ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ನೀತಿ ಆಯೋಗದ ಸಭೆಯಿಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೊರನಡೆದಿದ್ದಾರೆ. ಬಳಿಕ ಅವರು, ಸಭೆಯಲ್ಲಿ ತನಗೆ ಅವಮಾನ ಮಾಡಲಾಗಿದೆ. ರಾಜ್ಯ ಸರ್ಕಾರಗಳ ವಿರುದ್ಧ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದರು.
ಇದನ್ನು ಓದಿ:ಎಲ್​ಒಸಿ ಬಳಿ ಗುಂಡಿನ ಚಕಮಕಿ: ಇಬ್ಬರು ಯೋಧರಿಗೆ ಗಾಯ.. ಓರ್ವ ಪಾಕಿಸ್ತಾನಿ ಹತ
ನಾನು ಸಭೆಯನ್ನು ಬಹಿಷ್ಕರಿಸಿ ಹೊರಬಂದಿದ್ದೇನೆ. ಮಾತನಾಡುತ್ತಿರುವಾಗಲೆ ನನ್ನ ಮೈಕ್ ಸ್ವಿಚ್ ಆಫ್ ಆಗಿತ್ತು. ನನ್ನನ್ನು ಯಾಕೆ ತಡೆದಿರಿ. ಏಕೆ ತಾರತಮ್ಯ ಮಾಡುತ್ತಿದ್ದೀರಿ ಎಂದು ಕೇಳಿದೆ. ನನಗೆ ಮಾತನಾಡಲು 5 ನಿಮಿಷ ಮಾತ್ರ ಅವಕಾಶ ನೀಡಲಾಗಿತ್ತು. ನನಗಿಂತ ಮುಂಚೆ ಇದ್ದವರು 10-20 ನಿಮಿಷ ಮಾತಾಡಿದರು ಎಂದು ಹೇಳಿದರು.
ಸಭೆಯಲ್ಲಿ ಚಂದ್ರಬಾಬು ನಾಯ್ಡು ಅವರಿಗೆ ಮಾತನಾಡಲು 20 ನಿಮಿಷಗಳ ಕಾಲಾವಕಾಶ ನೀಡಲಾಯಿತು. ಅಸ್ಸಾಂ, ಗೋವಾ ಮತ್ತು ಛತ್ತೀಸ್‌ಗಢದ ಮುಖ್ಯಮಂತ್ರಿಗಳು 10-12 ನಿಮಿಷಗಳ ಕಾಲ ಮಾತನಾಡಿದರು. ಆದರೆ ಕೇವಲ ಐದು ನಿಮಿಷಗಳ ನಂತರ ನನ್ನನ್ನು ಮಾತನಾಡದಂತೆ ತಡೆಯಲಾಯಿತು. ಇದು ಅನ್ಯಾಯ ಮತ್ತು ಅತಿರೇಕದ ಸಂಗತಿಯಾಗಿದೆ.
ಸಭೆಯಲ್ಲಿ ಭಾಗವಹಿಸಿದ ವಿರೋಧ ಪಕ್ಷದ ಏಕೈಕ ಸದಸ್ಯೆ ನಾನು. ಆದರೆ ನನಗೆ ಮಾತನಾಡಲು ಅವಕಾಶ ನೀಡಲಿಲ್ಲ. ಇದರ ಮೂಲಕ ಪಶ್ಚಿಮ ಬಂಗಾಳಕ್ಕೆ ಅವಮಾನ ಮಾಡಲಾಗಿದೆ. ಆದ್ದರಿಂದ ಸಭೆಯಿಂದ ಮಧ್ಯದಲ್ಲೇ ನಿರ್ಗಮಿಸಿದೆ. ನೀತಿ ಆಯೋಗದ ಸಭೆಯಲ್ಲಿ ಬಂಗಾಳಕ್ಕೆ ಮಾಡುತ್ತಿರುವ ರಾಜಕೀಯ ತಾರತಮ್ಯದ ವಿರುದ್ಧ ಪ್ರತಿಭಟಿಸುವುದಾಗಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅವರು ಬಜೆಟ್‌ನಲ್ಲಿ ಬಂಗಾಳ ಮತ್ತು ಇತರ ವಿರೋಧ ರಾಜ್ಯಗಳ ವಿರುದ್ಧ ಮಾಡಿರುವ ತಾರತಮ್ಯವನ್ನು ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ. (ಏಜೆನ್ಸೀಸ್​​)

#WATCH| On NITI Aayog meeting in Delhi, West Bengal CM Mamata Banerjee says, "…I said you (central government) should not discriminate against state governments. I wanted to speak but I was allowed to speak only for 5 minutes. People before me spoke for 10-20 minutes. I was…pic.twitter.com/nOgNQ9jnRd
ಕಾರ್ಗಿಲ್​ ವಿಜಯದಿವಸ್​​ನಲ್ಲೂ ಪ್ರಧಾನಿ ಮೋದಿ ರಾಜಕಾರಣ ; ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 3 =
Remember me
