ನವದೆಹಲಿ:ದೇಶದಲ್ಲಿ ವೈದ್ಯ ಪದವಿ ಪ್ರವೇಶಕ್ಕಾಗಿ ನಡೆವ ಪರೀಕ್ಷೆ ‘ನೀಟ್‌’ ಹಾಗೂ ಪ್ರಾಧ್ಯಾಪಕ ಹುದ್ದೆಯ ಅರ್ಹತಾ ಪರೀಕ್ಷೆ ‘ನೆಟ್‌’ನಲ್ಲಿ ವ್ಯಾಪಕ ಅಕ್ರಮಗಳು ನಡೆದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಂಡಿದಡ. ಈ ಪರೀಕ್ಷೆಗಳನ್ನು ನಡೆಸುವ ಹೊಣೆ ಹೊತ್ತಿರುವ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಮುಖ್ಯಸ್ಥ ಸುಬೋಧ್ ಕುಮಾರ್ ಸಿಂಗ್ ಅವರನ್ನು ಎತ್ತಂಗಡಿ ಮಾಡಿ ಅವರ ಸ್ಥಾನಕ್ಕೆ ಕರ್ನಾಟಕ ಕೇಡರ್‌ ನಿವೃತ್ತ ಐಎಎಸ್‌ ಅಧಿಕಾರಿ ಪ್ರದೀಪ್ ಸಿಂಗ್ ಖರೋಲಾ ಅವರನ್ನು ತಾತ್ಕಾಲಿಕ ಅವಧಿಗೆ ನೇಮಿಸಿದೆ.
ಇದನ್ನೂ ಓದಿ:ಸಂಸತ್ತಿನ ಮೊದಲ ಅಧಿವೇಶನ.. ಸಂಸದರ ಪ್ರಮಾಣ ವಚನ ಸ್ವೀಕರಕ್ಕೆ ಸಜ್ಜು
ಎನ್‌ಟಿಎ ಮುಖ್ಯಸ್ಥರ ವಜಾಗೆ ಪ್ರತಿಪಕ್ಷಗಳು ಆಗ್ರಹಿಸುತ್ತ ಬಂದಿದ್ದು, ಸರ್ಕಾರ ಕೊನೆಗೂ ಮಣಿದಿದೆ. ಶನಿವಾರ ರಾತ್ರಿ ಹೊರಡಿಸಿದ ಆದೇಶದಲ್ಲಿ ಸರ್ಕಾರ ಸುಬೋಧ್ ಕುಮಾರ್ ಸಿಂಗ್ ಅವರನ್ನು ವರ್ಗಾವಣೆ ಮಾಡಿದೆ. ಆದರೆ ಅವರಿಗೆ ಯಾವುದೇ ಹುದ್ದೆಯನ್ನು ತೋರಿಸಿಲ್ಲ. ಇದೇ ವೇಳೆ ಅವರ ಸ್ಥಾನಕ್ಕೆ ಪ್ರದೀಪ್ ಸಿಂಗ್ ಖರೋಲಾ ಅವರನ್ನು ನೇಮಿಸಿದೆ.
ಪ್ರಸ್ತುತ ಖರೋಲಾ ಅವರು ಇಂಡಿಯಾ ಟ್ರೇಡ್ ಪ್ರಮೋಷನ್ ಆರ್ಗನೈಸೇಶನ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. ಅವರಿಗೆ ನಿಯಮಿತ ಪದಾಧಿಕಾರಿಯನ್ನು ನೇಮಿಸುವವರೆಗೆ ಅಥವಾ ಮುಂದಿನ ಆದೇಶದವರೆಗೆ ಎನ್‌ಟಿಎ ಎಂಡಿ ಆಗಿ ಹೆಚ್ಚುವರಿಯಾಗಿ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ.
ಖರೋಲಾ ಅವರು ಕರ್ನಾಟಕದಲ್ಲಿ ಐಎಎಸ್‌ ಅಧಿಕಾರಿಯಾಗಿದ್ದಾಗ ಬೆಂಗಳೂರು ಮೆಟ್ರೋ ಮುಖ್ಯಸ್ಥರಾಗಿದ್ದರು. ಹಲವಾರು ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ್ದರು. ಬಳಿಕ ಕೇಂದ್ರ ಸೇವೆಗೆ ವರ್ಗಾವಣೆ ಆಗಿ ವಿಮಾನಯಾನ ಇಲಾಖೆಯ ಕಾರ್ಯದರ್ಶಿ ಆಗಿದ್ದರು.
‘ನಿಮ್ಮ ಅನಾರೋಗ್ಯಕ್ಕೆ ಕಾರಣ ಕೇಳಬಹುದಾ’: ನೆಟ್ಟಿಗನಿಗೆ ನಟಿ ಅನುಸೂಯಾ ಕೌಂಟರ್!​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − three =
Remember me
