ಚೆನ್ನೈ:ಮಾರಚ್​ 01ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಭಾಂಬ್​ ಸ್ಪೋಟಕ್ಕೆ ಸಂಬಂಧಿಸಿದಂತೆ ಕೃತ್ಯ ಎಸಗಿದ್ದ ಉಗ್ರರಿಗೆ ತಮಿಳುನಾಡಿನಲ್ಲಿ ತರಬೇತಿ ನೀಡಲಾಗಿತ್ತು ಎಂದು ಯಾವ ಆಧಾರದ ಮೇಲೆ ಹೇಳಿಕೆ ನೀಡಿದ್ದೀರಾ ಈ ಬಗ್ಗೆ ಸ್ಪಷ್ಟನೆ ಕೊಡಿ ಎಂದು ಕೇಂದ್ರ ಸಚಿವೆ ಶೋಬಾ ಕರಂದ್ಲಾಜೆಗೆ ಮದ್ರಾಸ್​ ಹೈಕೋರ್ಟ್​ ಚಾಟಿ ಬೀಸಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ ಆರೋಪಿಗಳು ತಮಿಳುನಾಡಿನಲ್ಲಿ ತರಬೇತಿಯನ್ನು ಪಡೆದಿದ್ದರು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದರು. ಇದರ ವಿರುದ್ದ ಮಧುರೈ ನಗರದ ನಿವಾಸಿಯೊಬ್ಬರು ದೂರು ದಾಖಲಿಸಿದ್ದರು. ಬಾಂಬರ್‌ಗಳು ತಮಿಳುನಾಡಿನಲ್ಲಿ ತರಬೇತಿ ಪಡೆದುಕೊಂಡಿದ್ದರು ಎಂದು ಶೋಭಾ ಕರಂದ್ಲಾಜೆ ಹೇಳಿರುವುದು ಒಂದು ಭಾಷಿಗರನ್ನು ಅವಮಾನಿಸಿದಂತೆ. ಅಲ್ಲದೇ, ತಮಿಳರು ಮತ್ತು ಕನ್ನಡಿಗರ ನಡುವೆ ದ್ವೇಷ ಹುಟ್ಟಿಸುವಂತಹ ಹೇಳಿಕೆಯಾಗಿದೆ ಎಂದು ಆರೋಪಿಸಿ, ಮಾರ್ಚ್ 20ರಂದು ಮಧುರೈ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿತ್ತು.
ಮಧುರೈ ಪೊಲೀಸ್​ ಠಾಣೆಯಲ್ಲಿ ದಾಖಲಾಗಿರುವ FIR ರದ್ದುಪಡಿಸುವಂತೆ ಕೋರಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮದ್ರಾಸ್​ ಹೈಕೋರ್ಟ್​ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜಸ್ಟಿಸ್​ ಜಿ. ಜಯಚಂದ್ರನ್​ ಕೇಂದ್ರ ಸಚಿವೆಯ ವಿರುದ್ಧ ಗರಂ ಆಗಿದ್ದಾರೆ. ನೀವು ಜವಾಬ್ದಾರಿಯುತವಾಗಿ ನಡೆದುಕೊಂಡಿಲ್ಲ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:ನೀಟ್​ ಪ್ರಶ್ನೆಪತ್ರಿಕೆ ಸ್ಕ್ಯಾಮ್​; ಕಿಂಗ್​ಪಿನ್​​ನನ್ನು ಅರೆಸ್ಟ್​ ಮಾಡಿದ ಸಿಬಿಐ
ತರಬೇತಿ ಪಡೆದ ವ್ಯಕ್ತಿಗಳು ಯಾರು, ಅವರಿಗೆ ತರಬೇತಿ ನೀಡಿದವರು ಮತ್ತು ಅವರು ಏನು ಮಾಡಿದ್ದಾರೆಂದು ನಿಮಗೆ ತಿಳಿದಿದ್ದರೆ ಕೇಂದ್ರ ಸಚಿವೆಯಾಗಿ ನಿಮಗಿರುವ ಮಾಹಿತಿಯನ್ನು ಪೊಲೀಸರಿಗೆ ತಿಳಿಸಬೇಕಾಗಿತ್ತು. ಆದರೆ, ನೀವು ಜವಾಬ್ದಾರಿಯುತವಾಗಿ ನಡೆದುಕೊಂಡಿಲ್ಲ. ಎನ್ಐಎ ತನಿಖೆ ನಡೆಸಿ ಪ್ರಕಟಣೆ ಹೊರಡಿಸುವ ಮುನ್ನ, ನೀವು ನೀಡಿರುವ ಹೇಳಿಕೆ ತಪ್ಪು. ದಾಖಲಾಗಿರುವ FIRಗೆ ಮಧ್ಯಂತರ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಹೇಳಿ ಅರ್ಜಿ ವಿಚಾರಣೆಯನ್ನು ಜುಲೈ 12ಕ್ಕೆ ಮುಂದೂಡಿದ್ದಾರೆ.
ಸರ್ಕಾರದ ಪರ ವಾದ ಮಂಡಿಸಿದ ಮಂಡಿಸಿದ ಅಡ್ವೋಕೆಟ್ ಕೆಎಂಡಿ ಮುಹಿಲನ್, NIA ಅಧಿಕೃತ ಹೇಳಿಕೆ ನೀಡುವ ಮುನ್ನವೇ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿರುವುದು ಖಂಡರ್ನಾಹ. ಇದು ಎರಡು ಪಂಗಡಗಳ ನಡುವೆ ವಿನಾಕಾರಣ ದ್ವೇಷಕ್ಕೆ ಕಾರಣವಾಗುತ್ತದೆ ಎಂದು ನ್ಯಾಯಪೀಠದ ಮುಂದೆ ವಾದ ಮಂಡಿಸುವ ಮೂಲಕ ನ್ಯಾಯಾಧೀಶರ ಗಮನ ಸೆಳೆದರು.
ಮಾರ್ಚ್ 01 ರಂದು ಮಧ್ಯಾಹ್ನ 12:55 ರ ಸುಮಾರಿಗೆ ಕುಂದಲಹಳ್ಳಿ ಅಲ್ಲಿ ಇರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ಗಳನ್ನು ಸ್ಫೋಟಿಸಲಾಗಿತ್ತು. ಕೃತ್ಯ ಎಸಗಿದ ಆರೋಪಿಗಳಾದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್ ಅನ್ನು ಎನ್ಐಎ ಅಧಿಕಾರಿಗಳು, ಘಟನೆ ನಡೆದ 43 ದಿನಗಳ ಬಳಿಕ, ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದರು. ಈ ಪ್ರಕರಣ ರಾಷ್ಟ್ರವ್ಯಾಪಿ ಭಾರೀ ಸದ್ದು ಮಾಡಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
