ಲಖನೌ:ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿರುವ ಬೆನ್ನಲ್ಲೇ ಟಿಎಂಸಿ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಪಕ್ಷದಿಂದ ಕಣಕ್ಕಿಳಿದು ಗೆದ್ದಿದ್ದ 20ಕ್ಕೂ ಹೆಚ್ಚು ಸಚಿವರು ಮತ್ತು ಶಾಸಕರ ಹೆಸರನ್ನು ಕೈ ಬಿಡಲಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮದಿಂದ ಕಣಕ್ಕಿಳಿಯುವುದು ದೃಢವಾಗಿದೆ.
294 ಕ್ಷೇತ್ರಗಳ ಪೈಕಿ 291 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇನ್ನುಳಿದ ಮೂರು ಕ್ಷೇತ್ರಗಳನ್ನು ಮೈತ್ರಿಗಳಿಗಾಗಿ ಮೀಸಲಿಟ್ಟಿರುವುದಾಗಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಪಾರ್ಥ ಚಟ್ಟೋಪಾಧ್ಯಾಯ, ಅಮಿತ್ ಮಿತ್ರ ಸೇರಿದಂತೆ 20ಕ್ಕೂ ಹೆಚ್ಚು ಶಾಸಕರು ಮತ್ತು ಸಚಿವರ ಹೆಸರನ್ನು ಈ ಬಾರಿ ಕೈ ಬಿಡಲಾಗಿದೆ. 80 ವರ್ಷಕ್ಕೂ ಹೆಚ್ಚು ವಯಸ್ಸಾದ ನಾಯಕರನ್ನೂ ಪಟ್ಟಿಯಿಂದ ಹೊರಗಿಡಲಾಗಿದೆ.
ಕೋಲ್ಕತಾ ಮಾಜಿ ಮೇಯರ್ ಸೋವನ್ ಚಟರ್ಜಿಯವರ ಕ್ಷೇತ್ರವಾದ ಬೆಹಲಾ ಪುರ್ಬಾದಲ್ಲಿ ಅವರ ಪತ್ನಿ ರತ್ನ ಚಟರ್ಜಿಯನ್ನು ಕಣಕ್ಕಿಳಿಸಲಾಗಿದೆ. ಸೋವನ್ ಚಟರ್ಜಿ ಟಿಎಂಸಿ ತೊರೆದು ಬಿಜೆಪಿ ಸೇರಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಮಮತಾ ಬ್ಯಾನರ್ಜಿ ಅವರು ತಮ್ಮ ಕ್ಷೇತ್ರವಾದ ಭವಾನಿಪುರದಲ್ಲಿ ಸ್ಪರ್ಧೆ ಮಾಡುತ್ತಿಲ್ಲ. ಕೇವಲ ನಂದಿಗ್ರಾಮದಲ್ಲಿ ಮಾತ್ರವೇ ಸ್ಪರ್ಧಿಸಲಿದ್ದಾರೆ. ಭವಾನಿಪುರ ಕ್ಷೇತ್ರಕ್ಕೆ ಸಚಿವ ಸೋವಾಂಡೇಬ್ ಚಟರ್ಜಿ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.
50 ಮಹಿಳಾ ಅಭ್ಯರ್ಥಿಗಳು, 42 ಮುಸ್ಲಿಂ ಅಭ್ಯರ್ಥಿಗಳು, 79 ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳು ಮತ್ತು 17 ಪರಿಶಿಷ್ಟ ಪಂಗಡ (ಎಸ್‌ಟಿ) ಅಭ್ಯರ್ಥಿಗಳಿದ್ದಾರೆ ಎಂದು ಪಟ್ಟಿಯನ್ನು ಪ್ರಕಟಿಸಿದ ಮಮತಾ ಬ್ಯಾನರ್ಜಿ ಹೇಳಿದರು. (ಏಜೆನ್ಸೀಸ್​)
ಕ್ಷಣಕ್ಷಣದ ಮಾಹಿತಿಗಾಗಿವಿಜಯವಾಣಿಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

‘ಅಯ್ಯೋ, ಈ ಹುಡುಗ ವಾಟ್ಸ್​ಆ್ಯಪ್​ನಲ್ಲಿ ನೋಡಿದಂಗಿಲ್ಲ’ ಸಿಟ್ಟಾಗಿ ಮದುವೆ ಮಂಟಪದಿಂದ ಎದ್ದು ಹೋದ ವಧು!

ಬಾಡಿ ಬಿಲ್ಡ್​ ಮಾಡೋಕೆ ಏನೇನೋ ಮಾಡಿದ; ಆಮೇಲಾಗಿದ್ದು ಕೇಳಿದರೆ ಗಾಬರಿಯಾಗೋದು ಗ್ಯಾರಂಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − six =
Remember me
