ನವದೆಹಲಿ:ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ನಡೆಸಿದ ಯುಜಿಸಿ-ನೆಟ್ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ವ್ಯಾಪಕ ಆರೋಪಗಳ ಮೇರೆಗೆ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಇದರಿಂದ ವಿದ್ಯಾರ್ಥಿಗಳು ಸಿಡಿಮಿಡಿಗೊಂಡಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸಿ, ತನಿಖೆ ಪಾರದರ್ಶಕವಾಗಿರಲಿ ಎಂದು ಆಗ್ರಹಿಸಿದ್ದರು. ಅದರಂತೆಯೇ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ ಎಂದು ಶಿಕ್ಷಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಗೋವಿಂದ್ ಜೈಸ್ವಾಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.
ಇದನ್ನೂ ಓದಿ:ಮುಖೇಶ್ ಅಂಬಾನಿ ಮನೆಯಲ್ಲಿ ಚಪಾತಿ ಹೇಗೆ ಮಾಡುತ್ತಾರೆ ಗೊತ್ತಾ? ಕೋಟ್ಯಾಧಿಪತಿಯ ಅಡುಗೆಮನೆಯ ಈ ವಿಧಾನವನ್ನು ನೀವು ಅಳವಡಿಸಿಕೊಳ್ಳಬಹುದು…
9 ಲಕ್ಷಕ್ಕೂ ಅಧಿಕ ಸಂಖ್ಯೆಯ ಅಭ್ಯರ್ಥಿಗಳು ಯುಜಿಸಿ-ನೆಟ್​ ಪರೀಕ್ಷೆ ಬರೆದಿದ್ದಾರೆ. ತೀವ್ರ ವಿವಾದ ಮತ್ತು ಪರೀಕ್ಷೆಗೂ ಮುನ್ನ ಪತ್ರಿಕೆ ಸೋರಿಕೆಯಾದ ಬಗ್ಗೆ ನಡೆಯುತ್ತಿರುವ ತನಿಖೆಯ ಹೊರತಾಗಿಯೂ ಇದೀಗ ವೈದ್ಯಕೀಯ ಪ್ರವೇಶ ಪರೀಕ್ಷೆ (NEET) ಅನ್ನು ರದ್ದುಗೊಳಿಸದಿರಲು ಸರ್ಕಾರ ನಿರ್ಧರಿಸಿದೆ. ಈ ನಿಲುವನ್ನು ಸಮರ್ಥಿಸಿಕೊಂಡ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಸೋರಿಕೆಯು ಸೀಮಿತ ಸಂಖ್ಯೆಯ ವಿದ್ಯಾರ್ಥಿಗಳ ಮೇಲೆ ಮಾತ್ರ ಪರಿಣಾಮ ಬೀರಿದೆ ಎಂದಿದ್ದಾರೆ.
“ಇದು 2004 ಮತ್ತು 2015ರ ಹಿಂದಿನ ಘಟನೆಗಳಿಗೆ ತೀವ್ರವಾಗಿ ವ್ಯತಿರಿಕ್ತವಾಗಿದೆ. ಅಲ್ಲಿ ವ್ಯಾಪಕವಾದ ಸೋರಿಕೆಯು ಪರೀಕ್ಷೆಯ ರದ್ದತಿಗೆ ಕಾರಣವಾಯಿತು. ಎಕ್ಸಾಂ ರದ್ದುಗೊಳಿಸುವುದರಿಂದ ಸರಿಯಾದ ರೀತಿಯಲ್ಲಿ ಉತ್ತೀರ್ಣರಾದ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ. ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಹಾಗಾಗಿ ನ್ಯಾಯಾಲಯವು ತೆಗೆದುಕೊಳ್ಳುವ ಯಾವುದೇ ನಿರ್ಧಾರ ಅಂತಿಮವಾಗಿರಲಿದೆ” ಎಂದು ಹೇಳಿದ್ದಾರೆ,(ಏಜೆನ್ಸೀಸ್).
ಜನ ನೋಡಿ ಅಪಹಾಸ್ಯ ಮಾಡ್ತಿದ್ದಾರೆ! ಇಷ್ಟಾದ್ರೂ… ಪಿಸಿಬಿ ವಿರುದ್ಧ ಮಾಜಿ ಕ್ರಿಕೆಟಿಗ ಗರಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 2 =
Remember me
