ಕೋಲ್ಕತ್ತಾ:ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಗುರುವಾರ ಬೆಳಗ್ಗೆ ಕೋಲ್ಕತ್ತಾದ ತಮ್ಮ ನಿವಾಸದಲ್ಲಿ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿದ್ದು, ಪತ್ನಿ ಮೀರಾ ಹಾಗೂ ಮಗಳು ಸುಚೇತನಾ ಅವರನ್ನು ಅಗಲಿದ್ದಾರೆ.
ಇದನ್ನೂ ಓದಿ:ಬಾಂಗ್ಲಾ ನಂತರ ಭಾರತದಲ್ಲೂ ಜನರು ಪ್ರಧಾನಿ ವಿರುದ್ಧ ದಂಗೆ ಏಳುತ್ತಾರೆ: ಕಾಂಗ್ರೆಸ್​ ನಾಯಕ ಸಜ್ಜನ್​ ಸಿಂಗ್​
ನವೆಂಬರ್ 2000 ರಿಂದ ಮೇ 2011 ರವರೆಗೆ ಮುಖ್ಯಮಂತ್ರಿಯಾಗಿದ್ದ ಭಟ್ಟಾಚಾರ್ಯ ಅವರು ದಕ್ಷಿಣ ಕೋಲ್ಕತ್ತಾದ ಬಲ್ಲಿಗುಂಗೆ ಪ್ರದೇಶದಲ್ಲಿ ಎರಡು ಕೋಣೆಗಳ ಸಣ್ಣ ಸರ್ಕಾರಿ ಅಪಾರ್ಟ್​ಮೆಂಟ್​ನಲ್ಲಿ ಸರಳ ಜೀವನ ನಡೆಸುತ್ತಿದ್ದರು. ಅವರು ದೀರ್ಘಕಾಲದ ಅಬ್ಸ್ಟ್ರಕ್ಟಿವ್ ಪಲ್ಮನರಿ ಕಾಯಿಲೆಯಿಂದ ಬಳಲುತ್ತಿದ್ದರು.
ಕಳೆದ ಕೆಲವು ವರ್ಷಗಳಿಂದ ಮನೆಯಲ್ಲೇ ಇರುತ್ತಿದ್ದರು. ಕೊನೆಯದಾಗಿ ಅವರು 2019 ರಲ್ಲಿ ಸಿಪಿಐ(ಎಂ) ಸಮಾವೇಶದಲ್ಲಿ ಕಾಣಿಸಿಕೊಂಡರು. ಆದರೆ ಧೂಳಿನ ಅಲರ್ಜಿಯಿಂದಾಗಿ ಭಾಗವಹಿಸಲು ಸಾಧ್ಯವಾಗದೆ ಮನೆಗೆ ಮರಳಿದರು.
2024 ರ ಚುನಾವಣೆಗೆ ಮುಂಚಿತವಾಗಿ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಭಟ್ಟಾಚಾರ್ಯರ ವೀಡಿಯೊವನ್ನು ಹಂಚಿಕೊಂಡಿತ್ತು. ಇದನ್ನು ಕೃತಕ ಬುದ್ಧಿಮತ್ತೆ (ಎಐ) ಬಳಸಿ ರಚಿಸಲಾಗಿತ್ತು. ಇದರಲ್ಲಿ ಅವರು ಮತದಾರರನ್ನು ಎಡ ಮತ್ತು ಜಾತ್ಯತೀತ ಶಕ್ತಿಗಳಿಗೆ ಮತ ಹಾಕುವಂತೆ ಒತ್ತಾಯಿಸಿದ್ದರು. ಸಂದೇಶಖಾಲಿಯಿಂದ ಹಿಡಿದು ಪಶ್ಚಿಮ ಬಂಗಾಳದಲ್ಲಿ ನಿರುದ್ಯೋಗ ಮತ್ತು ಭ್ರಷ್ಟಾಚಾರದ ಆರೋಪಗಳವರೆಗಿನ ವಿಷಯಗಳ ಕುರಿತು ಮಾತನಾಡಿದ್ದರು. ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಿರುದ್ಧ ಅವರು ವಾಗ್ದಾಳಿ ನಡೆಸಿದ್ದರು.
ರಾಜ್ಯಸಭೆಯ 12 ಸ್ಥಾನಗಳಿಗೆ ಚುನಾವಣಾ ಅಧಿಸೂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 20 =
Remember me
