ಲಖನೌ:ಗ್ಯಾಂಗ್​ಸ್ಟರ್​ ಅತೀಕ್​ ಅಹಮದ್​​ ಮತ್ತು ಆತನ ಸಹೋದರ ಆಶ್ರಫ್​ ಅಹಮದ್​​ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಪತ್ರಕರ್ತರ ಸೋಗಿನಲ್ಲಿ ಹತ್ಯೆಪ್ರಯಾಗರಾಜ್​ನಲ್ಲಿ ಅತೀಕ್​ ಮತ್ತು ಅಶ್ರಫ್​ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುವಾಗ ಪತ್ರಕರ್ತರ ವೇಷದಲ್ಲಿ ಬಂದಿದ್ದ ಮೂವರು ದಾಳಿಕೋರರು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ನಿನ್ನೆ (ಏಪ್ರಿಲ್​ 16) ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ವೈದ್ಯಕೀಯ ತಪಾಸಣೆಗಾಗಿ ಇಬ್ಬರಿಗೂ ಕೈಕೋಳ ತೊಡಿಸಿ ಪೊಲೀಸರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಪತ್ರಕರ್ತ ಅವರನ್ನು ಹಿಂಬಾಲಿಸುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಪತ್ರಕರ್ತರ ನಡುವೆ ಅವರ ಸೋಗಿನಲ್ಲಿದ್ದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.ಇದನ್ನೂ ಓದಿ:ಬಾವಲಿ.. ಹಾವಳಿಯಷ್ಟೇ ಅಲ್ಲ..: ಶಕ್ತಿಶಾಲಿ ಸಸ್ತನಿಗಳ ಕೌತುಕಮಯ ಜೀವನದತ್ತ ಒಂದು ಇಣುಕು ನೋಟ
ಮಾಹಿತಿ ನೀಡಿದ ಪೊಲೀಸರುಘಟನೆಯ ಬೆನ್ನಲ್ಲೇ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಬಂಧಿತರು ಯಾರು ಎಂಬುದರ ಬಗ್ಗೆ ಪೊಲೀಸರು ಮಾಹಿತಿ ನೀಡಿಲ್ಲ. ಆದರೆ, ಆರೋಪಿಗಳು ಇಬ್ಬರನ್ನು ಕೊಲೆ ಮಾಡಿದ ಬಳಿಕ ಜೈ ಶ್ರೀರಾಮ ಎಂದು ಘೋಷಣೆ ಕೂಗಿದ್ದಾರೆಂದು ಹೇಳಲಾಗಿದೆ.
ಕಾಟ್ರಿಡ್ಜ್​ಗಳು ಪತ್ತೆಘಟನಾ ಸ್ಥಳದಲ್ಲಿ ಹತ್ತು ಖಾಲಿ ಕಾಟ್ರಿಡ್ಜ್‌ಗಳು ಪತ್ತೆಯಾಗಿದ್ದು, ಇದು ಗುಂಡು ಹಾರಿಸಿರುವುದಕ್ಕೆ ಸಾಕ್ಷಿಯಾಗಿದೆ.
ಸಿಎಂ ಯೋಗಿ ಅಸಮಾಧಾನಈ ಪ್ರಕರಣವನ್ನು ಉತ್ತರ ಪ್ರದೇಶ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಗ್ಯಾಂಗ್​ಸ್ಟರ್​ ಕಂ ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ಪ್ರಯಾಗ್‌ರಾಜ್‌ನಲ್ಲಿ ಬಿಗಿ ಪೊಲೀಸ್ ಭದ್ರತೆಯ ನಡುವೆಯೂ ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿದ ಬೆನ್ನಲ್ಲೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಸೇರಿದಂತೆ ಯುಪಿ ಪೊಲೀಸ್‌ನ ಹಿರಿಯ ಅಧಿಕಾರಿಗಳ ಸಭೆ ಕರೆದರು. ಲಖನೌದಲ್ಲಿರುವ ಸಿಎಂ ಯೋಗಿ ಸರ್ಕಾರಿ ನಿವಾಸದಲ್ಲಿ ಸಭೆ ನಡೆದಿದ್ದು, ಮೂಲಗಳ ಪ್ರಕಾರ ಬಿಗಿ ಪೊಲೀಸ್ ಭದ್ರತೆಯ ನಡುವೆ ಅತೀಕ್ ಮತ್ತು ಅಶ್ರಫ್ ಹತ್ಯೆಗೆ ಮುಖ್ಯಮಂತ್ರಿ ಯೋಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.(ಏಜೆನ್ಸೀಸ್​)ಇದನ್ನೂ ಓದಿ:ಭಾಜಪದ ಮತ್ತೊಂದು ವಿಕೆಟ್ ಪತನ, ಶೆಟ್ಟರ್​ ಬಿಜೆಪಿಗೆ ಗುಡ್​ಬೈ; ನಾಳೆಯೇ ರಾಜೀನಾಮೆ
ಪಾತಕಿ ಅತೀಖ್ ಅಹಮದ್​ ಜತೆಗೆ ಸಹೋದರ ಅಶ್ರಫ್ ಅಹಮದ್ ಕೂಡ ಗುಂಡಿಗೆ ಬಲಿ!

ಸೇತುವೆಯಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್​ ಟ್ರಾಲಿ: 8 ಅಪ್ರಾಪ್ತರು ಸೇರಿ 11 ಮಂದಿ ದುರ್ಮರಣ

ಸಂಸ್ಕಾರ, ಸಂಸ್ಕೃತಿ, ಸಂಪ್ರದಾಯದ ಬೀಡು ಅಜ್ಜಿ ಮನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 18 =
Remember me
