ಚೆನೈ:ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್​ ಗಾಂಧಿ ಅವರನ್ನು ದೋಷಿ ಎಂದು ತೀರ್ಪು ನೀಡಿದ ಜಡ್ಜ್​ ನಾಲಿಗೆಯನ್ನು ಅಧಿಕಾರಕ್ಕೆ ಬಂದ ಮೇಲೆ ಕತ್ತರಿಸಿ ಹಾಕುತ್ತೇನೆ ಎಂದು ಕಾಂಗ್ರೆಸ್​ ಮುಖಂಡ ಹೇಳಿಕೆ ನೀಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಸಂಸತ್​ ಸ್ಥಾನದಿಂದ ರಾಹುಲ್​ ಗಾಂಧಿ ಅವರನ್ನು ಅನರ್ಹಗೊಳಿಸಿರುವುದನ್ನು ಖಂಡಿಸಿ ತಮಿಳುನಾಡು ಕಾಂಗ್ರೆಸ್​ನ ಎಸ್​ಸಿ/ಎಸ್​ಟಿ ವಿಭಾಗವು ಡಿಂಡಿಗಲ್​ನಲ್ಲಿ ಪ್ರತಿಭಟನೆ ನಡೆಸುತ್ತಿತ್ತು. ಈ ವೇಳೆ ಮಾತನಾಡಿದ ಮಣಿಕಂಠನ್​ ಮಾರ್ಚ್​ 23ರಂದು ನಮ್ಮ ನಾಯಕರಾದ ರಾಹುಲ್​ ಗಾಂಧಿ ಅವರಿಗೆ ಜಡ್ಜ್​​ ಎಚ್​.ವರ್ಮಾ 2 ವರ್ಷಗಳ ಕಾಲ ಜೈಲು ಶಿಕ್ಷಯನ್ನು ನೀಡಿದ್ದಾರೆ.
ಇದನ್ನೂ ಓದಿ:ದಲಿತರೆಂಬ ಕಾರಣಕ್ಕೆ ಛತ್ರದ ಬುಕ್ಕಿಂಗ್​ ಕ್ಯಾನ್ಸಲ್​ ಮಾಡಿದ ಮಾಲೀಕ; ಪ್ರಕರಣ ದಾಖಲು
ಮುಂದಿನ ದಿನಗಳಲ್ಲಿ ನಾವು ಅಧಿಕಾರಕ್ಕೆ ಬಂದ ಮೇಲೆ ನಿಮ್ಮ ನಾಲಿಗೆಯನ್ನು ಕತ್ತರಿಸಿ ಹಾಕುತ್ತೇವೆ ಎಂದು ಮಾತನಾಡುವ ವೇಳೆ ಹೇಳಿಕೆಯನ್ನು ನೀಡಿದ್ದ. ಇದರ ಬೆನ್ನಲ್ಲೇ ಕಾಂಗ್ರೆಸ್​ ಮುಖಂಡನ ಈ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ಪಕ್ಷ ಹೇಗೆ ಡ್ಯಾಮೇಜ್​​ ಕಂಟ್ರೋಲ್​ ಮಾಡಲಿದೆ ಎಂದು ಕಾದು ನೋಡಬೇಕಿದೆ.
ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆದ ಬೆನ್ನಲ್ಲೇ ಕಾಂಗ್ರೆಸ್​ ಮುಖಂಡ ಮಣಿಕಂಠನ್​ ವಿರುದ್ದ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
