ಶ್ರೀನಗರ:ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಸಮ್ಮುಖದಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಇದನ್ನೂ ಓದಿ:ಬೀದಿಯಲ್ಲಿ ಎಳೆದಾಡಿದಾಗ ಬಿಜೆಪಿ ಹೊರತುಪಡಿಸಿ ಎಲ್ಲಾ ಪಕ್ಷಗಳು ನಮ್ಮ ಜೊತೆಗಿದ್ದವು: ವಿನೇಶ್​ ಫೋಗೇಟ್
ಪ್ರಣಾಳಿಕೆ ಬಿಡುಗಡೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಅಮಿತ್ ಷಾ ಅವರು, ಸಂವಿಧಾನದ 370ನೇ ವಿಧಿ ಈಗ ಇತಿಹಾಸವಾಗಿದೆ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಈ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ಮತ್ತೆ ಎಂದಿಗೂ ಜಾರಿಯಾಗುವುದಿಲ್ಲ ಎಂದು ಇಡೀ ದೇಶದ ಜನರಿಗೆ ಸ್ಪಷ್ಟ ಪಡಿಸುತ್ತಿದ್ದೇನೆ ಎಂದು ಹೇಳಿದರು.
ಕಳೆದ 10 ವರ್ಷಗಳ ಅವಧಿಯು ದೇಶ ಮತ್ತು ಜಮ್ಮು & ಕಾಶ್ಮೀರದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ ಮತ್ತು ಉತ್ತಮ ಆಡಳಿತವನ್ನು ಮುಂದುವರಿಸಲು ಬಿಜೆಪಿಗೆ ಮತನೀಡುತ್ತಾರೆ ಎಂಬ ಸಂಪೂರ್ಣ ಭರವಸೆ ಇದೆ ಎಂದು ತಿಳಿಸಿದರು.
ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಪ್ರಚಾರವನ್ನು ಕಿಕ್‌ಸ್ಟಾರ್ಟ್ ಮಾಡಲು ಎರಡು ದಿನಗಳ ಭೇಟಿಗಾಗಿ ಷಾ ಮುಂಜಾನೆ ಜಮ್ಮು ತಲುಪಿದರು. 370 ನೇ ವಿಧಿ ಇನ್ನು ಮುಂದೆ ಸಂವಿಧಾನದ ಭಾಗವಲ್ಲ. “ಈ ವಿಧಿಯು ಯುವಕರ ಕೈಯಲ್ಲಿ ಶಸ್ತ್ರಾಸ್ತ್ರ ಮತ್ತು ಕಲ್ಲುಗಳನ್ನು ಮಾತ್ರ ನೀಡಿದೆ. ಭಯೋತ್ಪಾದನೆಯ ಹಾದಿಯನ್ನು ತುಳಿಯಲು ಅವರಿಗೆ ಅನುಕೂಲ ಮಾಡಿಕೊಟ್ಟಿದೆ” ಎಂದು ಷಾ ಹೇಳಿದರು.
“ಫಲಿತಾಂಶ ಏನೇ ಇರಲಿ, ಗುಜ್ಜರ್, ಬಕರ್ವಾಲ್ ಮತ್ತು ಪಹಾರಿಗಳಿಗೆ ನೀಡಿರುವ ಮೀಸಲಾತಿಗೆ ಕೂ ಹಾಕಲು ನಾವು ನಿಮಗೆ ಅವಕಾಶ ನೀಡುವುದಿಲ್ಲ ಎಂದು ನಾನು ಒಮರ್ ಅಬ್ದುಲ್ಲಾ ಅವರಿಗೆ ಹೇಳಲು ಬಯಸುತ್ತೇನೆ” ಎಂದು ಅವರು ಹೇಳಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದು ನಮ್ಮ ಉದ್ದೇಶವಾಗಿದೆ. ಈ ಕುರಿತು ಶ್ವೇತಪತ್ರವನ್ನು ಹೊರಡಿಸಲಾಗುವುದು. ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಒಂದು ಬಾರಿ ನಮಗೆ ಐದು ವರ್ಷಗಳ ಅಧಿಕಾರಾವಧಿಯನ್ನು ನೀಡುವಂತೆ ಜನರಲ್ಲಿ ಅಮಿತ್ ಷಾ ಅವರು ಮನವಿ ಮಾಡಿಕೊಂಡರು.
ನಾವು ಉಜ್ವಲ ಯೋಜನೆಯಡಿ ವರ್ಷಕ್ಕೆ ಎರಡು ಉಚಿತ ಸಿಲಿಂಡರ್‌ಗಳನ್ನು ನೀಡುತ್ತೇವೆ. ಪ್ರಗತಿ ಶಿಕ್ಷಾ ಯೋಜನೆಯಡಿ, ನಾವು ಪ್ರಯಾಣ ಭತ್ಯೆಯಾಗಿ ಕಾಲೇಜು ವಿದ್ಯಾರ್ಥಿಗಳಿಗೆ ವರ್ಷಕ್ಕೆ 3,000 ರೂ. ನೀಡುತ್ತೇವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯ ಸಂಪೂರ್ಣ ನಿರ್ಮೂಲನೆಯನ್ನು ಬಿಜೆಪಿ ಖಚಿತಪಡಿಸುತ್ತದೆ. ಬಿಜೆಪಿಯ 25 ಅಂಶಗಳ ಪ್ರಣಾಳಿಕೆಯ ಪ್ರಕಾರ, ದೂರದ ಪ್ರದೇಶಗಳಲ್ಲಿನ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ಗಳು ಅಥವಾ ಲ್ಯಾಪ್‌ಟಾಪ್‌ಗಳನ್ನು ನೀಡಲಾಗುವುದು. ಆದರೆ ಕಾಲೇಜು ವಿದ್ಯಾರ್ಥಿಗಳು ಪ್ರಗತಿ ಶಿಕ್ಷಾ ಯೋಜನೆಯಡಿ ವಾರ್ಷಿಕ 3,000 ರೂ. ಪ್ರಯಾಣ ಭತ್ಯೆಯಿಂದ ಪ್ರಯೋಜನ ಪಡೆಯುತ್ತಾರೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 16 =
Remember me
