Weather Forecast Today: ದೇಶದ ಕೆಲವು ರಾಜ್ಯಗಳಲ್ಲಿ ಮಳೆಯಿಂದಾಗಿ ಹವಾಮಾನದ ಸ್ವರೂಪ ಬದಲಾಗಿದೆ. ಕಳೆದ ಕೆಲವು ದಿನಗಳಿಂದ ಉತ್ತರ ಪ್ರದೇಶದ ಕೆಲವು ನಗರಗಳಲ್ಲಿ ಮಳೆಯಿಂದ ಭಾರೀ ಅನಾಹುತ ಸೃಷ್ಟಿಯಾಗಿದೆ.
ಬಹಳ ದಿನಗಳ ಬಳಿಕ ಮುಂಗಾರು ಮತ್ತೆ ಚುರುಕಾಗಿದೆ. ಪ್ರಸ್ತುತ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಸಕ್ರಿಯವಾಗಿದ್ದು, ಇದರಿಂದಾಗಿ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇಂದು ಕೂಡ ಹವಾಮಾನ ಇಲಾಖೆ ಹಲವೆಡೆ ಭಾರಿ ಮಳೆಯಾಗುವ ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆ ಪ್ರಕಾರ, ಶ್ಚಿಮ ಬಂಗಾಳ, ಒಡಿಶಾ, ಬಿಹಾರ ಮತ್ತು ಈಶಾನ್ಯ ಭಾರತದ ಹಲವು ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ. ಅಷ್ಟೇ ಅಲ್ಲದೆ, ಅನೇಕ ಭಾಗಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.
ಜಾರ್ಖಂಡ್, ಕೇರಳ, ಕರಾವಳಿ ಕರ್ನಾಟಕ, ಒಳನಾಡು ಕರ್ನಾಟಕ, ತೆಲಂಗಾಣ, ಕೊಂಕಣ, ಗೋವಾ, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಹಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕ ಹವಾಮಾನ ಪರಿಸ್ಥಿತಿ ಹೀಗಿದೆರಾಜ್ಯದ ಕರಾವಳಿ ಭಾಗ ಸೇರಿದಂತೆ ಅನೇಕ ಭಾಗಗಳಲ್ಲಿ ಮುಂಗಾರು ಪ್ರಾರಂಭವಾಗಿದೆ. ಕೆಲವೆಡೆ ಧಾರಾಕಾರ ಮಳೆಯಾಗಿದ್ದರೆ, ಇನ್ನೂ ಕೆಲವೆಡೆ ಮಳೆ ಸಿಂಚನವಾಗಿದೆ. ಮುಖ್ಯವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳವರೆಗೆ ಭಾರೀಯಿಂದ ಸಾಧಾರಾಣ ಮಳೆಯಾಗುವ ಸಾಧ್ಯತೆ ಇದೆ.ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ, ಕುಮಟಾ, ಅಂಕೋಲಾ, ಶಿರಸಿ ತಾಲೂಕಿನ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 6 =
Remember me
