ಬೆಂಗಳೂರು:ಕೆಜಿಎಫ್​-2 ಸಿನಿಮಾ ಚಿತ್ರೀಕರಣಕ್ಕೆ ಸರ್ಕಾರ ನೀಡಿರುವ ಅನುಮತಿಯನ್ನು ರದ್ದುಪಡಿಸಲು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್​ ಇಂದು(ಸೋಮವಾರ) ವಿಚಾರಣೆ ನಡೆಸಿತು.
ಕೆಜಿಎಫ್​-2 ಚಿತ್ರದಲ್ಲಿ ನಟಿಸುತ್ತಿರುವ ಬಾಲಿವುಡ್​ ನಟ ಸಂಜಯ್​ ದತ್​ ವಿರುದ್ಧ ಟಾಡಾ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಅವರಿಗೆ 10ವರ್ಷ ಜೈಲು ಶಿಕ್ಷೆಯೂ ಆಗಿತ್ತು. ಈ ವಿಚಾರ ತಿಳಿದಿದ್ದರೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸಂಜಯ್​ ದತ್​ ನಟನೆಯ ಚಿತ್ರದ ಚಿತ್ರೀಕರಣ ಹಾಗೂ ಬಿಡುಗಡೆಗೆ ಅನುಮತಿ ನೀಡಿದ್ದಾರೆ. ಹೆಚ್ಚು ಲಾಭಗಳಿಸುವ ಉದ್ದೇಶದಿಂದ ಸಂಜಯ್​ ದತ್​ ಅವರನ್ನು ಹಾಕಿಕೊಂಡು ಚಿತ್ರ ನಿರ್ಮಿಸಲಾಗುತ್ತಿದೆ. ಇದರಿಂದ ರಾಜ್ಯದ ಜನತೆಯ ಘನತೆಗೆ ಧಕ್ಕೆಯಾಗಿದೆ ಎಂದು ಆಕ್ಷೇಪಿಸಿದ್ದ ಹುಬ್ಬಳ್ಳಿಯ ಜಿ. ಶಿವಶಂಕರ್​, ಪಿಐಎಲ್​ ಸಲ್ಲಿಸಿದ್ದರು. ಕೆಜಿಎಫ್​-2 ಚಿತ್ರೀಕರಣಕ್ಕೆ ಹೊಂಬಾಳೆ ಫಿಲ್ಮ್ಸ್​ ಸಂಸ್ಥೆಗೆ ನೀಡಿರುವ ಅನುಮತಿ ರದ್ದುಪಡಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು. ಅರ್ಜಿ ಇತ್ಯರ್ಥವಾಗುವರೆಗೂ ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡಬೇಕು ಎಂದು ಕೋರಿದ್ದರು.
ಇದನ್ನೂ ಓದಿರಿಡಿಜೆ ಹಳ್ಳಿ ಗಲಭೆಕೋರರ ಹೆಡೆಮುರಿ ಕಟ್ಟಲು ಸಿಎಂ ಸಜ್ಜು; ಗೂಂಡಾ ಕಾಯ್ದೆ, ನಷ್ಟ ವಸೂಲಿ ಬ್ರಹ್ಮಾಸ್ತ್ರ ಬಳಕೆ
ಹುಬ್ಬಳ್ಳಿಯ ಜಿ. ಶಿವಶಂಕರ್​ ಸಲ್ಲಿಸಿದ್ದ ಪಿಐಎಲ್​ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್​. ಓಕ್​ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ವಾದ ಮಂಡಿಸಿದ ಅರ್ಜಿದಾರರ ಪರ ವಕೀಲರು, ದೇಶದ್ರೋಹ ಆರೋಪದಡಿ ಶಿಕ್ಷೆಗೆ ಒಳಗಾಗಿದ್ದ ನಟರೊಬ್ಬರು ಕನ್ನಡ ಚಿತ್ರದಲ್ಲಿ ನಟಿಸುತ್ತಿರುವುದರಿಂದ ಕನ್ನಡಿಗರ ಭಾವನೆಗಳಿಗೆ ಧಕ್ಕೆಯಾಗಿದೆ. ಆದ್ದರಿಂದ, ಚಿತ್ರಕ್ಕೆ ನೀಡಿರುವ ಅನುಮತಿ ರದ್ದುಪಡಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದರು.ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಶಿಕ್ಷೆಗೊಳಗಾದ ವ್ಯಕ್ತಿ ಸಿನಿಮಾದಲ್ಲಿ ನಟಿಸಬಾರದು ಎಂದು ಯಾವ ಕಾನೂನು ಹೇಳಿದೆ? ಒಬ್ಬರ ನಿಲುವು ಇಡೀ ರಾಜ್ಯದ ಜನತೆಯ ನಿಲುವಾಗಿದೆ ಎಂದು ಹೇಗೆ ನಿರ್ಣಯಿಸುತ್ತೀರಿ? ಅರ್ಜಿದಾರರು ಇಡೀ ಕರ್ನಾಟಕದ ಜನರನ್ನು ಯಾವ ರೀತಿ ಪ್ರತಿನಿಧಿಸುತ್ತಾರೆ ಎಂದು ಅರ್ಜಿದಾರರ ಪರ ವಕೀಲರನ್ನು ಪ್ರಶ್ನಿಸಿತು.
ನ್ಯಾಯಪೀಠದ ಪ್ರಶ್ನೆಗಳಿಗೆ ಅರ್ಜಿದಾರರ ಪರ ವಕೀಲರಿಂದ ಸೂಕ್ತ ಉತ್ತರ ದೊರೆಯಲಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿದಾರರ ಮನವಿಗೆ ಯಾವುದೇ ಕಾನೂನಾತ್ಮಕ ಆಧಾರವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಹೈಕೋರ್ಟ್​ ಅರ್ಜಿಯನ್ನು ವಜಾಗೊಳಿಸಿತು
ಕಾಂಗ್ರೆಸ್​ ವಿರುದ್ಧ ಅಖಂಡ ಶ್ರೀನಿವಾಸ್​ ಮೂರ್ತಿ ಆಕ್ರೋಶ… ಸುಟ್ಟಿರೋದು ನನ್ನ ಮನೆ, ಡಿಕೆಶಿಯದ್ದಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + four =
Remember me
