ನವದೆಹಲಿ: ಮಳೆ ಕೊರತೆಯಿಂದಾಗಿ ಆಹಾರ ಧಾನ್ಯಗಳ ಇಳುವರಿ ಕುಸಿತ ಕಾಣುತ್ತಿರುವ ಹಿನ್ನೆಯಲ್ಲಿ ಆಹಾರ ಪದಾರ್ಥಗಳ ಬೆಲೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಈ ನಡುವೆಯೇ ಒಂದಿಷ್ಟು ನಿರಾಳತೆ ಮೂಡಿಸುವ ಸುದ್ದಿಯೊಂದು ಬಂದಿದೆ. ದಿನನಿತ್ಯದ ಆಹಾರ ತಯಾರಿಕೆಯಲ್ಲಿ ಬಳಸಲಾಗುವ ಗೋಧಿ, ಅಕ್ಕಿ ಮತ್ತು ಸಕ್ಕರೆ ಬೆಲೆಗಳು ಸದ್ಯಕ್ಕೆ ಹೆಚ್ಚಳವಾಗುವ ಸಾಧ್ಯತೆಗಳು ಇಲ್ಲ.
ಗೋಧಿ, ಅಕ್ಕಿ ಮತ್ತು ಸಕ್ಕರೆ ಮೇಲಿನ ರಫ್ತು ನಿರ್ಬಂಧಗಳನ್ನು ತೆಗೆದುಹಾಕುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಶನಿವಾರ ಹೇಳಿದ್ದಾರೆ.
ದೇಶವು ಗೋಧಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವುದಿಲ್ಲ ಎಂದೂ ಅವರು ತಿಳಿಸಿದ್ದಾರೆ.
“ಗೋಧಿ, ಅಕ್ಕಿ ಮತ್ತು ಸಕ್ಕರೆ ಮೇಲಿನ ರಫ್ತು ನಿರ್ಬಂಧಗಳನ್ನು ತೆಗೆದುಹಾಕುವ ಯಾವುದೇ ಪ್ರಸ್ತಾಪವಿಲ್ಲ. ಅಲ್ಲದೆ, ಭಾರತವು ಗೋಧಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವುದಿಲ್ಲ” ಎಂದು ಗೋಯಲ್ ಅವರು ಸುದ್ದಿಗಾರರಿಗೆ ತಿಳಿಸಿದರು.
ಹೆಚ್ಚುತ್ತಿರುವ ದೇಶೀಯ ಬೆಲೆಗಳನ್ನು ನಿಯಂತ್ರಿಸುವ ಕ್ರಮಗಳ ಭಾಗವಾಗಿ ಕೇಂದ್ರ ಸರ್ಕಾರವು 2022ರ ಮೇ ತಿಂಗಳಲ್ಲಿ ಗೋಧಿ ರಫ್ತಿನ ಮೇಲೆ ನಿಷೇಧ ಹೇರಿತ್ತು, 2023ರ ಜುಲೈನಿಂದ ಬಾಸ್ಮತಿ ತಳಿ ಹೊರತುಪಡಿಸಿದ ಅಕ್ಕಿಯೇ ರಫ್ತು ನಿರ್ಬಂಧ ಹೇರಲಾಗಿತ್ತು. ಇದಲ್ಲೆ, 2023ರ ಅಕ್ಟೋಬರ್ ತಿಂಗಳಲ್ಲಿ ಸಕ್ಕರೆ ರಫ್ತಿನ ಮೇಲೆ ನಿರ್ಬಂಧಗಳನ್ನು ವಿಧಿಸಿತ್ತು.

ಬೋನಸ್​ ಷೇರು ನೀಡಲಿದೆ ಐಟಿ ಸಾಫ್ಟ್‌ವೇರ್ ಮಿಡ್ ಕ್ಯಾಪ್ ಕಂಪನಿ: ಸ್ಟಾಕ್ ಬೆಲೆ ಒಂದೇ ವರ್ಷದಲ್ಲಿ ಶೇಕಡಾ 350 ಹೆಚ್ಚಳ

ಬ್ರಿಟಿಷ್​ ರಾಯಭಾರಿಯ ಪಿಒಕೆ ಭೇಟಿ: ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದೇಕೆ?

ಅಯೋಧ್ಯೆ ಸಂಬಂಧಿತ ಮತ್ತೊಂದು ಷೇರು: ಎರಡೇ ದಿನಗಳಲ್ಲಿ ಶೇಕಡಾ 37.6 ಹೆಚ್ಚಳ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 7 =
Remember me
