ಕೋಲ್ಕತಾ:ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರುದ್ಧದ ಚಳವಳಿ ಪ್ರಚಾರಕ್ಕೆ ಜಾಹೀರಾತು ನೀಡುವ ಮೂಲಕ ಪಶ್ಚಿಮ ಬಂಗಾಳ ಸರ್ಕಾರ ಸಾರ್ವಜನಿಕ ಹಣದ ದುರುಪಯೋಗ ಮಾಡಿದೆ ಎಂದು ರಾಜ್ಯಪಾಲ ಜಗದೀಪ್ ಧನಕರ್ ಆಪಾದಿಸಿದ್ದಾರೆ.
ಜಾಹೀರಾತಿಗೆ ಅನುಮೋದನೆ ಕೊಟ್ಟ ಅಧಿಕಾರಿ ಬಗ್ಗೆ ಮಾಹಿತಿ ಒದಗಿಸುವಂತೆ ಅವರು ಸೂಚನೆ ನೀಡಿದ್ದಾರೆ ಎಂದು ಮೂಲಗಳು ಶನಿವಾರ ತಿಳಿಸಿವೆ. ಸಿಎಎ ವಿರೋಧಿ ಚಳವಳಿಗೆ ಮಾಡಲಾದ ವೆಚ್ಚದ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಸೂಚಿಸಿ ರಾಜ್ಯಪಾಲರ ಕಚೇರಿ, ವಾರ್ತಾ ಹಾಗೂ ಸಾಂಸ್ಕೃತಿಕ ವ್ಯವಹಾರಗಳ ಖಾತೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದೆ.
ಪ.ಬಂಗಾಳ ಸರ್ಕಾರ ‘ನೋ ಸಿಎಎ’, ‘ನೋ ಎನ್​ಆರ್​ಸಿ’, ‘ನೋ ಎನ್​ಪಿಆರ್’ ಘೋಷಣೆಯೊಂದಿಗೆ ಜಾಹಿರಾತುಗಳನ್ನು ನೀಡಿತ್ತು. ಜಾಹಿರಾತು ಪ್ರಕ್ರಿಯೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಲ್ಲದೆ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಂಥ ಹಿರಿಯ ಅಧಿಕಾರಿಗಳೂ ಒಳಗೊಂಡಿರುವುದಕ್ಕೆ ಧನಕರ್ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿ ಹಣದ ದುರ್ಬಳಕೆ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯಪಾಲರಿಗೆ ಅಧಿಕಾರವಿದೆ. ಈ ರೀತಿಯ ಸಂದರ್ಭಗಳಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಕ್ರಮಕ್ಕೆ ಅನುಮತಿ ನೀಡಿದ ಉದಾಹರಣೆಗಳಿವೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × three =
Remember me
