ಸಿಲಿಕಾನ್​ ಸಿಟಿ ಬೆಂಗಳೂರು ನಿನ್ನೆಯಿಂದಲೂ ತಂಪು ತಂಪು ಕೂಲ್​​ ಕೂಲಾ ಆಗಿರೋದಕ್ಕೆ ಕಾರಣ ಮಳೆ. ಇಂದೂ ಸಹ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದ ಮಧ್ಯ ರಾತ್ರಿಯವರೆಗೂ ಭಾರೀ ಮಳೆ ಸುರಿದಿದೆ.
ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ. ಇಂದೂ ಕೂಡಾ ಬೆಂಗಳೂರಿನಲ್ಲಿ ಮಳೆ ಹೆಚ್ಚಾಗಲಿದ್ದು, ಲ್ಲೆಡೆ ಟ್ರಾಫಿಕ್ ಜಾಮ್ ಉಂಟಾಗಬಹುದು. ವಾಹನ ಸವಾರರಿಗೆ ಕಷ್ಟಪಡುವಂತಹ ಸ್ಥಿತಿ ನಿರ್ಮಾಣವಾಗಬಹುದು.
ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಭರ್ಜರಿ ಮಳೆಯಾಗಲಿದ್ದು, ಕೋಲಾರದಲ್ಲೂ ಕಳೆದೆರೆಡು ದಿನಗಳಿಂದ ವರುಣ ಅಬ್ಬರಿಸುತ್ತಿದ್ದಾನೆ.
ಆಕ್ಟೋಬರ್​​ 10 ರಂದು ಯಲ್ಲೋ ಅಲರ್ಟ್​​​ ಘೋಷಿಸಲಾಗಿದ್ದು, ಜನರು ಇನ್ನೂ ಕೆಲ ದಿನಗಳ ಕಾಲ ಎಚ್ಚರಿಕೆಯಿಂದ ಇರಬೇಕೆಂದು ಹವಾಮಾನ ಇಲಾಖೆಗೆ ಸೂಚನೆ ನೀಡಿದೆ.
ಈ ಜಿಲ್ಲೆಗಳಲ್ಲಿ ಉತ್ತಮ ಮಳೆ ಸಾಧ್ಯತೆ:ಕೊಡಗು, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ವ್ಯಾಪಕವಾದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ರಾಮನಗರ, ತುಮಕೂರು ಮತ್ತು ಬೆಂಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದು ಸ್ವಲ್ಪ ಸಮಾಧಾನ ತರಿಸಿದೆ. ಮಳೆ ಹೀಗೆ ಮುಂದುವರೆದರೆ ಕಾವೇರಿ ಜಲಾನಯ ವ್ಯಾಪ್ತಿಯಲ್ಲಿರುವ ಜಲಾಶಯಗಳ ಒಳಹರಿವು ಹೆಚ್ಚಾಗಲಿದ್ದು ಸಂಕಷ್ಟ ಕಡಿಮೆಯಾಗಲಿದೆ.
ಅಕ್ಟೋಬರ್ 9ರಿಂದ 22ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಪೂರಕ ಎನ್ನುವಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮತ್ತೆ ಶುರುವಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
