ನವದೆಹಲಿ:ವಿಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಕುರಿತು ಚರ್ಚಿಸಲು ನಿಮಗೆ ಯಾವಾಗ ಧೈರ್ಯ ಬರುತ್ತದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಸದನದಲ್ಲಿ ಪ್ರಶ್ನಿಸಿದ್ದಾರೆ.
ಮಣಿಪುರದಲ್ಲಿನ ಜನಾಂಗೀಯ ಘರ್ಷಣೆ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸಿ ವಿಪಕ್ಷಗಳು ಸದನದಲ್ಲಿ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಅವರ ಈ ಪ್ರತಿಕ್ರಿಯೆ ಬಂದಿದೆ.
ಸಂಸತ್​ ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್​ನ ಆಮೀ ಯಾಗ್ನಿಕ್​ ಮಣಿಪುರದಲ್ಲಿನ ಘರ್ಷಣೆ ಕುರಿತು ಮಹಿಳಾ ಸಚಿವೆಯರು ಯಾಕೆ ತಮ್ಮ ಧ್ವನಿಯನ್ನು ಎತ್ತುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:VIDEO| ಮಹಿಳೆಗೆ ಕಿರುಕುಳ ನೀಡಿದ ಬಿಎಸ್​ಎಫ್​ ಯೋಧ; ಸೇವೆಯಿಂದ ಅಮಾನತು
ಇದಕ್ಕೆ ಉತ್ತರಿಸಿದ ಸಚಿವೆ ಸ್ಮೃತಿ ಇರಾನಿ ಮಹಿಳಾ ಸಚಿವರು ಹಾಗೂ ರಾಜಕಾರಣಿಗಳು ಮಣಿಪುರ, ಛತ್ತೀಸ್​​ಗಢ, ಬಿಹಾರ, ರಾಜಸ್ಥಾನದ ಬಗ್ಗೆಯೂ ಸಹ ಮಾತನಾಡುತ್ತಾರೆ. ಮಣಿಪುರ ಹೊರತುಪಡಿಸಿ ಈ ರಾಜ್ಯಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಚರ್ಚಿಸಲು ನಿಮಗೆ ಯಾವಾಗ ಧೈರ್ಯ ಬರುತ್ತದೆ ಎಂದು ವಿಪಕ್ಷ ನಾಯಕರಿಗೆ ಟಾಂಗ್​ ಕೊಟ್ಟಿದ್ದಾರೆ.
ಕಾಂಗ್ರೆಸ್​ ಹಾಗೂ ಅದರ ಮಿತ್ರಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿನ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಕುರಿತು ಮಾತನಾಡಲು ನಿಮಗೆ ಯಾವಾಗ ಧೈರ್ಯ ಬರುತ್ತದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿಪಕ್ಷ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 4 =
Remember me
