ಬೆಂಗಳೂರು:ಬಿಸಿಲ ತಾಪದಿಂದ ಕಂಗೆಟ್ಟಿದ್ದ ಜನರಿಗೆ ಯುಗಾದಿ ಮರುದಿನ ಆರಂಭವಾಗಿರುವ ಬೇಸಿಗೆ ಮಳೆ ನಿನ್ನೆ ಇನ್ನಷ್ಟು ಜಿಲ್ಲೆಗಳಿಗೆ ವಿಸ್ತರಿಸಿದೆ. 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕೆಲಕಾಲ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಆದರೆ ಬೆಂಗಳೂರಿನಲ್ಲಿ ಮಾತ್ರ ಮಳೆರಾಯನ ಸುದ್ದಿಯೆ ಇಲ್ಲದಂತಾಗಿದೆ.
ನಿನ್ನೆ ರಾಯಚೂರು, ಚಿಕ್ಕಮಗಳೂರು, ದಾವಣಗೆರೆ, ಬೀದರ್‌, ವಿಜಯಪುರ, ಯಾದಗಿರಿ, ದಕ್ಷಿಣ ಕನ್ನಡ, ಉಡುಪಿ, ವಿಜಯನಗರ, ಬಳ್ಳಾರಿ, ಹಾವೇರಿ, ಧಾರವಾಡ, ಗದಗ, ಕೊಪ್ಪಳ, ಶಿವಮೊಗ್ಗ ಸೇರಿ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕೆಲಕಾಲ ಗುಡುಗು ಸಹಿತ ಉತ್ತಮ ಮಳೆಯಾಗಿದೆ.
ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಏಪ್ರಿಲ್ 15 ಹಾಗೂ 16ರಂದು ರಾಜ್ಯಾದ್ಯಂತ ಒಣಹವೆ ಇರುವ ಸಾಧ್ಯತೆ ಇದೆ. ಅಲ್ಲದೇ ಏಪ್ರಿಲ್‌ 20 ರವರೆಗೂ 25 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರಿನಲ್ಲಿ ಕಳೆದ ವಾರದಲ್ಲಿ ತಾಪಮಾನ ಕಡಿಮೆಯಾಗಿದೆ. ಏಪ್ರಿಲ್ 6 ರಂದು 37.6 ಡಿಗ್ರಿ ಸೆಲ್ಸಿಯಸ್‌ಗೆ ಹೋಲಿಸಿದರೆ, ಏಪ್ರಿಲ್ 13 ರಂದು ಕೇವಲ 34 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರಿನಲ್ಲಿ ಮುಂದಿನ 5 ದಿನಗಳ ಕಾಲ ಬಿಸಿಲಿನ ವಾತಾವರಣ ಮುಂದುವರೆಯಲಿದ್ದು, ಏಪ್ರಿಲ್‌ 19ರ ಬಳಿಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬಿಸಿಲಿನ ಬೇಗೆಗೆ ಬೆಂದು ಬೇಸತ್ತು ಹೋಗಿರುವ ನಗರದ ಜನರು ಮಳೆಗಾಗಿ ಪರಿತಪಿಸುತ್ತಿದ್ದು, ಈ ಭವಿಷ್ಯವಾದರೂ ನಿಜವಾಗಲಿದ್ಯಾ ಎಂದು ಕಾದುನೋಡಬೇಕಿದೆ.
ಭಾರತೀಯ ಹವಾಮಾನ ಇಲಾಖೆಯ ಹಿರಿಯ ವಿಜ್ಞಾನಿ ಎ.ಪ್ರಸಾದ್ ಮಾತನಾಡಿ, ನಗರದಲ್ಲಿ ನಿರೀಕ್ಷಿತ ಮಳೆ ತುಸು ವಿಳಂಬವಾಗಿದೆ. ಆದರೆ, ಇಲ್ಲಿ ಏಪ್ರಿಲ್‌ನಲ್ಲಿಯೇ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ
ದಯವಿಟ್ಟು ಗಂಡ, ಹೆಂಡ್ತಿ ಒಟ್ಟಿಗೆ ಸ್ನಾನ ಮಾಡಿ; ನೀರು ಉಳಿಸಲು ಮೇಯರ್‌ ಕೊಟ್ರು ಈ ಸಲಹೆ

ಅಲ್ಲಿ ವೋಟು ಹಾಕಿ, ಇಲ್ಲಿ ಊಟ ಮಾಡಿ; ಮತದಾರರಿಗೆ ಆಫರ್​ ಕೊಟ್ಟ ರೆಸ್ಟೋರೆಂಟ್​​ಗಳು

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:9 + two =
Remember me
