ನವದೆಹಲಿ:ಕೇಂದ್ರದ ಮಾಜಿ ಸಚಿವ ನಿವೃತ್ತ ಮೇಜರ್ ಜಸ್ವಿಂತ್ ಸಿಂಗ್ ಅವರು ಇಂದು ಬೆಳಗ್ಗೆ 6.55ಕ್ಕೆ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಅಸ್ತಂಗತರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ಕಳೆದ ಆರು ವರ್ಷಗಳ ಅವಧಿಯಲ್ಲಿ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ತೀವ್ರ ಅನಾರೋಗ್ಯ ನಿಮಿತ್ತ ಅವರನ್ನು ಜೂನ್ 25ರಂದು ದೆಹಲಿಯ ಆರ್ಮಿ ಹಾಸ್ಪಿಟಲ್ (ಆರ್&ಆರ್)ಗೆ ದಾಖಲಿಸಲಾಗಿತ್ತು.
ಅಂದಿನಿಂದ ಆರ್ಮಿ ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಸ್ವಂತ್ ಸಿಂಗ್ ಅವರು ನೆತ್ತರು ನಂಜು ಸಮಸ್ಯೆ ಎದುರಿಸಿದ್ದರು ಅಲ್ಲದೆ ಬಹು ಅಂಗಾಂಗ ವೈಫಲ್ಯದ ಕಾಯಿಲೆಯಿಂದ ಬಳಲಿದ್ದರು. ಇಂದು ಬೆಳಗ್ಗೆ ಅವರಿಗೆ ಹೃದಯ ಸ್ತಂಭನವಾಗಿದ್ದು, ಕೊನೆಯುಸಿರೆಳೆದರು. ಅವರಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿದ್ದು, ನೆಗೆಟಿವ್ ರಿಪೋರ್ಟ್ ಬಂದಿತ್ತು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇದನ್ನೂ ಓದಿ:PHOTOS|ಭೀಕರ ರಸ್ತೆ ಅಪಘಾತಕ್ಕೆ ಗರ್ಭಿಣಿ ಸೇರಿ 7 ಜನರ ದಾರುಣ ಸಾವು
Major Jaswant Singh (Retd), former Cabinet Minister, passed away at 6:55 am today. He was admitted on 25 June & was being treated for Sepsis with Multiorgan Dysfunction Syndrome. He had a cardiac arrest this morning. His COVID status is negative: Army Hospital (R&R), Delhipic.twitter.com/GEi404GbQj
— ANI (@ANI)September 27, 2020

ಜಸ್ವಂತ್ ಅವರ ನಿಧನಕ್ಕೆ ಪ್ರಧಾನಿ, ರಕ್ಷಣಾ ಸಚಿವರಾದಿಯಾಗಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. (ಏಜೆನ್ಸೀಸ್)
ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ವಿಧಿವಶ: ಪ್ರಧಾನಿ ಸಂತಾಪ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × two =
Remember me
