ಬೆಂಗಳೂರು ಸೇರಿ ರಾಜ್ಯದಲ್ಲಿ ವರುಣ ಅಬ್ಬರಿಸಿ ಬೊಬ್ಬೆರೆಯಲಿದ್ದಾನೆ. ಕರಾವಳಿಯ ಹಲವು ಜಿಲ್ಲೆಗಳಲ್ಲಿ ಜೋರು ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ವರುಣ ಅಬ್ಬರಿಸಲಿದ್ದಾನೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಮಳೆಯಾಗಲಿದೆ.ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ನವೆಂಬರ್ 19 ರಿಂದ 3 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗುವ ಸಾಧ್ಯತೆಗಳಿದೆ. ನವೆಂಬರ್ 19 ರಿಂದ 22 ರವರೆಗೂ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಹಿಂಗಾರು ಚುರುಕುಗೊಂಡಿದ್ದು, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಬೆಂಗಳೂರಿನಲ್ಲಿ ಸಂಜೆ ಸಮಯ ಮೋಡಕವಿದ ವಾತಾವರಣ ನಿರ್ಮಾಣವಾಗಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 2 =
Remember me
