ಮೆಟಾ ಪರಿಚಯಿಸಲಿರುವ ಈ ಹೊಸ ವೈಶಿಷ್ಟ್ಯದ ಮೂಲಕ ಒಂದು ವಾಟ್ಸ್​ಆ್ಯಪ್ ಅಪ್ಲಿಕೇಶನ್‌ನಲ್ಲಿ ಅನೇಕ ವಾಟ್ಸ್​ಆ್ಯಪ್​ ಖಾತೆಗಳನ್ನು ಸ್ವಿಚ್ ರೀತಿಯಲ್ಲಿ ತೆರೆಯಬಹುದು. ಈಗಾಗಲೇ ಈ ಆಯ್ಕೆ ಇನ್​ಸ್ಟಾಗ್ರಾಮ್ ಮತ್ತು ಫೇಸ್​ಬುಕ್​ನಲ್ಲಿ ಇದೆ. ಶೀಘ್ರದಲ್ಲೇ ವಾಟ್ಸ್​ಆ್ಯಪ್​ ತನ್ನ ಬಳಕೆದಾರರ ಈ ಆಯ್ಕೆಯನ್ನು ನೀಡಲಿದೆ.
ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ಅನುಕೂಲಕ್ಕೆ ತಕ್ಕಂತೆ ಹೊಸದಾದ ಫೀಚರ್​​ಗಳನ್ನ ಪರಿಚಯಿಸುತ್ತಿದೆ. ಇನ್ನುಂದೆ ನಿಮಗೆ ಈ ಹೊಸ ವೈಶಿಷ್ಟ್ಯದ ಮೂಲಕ ಒಂದೇ ವಾಟ್ಸ್​ಆ್ಯಪ್​ನಲ್ಲಿ ವಿಭಿನ್ನ ಖಾತೆಗಳನ್ನು ಬಳಸಬಹುದಾಗಿದೆ.
ವಾಟ್ಸ್​ಆ್ಯಪ್​ ತನ್ನ ಬಳಕೆದಾರರ ಈ ಆಯ್ಕೆಯನ್ನು ನೀಡಲಿದೆ ಎಂದು ವರದಿ ಆಗಿದೆ. ಸುಲಭವಾಗಿ ಹೇಳಬೇಕೆಂದರೆ, ಈ ಹೊಸ ವೈಶಿಷ್ಟ್ಯದ ಮೂಲಕ ಒಂದು ವಾಟ್ಸ್​ಆ್ಯಪ್ ಅಪ್ಲಿಕೇಶನ್‌ನಲ್ಲಿ ಅನೇಕ ವಾಟ್ಸ್​ಆ್ಯಪ್​ ಖಾತೆಗಳನ್ನು ಸ್ವಿಚ್ ರೀತಿಯಲ್ಲಿ ತೆರೆಯಬಹುದು.
ಆಂಡ್ರಾಯ್ಡ್ ಆವೃತ್ತಿ 2.23.17.8 ಗಾಗಿ ವಾಟ್ಸ್​ಆ್ಯಪ್​ ಬೀಟಾವನ್ನು ಅಪ್‌ಡೇಟ್ ಮಾಡಿದರೆ ಈ ಆಯ್ಕೆ ಸಿಗಲಿದೆ. ಆದಾಗ್ಯೂ ಕೆಲವು ಬಳಕೆದಾರರಿಗೆ ಹಿಂದಿನ 2.23.17.7 ಆವೃತ್ತಿಯಲ್ಲಿ ಈ ವೈಶಿಷ್ಟ್ಯವನ್ನು ಉಪಯೋಗಿಸಲು ಸಾಧ್ಯವಾಗುತ್ತಿದೆ.
ಹೊಸ ವೈಶಿಷ್ಟ್ಯವು ಬಳಕೆದಾರರಿಗೆ ಬಹು ಖಾತೆಗಳನ್ನು ನಿರ್ವಹಿಸುವ ಅನುಕೂಲವನ್ನು ಒದಗಿಸುವುದಲ್ಲದೆ, ಒಂದೇ ಅಪ್ಲಿಕೇಶನ್‌ನಲ್ಲಿ ಖಾಸಗಿ ಚಾಟ್‌ಗಳು, ಕೆಲಸದ ಸಂಭಾಷಣೆಗಳು ಮತ್ತು ಇತರ ಸಂದೇಶಗಳಿಗೆ ಸಹಾಯ ಮಾಡುತ್ತದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
