ನವದೆಹಲಿ:ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಯಾವುದೇ ಅಥವಾ ಎಲ್ಲಾ ದೂರಸಂಪರ್ಕ ಸೇವೆಗಳು ಅಥವಾ ನೆಟ್‌ವರ್ಕ್‌ಗಳನ್ನು ಸ್ವಾಧೀನಪಡಿಸಿಕೊಳ್ಳಲು, ನಿರ್ವಹಿಸಲು ಅಥವಾ ಅಮಾನತುಗೊಳಿಸಲು ಸರ್ಕಾರಕ್ಕೆ ಇನ್ನು ಮುಂದೆ ಅಧಿಕಾರ ದೊರೆಯಲಿದೆ. ಸೋಮವಾರ ಲೋಕಸಭೆಯಲ್ಲಿ ಮಂಡಿಸಲಾದ ಕರಡು ದೂರಸಂಪರ್ಕ ಮಸೂದೆ- 2023ರ ಪ್ರಕಾರ ಈ ಅಧಿಕಾರ ದೊರೆಯಲಿದೆ. ದೂರಸಂಪರ್ಕ ವಲಯವನ್ನು ನಿಯಂತ್ರಿಸುವ 138 ವರ್ಷಗಳಷ್ಟು ಹಳೆಯದಾದ ಭಾರತೀಯ ಟೆಲಿಗ್ರಾಫ್ ಕಾಯ್ದೆಯನ್ನು ನೂತನ ಮಸೂದೆಯು ಬದಲಿಸುತ್ತದೆ.
ಕಳೆದ ಆಗಸ್ಟ್‌ನಲ್ಲಿ ಸಚಿವ ಸಂಪುಟವು ಈ ಮಸೂದೆಗೆ ಅನುಮೋದನೆ ನೀಡಿದೆ.
ಈ ಮಸೂದೆಯು ಬಳಕೆದಾರರ ಸುರಕ್ಷತೆಯನ್ನು ಹೆಚ್ಚಿಸಲು ಟೆಲಿಕಮ್ಯುನಿಕೇಶನ್‌ಗಳ ವ್ಯಾಖ್ಯಾನದಡಿಯಲ್ಲಿ ಇಂಟರ್​ನೆಟ್ ಆಧಾರಿತ ಕರೆ ಮತ್ತು ಸಂದೇಶ ಕಳುಹಿಸುವ ಅಪ್ಲಿಕೇಶನ್‌ಗಳನ್ನು ತರಲು ಪ್ರಸ್ತಾಪಿಸಿದೆ.
ಈ ಮಸೂದೆಯು ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರದ (ಟ್ರಾಯ್) ಅಧಿಕಾರ ನಿರ್ಬಂಧಿಸಲು ಪ್ರಸ್ತಾಪಿಸಿದೆ. ಆದರೆ, ಈ ಕುರಿತು ಟೆಲಿಕಾಂ ಉದ್ಯಮದವರು ಆತಂಕ ವ್ಯಕ್ತಪಡಿಸಿದ್ದಾರೆ.
ಕಂಪನಿಯು ತನ್ನ ಪರವಾನಿಗೆಯನ್ನು ವಾಪಸು ನೀಡಿದರೆ, ನೋಂದಣಿ, ಇತ್ಯಾದಿ ಶುಲ್ಕ ಮರುಪಾವತಿಸಲು ಅವಕಾಶವನ್ನು ಕಲ್ಪಿಸಲು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ.
ಹೊಸ ಮಸೂದೆಯು ಗ್ರಾಹಕರ ಹಿತಾಸಕ್ತಿ, ಮಾರುಕಟ್ಟೆಯಲ್ಲಿ ಸ್ಪರ್ಧೆ, ಟೆಲಿಕಾಂ ನೆಟ್‌ವರ್ಕ್‌ಗಳ ಲಭ್ಯತೆ ಅಥವಾ ನಿರಂತರತೆ ಮತ್ತು ರಾಷ್ಟ್ರೀಯ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಪ್ರವೇಶ ಶುಲ್ಕ, ಪರವಾನಗಿ ಶುಲ್ಕ, ದಂಡ ಇತ್ಯಾದಿಗಳನ್ನು ಮನ್ನಾ ಮಾಡುವ ಅಧಿಕಾರವನ್ನು ಸರ್ಕಾರಕ್ಕೆ ನೀಡುತ್ತದೆ.

ಕರಾಚಿ ಆಸ್ಪತ್ರೆಯ ಮಹಡಿ ಸೀಲ್: ಎರಡು ದಿನ ಮೊದಲೇ ಆಸ್ಪತ್ರೆಗೆ ದಾಖಲಾಗಿದ್ದನೇ ದಾವೂದ್ ಇಬ್ರಾಹಿಂ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 16 =
Remember me
