ಕೋಲ್ಕತ:ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ 294 ಸ್ಥಾನಗಳ ಮತಎಣಿಕೆ ಕಾರ್ಯ ಭರದಿಂದ ಸಾಗುತ್ತಿದ್ದು, ಈ ಮಧ್ಯೆ ಕಾಂಗ್ರೆಸ್​ ಅಭ್ಯರ್ಥಿಯ ಏಜೆಂಟ್​ ಒಬ್ಬರು ಮತಎಣಿಕೆ ಕೇಂದ್ರದಲ್ಲೇ ಪ್ರಜ್ಞೆ ತಪ್ಪಿಬಿದ್ದಿರುವುದು ಆತಂಕಕ್ಕೆ ಕಾರಣವಾಗಿದೆ.
ಉತ್ತರ 24 ಪರಗಣ ಜಿಲ್ಲೆಯ ಪನಿಹಟಿ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ತಾಪಸ್​ ಮಜುಮ್ದರ್​ ಅವರ ಏಜೆಂಟ್​ ಗೋಪಾಲ್​ ಸೋಮ್​ ಅವರು ಮತಎಣಿಕೆ ನಡುವೆಯೇ ಪ್ರಜ್ಞೆ ಕಳೆದುಕೊಂಡು ಕುಸಿದುಬಿದ್ದರು. ತಕ್ಷಣ ಅವರನ್ನು ಆಂಬ್ಯುಲೆನ್ಸ್​ ಸಹಾಯದ ಮೂಲಕ ಆಸ್ಪತ್ರೆಗೆ ದಾಖಲಿಸಲಾಯಿತು.
ಸದ್ಯದ ಟ್ರೆಂಡ್​ ಪ್ರಕಾರ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 11 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಟಿಎಂಸಿ 21 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಹೈವೋಲ್ಟೇಜ್​ ಕ್ಷೇತ್ರ ನಂದಿಗ್ರಾಮದಲ್ಲಿ ಹಾಲಿ ಸಿಎಂ ಮಮತಾ ಬ್ಯಾನರ್ಜಿಗೆ ಭಾರಿ ಹಿನ್ನಡೆ ಆಗಿದ್ದು, ಎದುರಾಳಿ ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
West Bengal: Gopal Som, a counting agent of Congress candidate from Panihati (North 24 Parganas), Tapas Majumder, was taken to a hospital after he fell unconscious at the counting centre.pic.twitter.com/uCpeJxuF11
— ANI (@ANI)May 2, 2021

LIVE| ಪಂಚರಾಜ್ಯ ಚುನಾವಣಾ ಫಲಿತಾಂಶದ ನೇರಪ್ರಸಾರ…

ಕೇರಳದ ಪಲಕ್ಕಾಡ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮೆಟ್ರೋಮ್ಯಾನ್​ ಇ. ಶ್ರೀಧರನ್​ ಮುನ್ನಡೆ

ಪರ್ಯಾಯ ಚಿತ್ರಗಳ ಪಿತಾಮಹ ಸತ್ಯಜಿತ್ ರೇ; ಇಂದು ಬರ್ತ್​ಡೇ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − five =
Remember me
