ಕೊಲ್ಕತಾ:ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಬೆನ್ನಿಗೆ ಬೆಂಬಲವಾಗಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್​ ಪಕ್ಷ ನಿಂತಿದೆ.
ಚುನಾವಣೆ ಪ್ರಚಾರದ ವೇಳೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ದೀದಿ ಓ ದೀದಿ ಎಂದು ಕರೆಯುವ ಮೂಲಕ ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದಾರೆ. ಮೋದಿ ಉಪನಾಮದ ಕುರಿತು ಮಾತನಾಡಿದ ರಾಹುಲ್​ ಗಾಂಧಿ ಅವರಿಗೆ ಅನರ್ಹ ಶಿಕ್ಷೆ ಎಂದಾದರೆ ಪ್ರಧಾನಿ ನರೇಂದ್ರ ಮೋದಿ, ಸುವೇಂದು ಅಧಿಕಾರಿ ಸೇರಿದಂತೆ ಬಿಜೆಪಿ ನಾಯಕರನ್ನು ಅನರ್ಹಗೊಳಿಸಬೇಕು ಎಂದು TMC ಆಗ್ರಹಿಸಿದೆ.
ಈ ಕುರಿತು ಪ್ರತಿಕ್ರಿಯಿಸಿರುವ TMC ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್​ ಬ್ಯಾನರ್ಜಿ ದೀದಿ ಓ ದೀದಿ ಕ್ಯಾಟ್​ಕಾಲ್​ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮಹಿಳೆಯರಿಗೆ ಅಪಮಾನ ಮಾಡಿದ್ಧಾರೆ. ಹಾಗಾದರೆ ಪ್ರಧಾನಿ ಮೋದಿ ಅವರನ್ನು ಅವರ ಸ್ಥಾನದಿಂದ ಏಕೆ ಅನರ್ಹಗೊಳಿಸಬಾರದು ಎಂದು ಪ್ರಶ್ನಿಸಿದ್ದಾರೆ.
ಇದಲ್ಲದೆ ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕರಾದ ಸುವೇಂದು ಅಧಿಕಾರಿ ಎಸ್​ಸಿ ಸಮುದಾಯಕ್ಕೆ ಸೇರಿದ್ದ ಸಚಿವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ಧಾರೆ. ಕಳೆದ ವರ್ಷ ನವೆಂಬರ್​ನಲ್ಲಿ TMC ಪಕ್ಷವು ಸುವೇಂದು ಅಧಿಕಾರಿ ಶಾಸಕರಾದ ದೇಬನಾಥ್​ ಹನ್ಸ್ಡಾ, ಬಿರ್ಬಹಾ ಹನ್ಸ್ಡಾ ತಮ್ಮ ಕಾಲಿನ ಕೆಳಗೆ ಇರುವವರು ಎಂದು ಹೇಳಿಕೆ ನೀಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು.
ಇದನ್ನೂ ಓದಿ:ರಾಜಕಾರಣದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದರೆ ದ್ವೇಷ ಭಾಷಣ ನಿಲ್ಲುತ್ತದೆ: ಸುಪ್ರೀಂ ಕೋರ್ಟ್​
ಮೋದಿ ಉಪನಾಮದ ಕುರಿತು ವ್ಯಂಗ್ಯವಾಡಿದ್ದಕ್ಕೆ OBC ಭಾವನೆಗಳಿಗೆ ಧಕ್ಕೆ ಆಗಿದೆ ಎಂದು ಆರೋಪಿಸಿ ರಾಹುಲ್​ ಅವರನ್ನು ಅನರ್ಹ ಮಾಡಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ್ದೀರಾ. ಅದೇ ರೀತಿ ನಿಮ್ಮ ಪಕ್ಷದ ನಾಯಕರಿಗೂ ಇದು ಅನ್ವಯವಾಗುವುದಿಲ್ಲವೇ ಎಂದು ಅಭಿಷೇಕ್​ ಕೇಳಿದ್ದಾರೆ.
ಕಾನೂನು ನಿಮಗೆ ಮತ್ತು ನಮಗೆ ಬೇರೆ ಇದೆಯೇ ಸೂರತ್​ ನ್ಯಾಯಾಲಯದ ತೀರ್ಪನ್ನು ಉದಾಹರಣೆಯಾಗಿ ತೆಗೆದುಕೊಂಡು ನಾನು ನಮ್ಮ ವಕೀಲರಿಗೆ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಯಾಗಿ ಮೊಕದ್ದಮೆಯನ್ನು ದಾಖಲಿಸಲು ಸೂಚಿಸುತ್ತೇನೆ ಎಂದು ತಿಳಿಸಿದ್ದಾರೆ.
ಮಾನನಷ್ಟ ಮೊಕದ್ದಮೆ ಮತ್ತು ಸಂಸತ್​ ಸದಸ್ಯತ್ವದಿಂದ ಅನರ್ಹತೆ ವಿಚಾರವಾಗಿ ರಾಹುಲ್​ ಗಾಂಧಿ ಅವರನ್ನು ಬೆಂಬಲಿಸಲು ತೃಣಮೂಲ ಕಾಂಗ್ರೆಸ್​ ನಿರ್ಧರಿಸಿದೆ. ಮುಂದಿನ ದಿನಗಳಲ್ಲಿ ವಿರೋಧ ಪಕ್ಷದ ನಾಯಕರ ಮೇಲೂ ಈ ರೀತಿ ಆಗಬಹುದೆಂಬ ಕಾರಣಕ್ಕೆ ನಾವು ರಾಹುಲ್​ ಗಾಂಧಿ ಅವರನ್ನು ಬೆಂಬಲಿಸಿದ್ದೇವೆ ಎಂದು ಅಭಿಷೇಕ್​ ಬ್ಯಾನರ್ಜಿ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
