್ನಾಯಕ್ ನೇತೃತ್ವದ ಪಕ್ಷವು 51 ಸ್ಥಾನಗಳನ್ನು ಗೆದ್ದುಕೊಂಡಿತು, ಕಾಂಗ್ರೆಸ್ ಕೇವಲ 14 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು.
ಸಿಕ್ಕಿಂ ಮುಖ್ಯಮಂತ್ರಿಯಾಗಿ ಜೂನ್​ 10ಕ್ಕೆ ತಮಾಂಗ್ ಪ್ರಮಾಣ ವಚನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
