ಕೋಲ್ಕತ್ತ:ರಾಜ್ಯದ ಎಲ್ಲ ಶಿಕ್ಷಕರನ್ನು ಅವರವರ ಜಿಲ್ಲೆಗಳಿಗೆ ವರ್ಗಾಯಿಸಲು ನಿರ್ಧರಿಸಲಾಗಿದೆ ಎಂದು ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಸಮಾಜ ಮತ್ತು ದೇಶ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಹಿರಿದು. ಹಾಗಾಗಿ ಅವರ ಕೊಡುಗೆಗೆ ಕೃತಜ್ಞತೆ ವ್ಯಕ್ತಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸರಸ್ವತಿ ಪೂಜೆ ಹಿನ್ನೆಲೆಯಲ್ಲಿ ಈ ಐತಿಹಾಸಿಕ ನಿರ್ಣಯ ಮಾಡಲಾಗಿದೆ. ಇದರಿಂದ ಶಿಕ್ಷಕರು ತಮ್ಮ ಕುಟುಂಬವನ್ನು ನೋಡಿಕೊಳ್ಳಬಹುದು. ಮತ್ತು ಶಾಂತ ಚಿತ್ತದಿಂದ ಕಾರ್ಯ ನಿರ್ವಹಿಸಬಹುದು. ಎಲ್ಲ ಶಿಕ್ಷಕರಿಗೂ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಡಿಸೆಂಬರ್​ 2018ರಲ್ಲಿ ಸರ್ಕಾರವು ಶಿಕ್ಷಕರ ವರ್ಗಾವಣೆಯನ್ನು ರದ್ದುಗೊಳಿಸಿ ಆದೇಶಿಸಿತ್ತು. ಈ ಆದೇಶವು ಸರ್ಕಾರಿ ಮತ್ತು ಸರ್ಕಾರ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ಅನ್ವಯವಾಗಿತ್ತು.(ಏಜೆನ್ಸೀಸ್​)
We are proud of our teachers and our students. Teachers are the main guardians, who have a huge contribution towards our society and Nation building through nurturing our students for becoming true leaders of tomorrow. (1/3)
— Mamata Banerjee (@MamataOfficial)January 28, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − 2 =
Remember me
