ಚೆನ್ನೈ:ಸನಾತನ ಧರ್ಮದ ವಿರುದ್ಧ ಹೇಳಿಕೆ ನೀಡಿ ಈಗಾಗಲೇ ಸಾಕಷ್ಟು ವಿರೋಧ ಎದುರಿಸಿದ್ದ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಇದೀಗ ಮತ್ತೊಮ್ಮೆ ನಾಲಗೆ ಹರಿಬಿಟ್ಟಿದ್ದು, ನಾವು ಸನಾತನ ಧರ್ಮವನ್ನು ಎಂದೆಂದಿಗೂ ವಿರೋಧಿಸುತ್ತೇವೆ ಎಂದು ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪುತ್ರ, ಕ್ರೀಡಾ ಸಚಿವರೂ ಆಗಿರುವ ಉದಯನಿಧಿ ಸ್ಟಾಲಿನ್ ಇಂದು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡುತ್ತ ಈ ಹೇಳಿಕೆ ನೀಡಿದ್ದಾರೆ. ಸನಾತನ ಧರ್ಮದ ವಿರುದ್ಧ ಹೇಳಿಕೆ ನೀಡಿದ್ದರೂ ಉದಯನಿಧಿ ಮೇಲೆ ಯಾವುದೇ ಕ್ರಮಕೈಗೊಳ್ಳದ ಪೊಲೀಸರ ವಿರುದ್ಧ ಮದ್ರಾಸ್ ಹೈಕೋರ್ಟ್ ವಾಗ್ದಾಳಿ ನಡೆಸಿದ್ದಕ್ಕೆ ಸಂಬಂಧಿಸಿದ್ದಂತೆ ಪ್ರತಿಕ್ರಿಯಿಸುತ್ತ ಅವರು ಈ ಹೇಳಿಕೆ ನೀಡಿದ್ದರು.
ಇದನ್ನೂ ಓದಿ:ಸನಾತನ ಧರ್ಮವನ್ನು ತೊಡೆದು ಹಾಕುವ ಅಗತ್ಯವಿದೆ: ಉದಯನಿಧಿ ಸ್ಟಾಲಿನ್
ನಾವು ಸನಾತನ ಧರ್ಮದ ಬಗ್ಗೆ ಹಲವು ವರ್ಷಗಳಿಂದ ಮಾತನಾಡುತ್ತಿದ್ದೇವೆ. ಸನಾತನ ಧರ್ಮ ನೂರಾರು ವರ್ಷಗಳಷ್ಟು ಹಿಂದಿನದ್ದು, ಅದನ್ನು ಶಾಶ್ವತವಾಗಿ ವಿರೋಧಿಸಬೇಕು ಎಂದು ಉದಯನಿಧಿ ಹೇಳಿದ್ದಾರೆ. ನಾನು ಏನು ಹೇಳಿದ್ದೇನೋ ಅದು ಸರಿ ಇದೆ, ಅದಕ್ಕಾಗಿ ಕಾನೂನು ಕ್ರಮ ಎದುರಿಸಲು ಸಿದ್ಧನಿದ್ದೇನೆ ಹೊರತು ತನ್ನ ಹೇಳಿಕೆಯನ್ನು ಬದಲಿಸಿಕೊಳ್ಳುವುದಿಲ್ಲ ಎಂದೂ ಅವರು ಸಮರ್ಥಿಸಿಕೊಂಡಿದ್ದಾರೆ.
ಇದನ್ನೂ ಓದಿ:ಉದಯನಿಧಿ ಸ್ಟಾಲಿನ್ ಮೇಲೆ ಪೊಲೀಸರು ಕ್ರಮ ಕೈಗೊಳ್ಳಬೇಕಿತ್ತು : ಮದ್ರಾಸ್​ ಹೈಕೋರ್ಟ್
ಸನಾತನ ಧರ್ಮ ಕರೊನಾ, ಡೆಂಘೆ, ಸೊಳ್ಳೆಯಂತೆ. ಅದನ್ನು ತೊಲಗಿಸಬೇಕು ಎಂದು ಈ ಹಿಂದೆ ಉದಯನಿಧಿ ನೀಡಿದ್ದ ಹೇಳಿಕೆ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಅದಾಗ್ಯೂ ಅವರು ಇದೀಗ ಇನ್ನೊಮ್ಮೆ ಸನಾತನ ಧರ್ಮದ ವಿರುದ್ಧ ಹಗುರವಾಗಿ ಮಾತನಾಡಿರುವುದು ಮತ್ತೆ ವಿವಾದ ಸೃಷ್ಟಿಸುವ ಸುಳಿವನ್ನು ನೀಡಿದೆ.
ನಿಮ್ಮಂಥ ನಾಯಕರಿರುವ ದೇಶದಲ್ಲಿ ನಾನು ಸುರಕ್ಷಿತ: ನಟಿ ರಶ್ಮಿಕಾ ಮಂದಣ್ಣ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 2 =
Remember me
