ಅರುಣಾಚಲಪ್ರದೇಶ:ಇತ್ತೀಚಿನ ದಿನಗಳಲ್ಲಿ ಭಾರತದ ಭೂಪ್ರದೇಶವಾಗಿರುವ ಅರುಣಾಚಲಪ್ರದೇಶದ ಕೆಲವು ಭಾಗಗಳನ್ನು ಆಕ್ರಮಿಸಿಕೊಂಡು, ಮರುನಾಮಕಾರಣ ಮಾಡುವ ಮೂಲಕ ಚೀನಾ ಗಡಿ ವಿಚಾರವಾಗಿ ಪದೇ ಪದೇ ಕ್ಯಾತೆ ತೆಗೆಯುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಡಕ್​ ಆಗಿ ಉತ್ತರ ಕೊಟ್ಟಿದ್ದಾರೆ.
ಅರುಣಾಚಲಪ್ರದೇಶದ ನಮ್ಸಾಯಿಯಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ಧೇಶಿಸಿ ಮಾತನಾಡಿದ ರಾಜನಾಥ್​ ಸಿಂಗ್​, ಒಂದು ವೇಳೆ ನಾವು ಚೀನಾದಲ್ಲಿರುವ ವಿವಿಧ ರಾಜ್ಯಗಳ ಹೆಸರನ್ನು ಬದಲಾಯಿಸಿದರೆ, ಅವು ಭಾರತಕ್ಕೆ ಸೇರಿದಂತಾಗುತ್ತದ. ಈ ರೀತಿಯ ಕೆಲಸಗಳನ್ನು ಮಾಡುವುದರಿಂದ ಭಾರತ ಹಾಗೂ ಚೀನಾ ನಡುವಿನ ಸಂಬಂಧ ಮತ್ತಷ್ಟು ಹದಗೆಡುತ್ತದೆ. ಅರುಣಾಚಲ ಪ್ರದೇಶದ 30 ಸ್ಥಳಗಳ ಹೆಸರನ್ನು ಬದಲಾಯಿಸುವ ಚೀನಾದ ಕ್ರಮವು ನೆಲದ ವಾಸ್ತವತೆಯನ್ನು ಬದಲಾಯಿಸುವುದಿಲ್ಲ ಎಂದು ಹೇಳಿದ್ದಾರೆ.
ನಾವು ನಮ್ಮ ಎಲ್ಲಾ ನೆರೆಹೊರೆಯ ರಾಷ್ಟ್ರಗಲೊಂದಿಗೆ ಉತ್ತಮ ಸಂಬಂಧವನ್ನು ಹೊಂದಲು ಬಯಸುತ್ತೇವೆ. ಆದರೆ ಯಾರಾದರೂ ನಮ್ಮ ಆತ್ಮಗೌರವಕ್ಕೆ ಧಕ್ಕೆ ತರಲು ಪ್ರಯತ್ನಿಸಿದರೆ, ಭಾರತಕ್ಕೆ ತಕ್ಕ ಉತ್ತರವನ್ನು ನೀಡುವ ಸಾಮರ್ಥ್ಯವಿದೆ ಎಂಬುದನ್ನು ಮೊದಲು ಅವರು ನೆನಪಿಟ್ಟುಕೊಳ್ಳಬೇಕು. ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ರಕ್ಷಣಾ ಸಚಿವ ರಾಜ್​ನಾಥ್​ ಸಿಂಗ್​ ಪ್ರತಿಪಾದಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
