ನವದೆಹಲಿ:ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಭಾರತಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಗುಜರಾತ್​ನ ಅಹಮದಾಬಾದ್​, ಆಗ್ರಾಗಳಲ್ಲೆಲ್ಲ ಭರ್ಜರಿ ಸಿದ್ಧತೆ ನಡೆಯುತ್ತಿದೆ.
ಈ ಸಿದ್ಧತೆಗಳಿಗೆ ಖರ್ಚಾಗುತ್ತಿರುವ ಹಣದ ಬಗ್ಗೆ ಈಗಾಗಲೇ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.ಇದೀಗ ಕಾಂಗ್ರೆನ್​ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಟ್ರಂಪ್​ ಭೇಟಿ ಮತ್ತು ಅದರ ಸಿದ್ಧತೆಗಾಗಿ ವೆಚ್ಚ ಮಾಡುತ್ತಿರುವ ಹಣದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಏನನ್ನು ಮುಚ್ಚಿಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆಂದು ಸಿದ್ಧತೆಗಾಗಿ ಕೇಂದ್ರ ಸರ್ಕಾರ 100 ಕೋಟಿ ರೂಪಾಯಿಯನ್ನು ಖರ್ಚು ಮಾಡುತ್ತಿದೆ. ಹಣದ ಬಳಕೆ ಮಾಡುವ ಸಂಬಂಧ ಆಯೋಗವನ್ನು ರಚಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಆ ಆಯೋಗ ಯಾವುದು? ಅದರಲ್ಲಿ ಯಾರ್ಯಾರೆಲ್ಲ ಇದ್ದಾರೆ? ನಮಗೆ ಯಾರಿಗೂ ಗೊತ್ತಿಲ್ಲ. ಈ ಸರ್ಕಾರ ಜನರಿಂದ ಏನನ್ನು ಮುಚ್ಚಿಡುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 2 =
Remember me
