ನವದೆಹಲಿ:ದೇಶದಲ್ಲಿನ ಗಂಭೀರ ವಿಚಾರಗಳ ಬಗ್ಗೆ ಚರ್ಚೆಗೆ ಆಗ್ರಹಿಸಿದ ವಿರೋಧ ಪಕ್ಷದ ಸಂಸದರನ್ನು ಕಾರಣವಿಲ್ಲದೆ ಕಲಾಪದಿಂದ ಅಮಾನತು ಮಾಡಲಾಗಿದೆ. ಸಂಸದರನ್ನು ಸಂಸತ್ತಿನಿಂದ ಹೊರಹಾಕಿದರ ಬಗ್ಗೆ ಏಕೆ ಚರ್ಚೆಯಾಗುತ್ತಿಲ್ಲ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಮಂಗಳವಾರ ವಿರೋಧ ಪಕ್ಷದ ಸಂಸದರು ಸಂಸತ್ತಿನ ಹೊರಗಡೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟಿಎಂಸಿಯ ಕಲ್ಯಾಣ್​ ಬ್ಯಾನರ್ಜಿ ಉಪರಾಷ್ಟ್ರಪತಿ ಜಗದೀಪ್​ ಧನಕರ್​ ಅವರನ್ನು ಅನುಕರಿಸಿದ್ದರು. ಇದನ್ನು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ತಮ್ಮ ಮೊಬೈಲ್​ನಲ್ಲಿ ಚಿತ್ರೀಕರಿಸಿ ವ್ಯಾಪಕ ಖಂಡನೆಗೆ ಗುರಿಯಾಗಿದ್ದರು.
ಇದನ್ನೂ ಓದಿ:ಉದ್ಯೋಗಕ್ಕಾಗಿ ಭೂಮಿ ಹಗರಣ; ಲಾಲು-ತೇಜಸ್ವಿಗೆ ED ಸಮನ್ಸ್​
ಈ ಕುರಿತು ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಸಂಸದರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ನಾನು ನನ್ನ ಮೊಬೈಲ್​ ಫೋನಿನಲ್ಲಿ ರೆಕಾರ್ಡ್​ ಮಾಡಿದ್ದೇನೆ ಅಷ್ಟೇ. ಅದನ್ನು ಮಾಧ್ಯಮ ಹಾಗೂ ಬಿಜೆಪಿಯವರು ಬೇರೆ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ. ಪ್ರಧಾನಿ ಮೋದಿ ಸೇರಿದಂತೆ ಎಲ್ಲರೂ ನಮ್ಮ ನಡೆಯನ್ನು ಟೀಕಿಸುತ್ತಿದ್ದಾರೆ.
ಇದುವರೆಗೆ 150 ಸಂಸದರನ್ನು ಹೊರಹಾಕಲಾಗಿದೆ. ಆದರೆ, ಈವರೆಗೆ ಮಾಧ್ಯಮಗಳಲ್ಲಿ ಈ ಬಗ್ಗೆ ಚರ್ಚೆಯಾಗಿಲ್ಲ. ಅದಾನಿ ಮತ್ತು ರಫೇಲ್​ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡಿಲ್ಲ. ನಿರುದ್ಯೋಗ ಸೇರಿದಂತೆ ದೇಶದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆಗೆ ಆಗ್ರಹಿಸಿದ ಸಂಸದರನ್ನು ಅಮಾನತು ಮಾಡಲಾಗುತ್ತಿದೆ. ಇದನ್ನು ಬಿಟ್ಟು ಬೇರೆ ಎಲ್ಲಾ ವಿಚಾರಗಳ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − four =
Remember me
