ನವದೆಹಲಿ:ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ನೀಡಿದ ಹೇಳಿಕೆಯು ಲೋಕಸಭೆಯಲ್ಲಿ ಕೋಲಾಹಲ ಸೃಷ್ಟಿಸಿತು. ಜಾತಿ ಗೊತ್ತಿಲ್ಲದವರು ಜಾತಿ ಗಣತಿಯ ಬಗ್ಗೆ ಮಾತನಾಡುತ್ತಾರೆ ಎಂಬ ಅನುರಾಗ್ ಠಾಕೂರ್ ಅವರ ಹೇಳಿಕೆಗೆ ಅವರು ನನ್ನನ್ನು ನಿಂದಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದರು.
ಇದನ್ನು ಓದಿ:ಭಾರತೀಯರು ಅಭಿಮನ್ಯು ಅಲ್ಲ.. ಅರ್ಜುನ ಎಂಬುದು ನೆನಪಿರಲಿ: ರಾಹುಲ್​ ಗಾಂಧಿ
ಈ ದೇಶದಲ್ಲಿ ದಲಿತ ಮತ್ತು ಹಿಂದುಳಿದವರ ಸಮಸ್ಯೆ ಪರವಾಗಿ ಯಾರೇ ಮಾತನಾಡಿದರು ಅಥವಾ ಅವರಿಗಾಗಿ ಹೋರಾಡಿದರೆ ಇತರರ ನಿಂದನೆಗೆ ಗುರಿಯಾಗುತ್ತಾರೆ. ನನ್ನನ್ನು ನೀವು ಎಷ್ಟು ಬೇಕಾದರೂ ಅವಮಾನಿಸಬಹುದು. ನಾನು ಎಲ್ಲಾ ನಿಂದನೆಗಳನ್ನು ಸಂತೋಷದಿಂದ ತೆಗೆದುಕೊಳ್ಳುತ್ತೇನೆ. ಆದರೆ ಸಂಸತ್ತಿನಲ್ಲಿ ಜಾತಿ ಗಣತಿ ಮಸೂದೆಯನ್ನು ಅಂಗೀಕರಿಸುತ್ತೇವೆ ಎಂಬುದನ್ನು ನೀವು ಮರೆಯಬಾರದು ಎಂದು ಹೇಳಿದರು.
ಅನುರಾಗ್ ಠಾಕೂರ್ ನನ್ನನ್ನು ನಿಂದಿಸಿದ್ದಾರೆ ಮತ್ತು ಅವಮಾನಿಸಿದ್ದಾರೆ. ಆದರೆ ನಾನು ಅವರಿಂದ ಯಾವುದೇ ಕ್ಷಮೆಯನ್ನು ಬಯಸುವುದಿಲ್ಲ ಎಂದು ರಾಹುಲ್​ಗಾಂಧಿ ಹೇಳಿದರು.
VIDEO | Monsoon Session: “Those whose caste is not known, talks about the caste census. I want to remind the Speaker that in this House itself, a former prime minister RG-1 had opposed reservation for OBCs,” says BJP MP Anurag Thakur (@ianuragthakur) in Lok Sabha.“You can…pic.twitter.com/MPaFnDECB8
ಆದರೆ ಅನುರಾಗ್ ಠಾಕೂರ್ ಅವರು ತಮ್ಮ ಹೇಳಿಕೆಯಲ್ಲಿ ಯಾರನ್ನೂ ಹೆಸರಿಸಿಲ್ಲ ಎಂದು ತಿಳಿಸಿದರು. ಜಾತಿ ಗೊತ್ತಿಲ್ಲದವರು ಜಾತಿ ಗಣತಿಯ ಬಗ್ಗೆ ಮಾತನಾಡುತ್ತಾರೆ. ಈ ಸದನದಲ್ಲಿಯೇ ಮಾಜಿ ಪ್ರಧಾನಿ ಆರ್‌ಜಿ-1 ಒಬಿಸಿಗಳಿಗೆ ಮೀಸಲಾತಿಯನ್ನು ವಿರೋಧಿಸಿದ್ದರು ಎಂಬುದನ್ನು ಸ್ಪೀಕರ್‌ಗೆ ನೆನಪಿಸಲು ಬಯಸುತ್ತೇನೆ ಎಂದು ಬಿಜೆಪಿ ಸಂಸದ ಅನುರಾಗ್ ಠಾಕೂರ್ ಸದನದಲ್ಲಿ ಹೇಳಿದರು.(ಏಜೆನ್ಸೀಸ್​​)
ಅಭಿವೃದ್ಧಿ ಹೊಂದಿದ ದೇಶವಾಗಿ ಭಾರತ ಸ್ವಾತಂತ್ರ್ಯದ ಶತಮಾನೋತ್ಸವವನ್ನು ಆಚರಿಸಲಿದೆ; ಪ್ರಧಾನಿ ಮೋದಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − eight =
Remember me
