ಮಹಾರಾಷ್ಟ್ರ:ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿದ್ದಾರೆ. ಈ ಮೂಲಕವಾಗಿ ರಾಜಕೀಯದಲ್ಲಿ ಮಿಂಚಿನ ಸಂಚಲನ ಸೃಷ್ಟಿಯಾಗಿದೆ.
ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಹಿರಿಯ ನಾಯಕ ಅಜಿತ್ ಪವಾರ್ ಅವರು ಸ್ವಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದಾರೆ. ಎನ್‌ಸಿಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನಿರಾಕರಿಸಿದ ಬೆನ್ನಲ್ಲೇ ಆಡಳಿತ ಪಕ್ಷ (ಶಿವಸೇನೆ-ಬಿಜೆಪಿ) ಏಕನಾಥ್ ಶಿಂಧೆ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.ಶರದ್​ ಪವಾರ್‌ಗೆ ಅಜಿತ್‌ ಪವಾರ್‌ ಮತ್ತೆ ಸೆಡ್ಡು ಹೊಡೆದಿದ್ದು, ಎನ್‌ಸಿಪಿಯಲ್ಲಿ ರಾಜಕೀಯ ಬಿರುಕುಂಟಾಗಿದೆ. ವಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಅಜಿತ್‌ ಪವಾರ್‌ ಏಕನಾಥ್‌ ಶಿಂಧೆ ಹಾಗೂ ಫಡ್ನವೀಸ್‌ ಸರ್ಕಾರದ ಜತೆ ಕೈ ಜೋಡಿಸಿದ್ದಾರೆ.
ಇದನ್ನೂ ಓದಿ:ಮಹಾರಾಷ್ಟ್ರ ರಾಜಕೀಯ; ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ
ಕೆಲವು ದಿನಗಳ ಹಿಂದೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಬದಲಾವಣೆಗಳಾಗಿವೆ ಎಂದು ಈಗಾಗಲೇ ತಿಳಿದಿದೆ. ಅಜಿತ್ ಪವಾರ್, ಪಕ್ಷದಲ್ಲಿ ತನ್ನ ಕ್ಷೀಣಿಸುತ್ತಿರುವ ಸ್ಥಾನಮಾನವನ್ನು ಪುನರುತ್ಥಾನಗೊಳಿಸಲು ರಾಜ್ಯಾಧ್ಯಕ್ಷ ಹುದ್ದೆಗೆ ಸ್ಪರ್ಧಿಸಿದ್ದರು. ಆದರೆ ಶ್ರೀಮತಿ ಸುಪ್ರಿಯಾ ಸುಳೆ ಮತ್ತು ಪಕ್ಷದ ನಾಯಕ ಪ್ರಫುಲ್ ಪಟೇಲ್ ಅವರನ್ನು ಜೂನ್ 10 ರಂದು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಯ್ತು.  ಆ ಪಕ್ಷದಲ್ಲಿ ಹಿರಿಯ ನಾಯಕನಾಗಿದ್ದ ಅಜಿತ್ ಪವಾರ್ ಪ್ರಾಮುಖ್ಯತೆ ಕಳೆದುಕೊಂಡರು. ಈ ಎಲ್ಲಾ ವಿಚಾರಗಳಿಂದ ಬೇಸರ ಗೊಂಡಿದ್ದ ಅಜಿತ್ ಪವಾರ್, ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನದಿಂದ ಕೆಳಗಿಳಿಯುವ ಇಚ್ಛೆಯನ್ನು ಸಾರ್ವಜನಿಕವಾಗಿ ವ್ಯಕ್ತಪಡಿಸಿದ ಕೆಲವೇ ದಿನಗಳಲ್ಲಿ ಈ ಮಹತ್ವದ ಬೆಳವಣಿಗೆ ನಡೆದಿದೆ.
ಎನ್‌ಸಿಪಿ ಪಕ್ಷದ ರಾಜ್ಯ ಘಟಕ ಅಧ್ಯಕ್ಷ ಸ್ಥಾನ ನಿರಾಕರಣೆ ಬಳಿಕ ಬಂಡಾಯವೆದ್ದ ಅಜಿತ್ ಪವಾರ್ ಅವರು ಸಭೆ ನಡೆಸಿದ್ದರು. ಇದರ ಬೆನ್ನಲ್ಲೆ ಏಕನಾಥ್ ಶಿಂಧೆ ಅವರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಯಾಣ ವಚನ ಸ್ವೀಕರಿಸಿದ್ದಾರೆ.ಬಿಜೆಪಿ-ಶಿವಸೇನೆ ಶಿಂಧೆ ಬಣದೊಂದಿಗೆ ಕೈಜೋಡಿಸಿ ಅವರೊಂದಿಗೆ ಸೇರಿಕೊಂಡಿದ್ದಾರೆ. ಅಜಿತ್ ಜತೆಗೆ 9 ಮಂದಿ ಸಂಪುಟ ಸೇರಿದ್ದಾರೆ. ದೇವೇಂದ್ರ ಫಡ್ನವೀಸ್‌ ಅವರೊಂದಿಗೆ ಅಜಿತ್‌ ಪವಾರ್‌ 2ನೇ ಡಿಸಿಎಂ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.
VIDEO| ಸಿಂಹಕ್ಕೆ ನೀರು ಕುಡಿಸಿದ ಯುವಕ: ಈತನ ಧೈರ್ಯಕೆ ನೀವು ಏನು ಹೇಳುತ್ತೀರಾ..?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 4 =
Remember me
