ಕಲ್ಕತ್ತ:ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಅವರ ಮೇಲೆ ದಾಳಿ ನಡೆದಿದೆ. ಉತ್ತರ ಬಂಗಾಳದಲ್ಲಿ ಚುನಾವಣಾ ಪ್ರಚಾರ ಮುಗಿಸಿ ವಾಪಸ್ ಬರುತ್ತಿದ್ದ ಅವರ ಕಾರ್​ ಮೇಲೆ ಕೂಚ್ ಬೆಹರ್ ಎಂಬಲ್ಲಿ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ.
ಈ ಕುರಿತು ಟ್ವಿಟ್ಟರ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಘೋಷ್ ಅವರು, ಟಿಎಂಸಿ ಗುಂಡಾಗಳು ನನ್ನ ಹಾಗೂ ನನ್ನ ಪಕ್ಷದ ಕಾರ್ಯಕರ್ತರ ಮೇಲೆ ದಾಳಿ ಮಾಡಿದ್ದಾರೆ. ಕಲ್ಲು ಇಟ್ಟಿಗೆಗಳಿಂದ ದಾಳಿ ಮಾಡಿದ್ದಾರೆ. ಕಾರ್ ಗ್ಲಾಸ್ ಪುಡಿ ಪುಡಿ ಮಾಡಿದ್ದಾರೆ. ಸುಮಾರು 100 ಕ್ಕೂ ಹೆಚ್ಚು ಟಿಎಂಸಿ ಕಾರ್ಯಕರ್ತರು ಈ ಕೆಲಸ ಮಾಡಿದ್ದಾರೆ. ಅಲ್ಲದೇ ಪೆಟ್ರೋಲ್ ಬಾಂಬ್​ ಎಸೆಯಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
State of democracy in Paschim Banga is pathetic. TMC goons carrying TMC flags hurled crude bombs on my vehicle and shattered my vehicle's window. They also assaulted multiple karyakartas of BJP and also vandalised multiple cars. Police men were seen retreating.pic.twitter.com/x7GlRvd0q0
— Dilip Ghosh (@DilipGhoshBJP)April 7, 2021

ಇದನ್ನೂ ಓದಿ:ಬಾಡಿಗೆ ಹೆಚ್ಚು ಕೇಳಿದ್ದಕ್ಕೆ ಅಂಗಡಿ ಮಾಲೀಕನಿಗೆ ಇರಿದು ಹೊಟ್ಟೆಯಲ್ಲೇ ಚಾಕು ಬಿಟ್ಟು ಪರಾರಿ!
ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ವಾತಾವರಣವನ್ನು ತಿಳಿಗೊಳಿಸುವಲ್ಲಿ ಯಶಸ್ವಿಯಾದರು ಎಂದು ಘೋಷ್ ಹೇಳಿದ್ದಾರೆ.
ಆದರೆ, ದಿಲೀಪ್ ಘೋಷ್ ಅವರ ಈ ಆರೋಪವನ್ನು ಟಿಎಂಸಿ ನಾಯಕರು ತಳ್ಳಿ ಹಾಕಿದ್ದಾರೆ. ಅದು ಬಿಜೆಪಿ ಹಳೆಯ ಹಾಗೂ ಹೊಸ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಎಂದು ಹೇಳಿದ್ದಾರೆ.
ಅಪಹರಣಕ್ಕೆ ಒಳಗಾಗಿದ್ದ ಸಿಆರ್​ಪಿಎಫ್​ ಯೋಧನ ಫೋಟೋ ಬಿಡುಗಡೆ ಮಾಡಿದ ನಕ್ಸಲ್​ರು

ಕರ್ಮ ಯಾರನ್ನೂ ಬಿಡುವುದಿಲ್ಲ ಎಂದ ರಾಹುಲ್​: ಇವರಿಗೆ 111 ರೂಪಾಯಿ ಕೊಡಿ ಎಂದ ಯುವತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
