ಲಖನೌ:ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಮೊದಲಿನಿಂದಲೂ ತಮ್ಮ ರೆಬಲ್ ಸ್ವಭಾವದಿಂದಲೇ ಖ್ಯಾತರಾಗಿದ್ದಾರೆ. ನಿನ್ನೆ ವಿಕಾಸ್ ದುಬೆಯ ಎನ್​ಕೌಂಟರ್​ ಆದ ಮೇಲಂತೂ ಮತ್ತೆ ಯೋಗಿ ಜೀ ಸುದ್ದಿಯಲ್ಲಿದ್ದಾರೆ. ಪ್ರತಿಪಕ್ಷಗಳ ಹಲವು ಮುಖಂಡರು ಯೋಗಿ ಆದಿತ್ಯನಾಥ್​ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳದ ಯೋಗಿ ಆದಿತ್ಯನಾಥ್​ ಅವರು, ನಮ್ಮ ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ಕ್ರೈಂಗಳನ್ನು ಕೊನೆಗಾಣಿಸಲು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ಖಡಕ್​ ಆಗಿ ಹೇಳಿದ್ದಾರೆ.ಭಷ್ಟಾಚಾರ ಮತ್ತು ಅಪರಾಧಗಳನ್ನು ಒಂದು ಸ್ವಲ್ಪವೂ ಸಹಿಸಿಕೊಳ್ಳುವುದಿಲ್ಲ. ಉತ್ತರ ಪ್ರದೇಶದಲ್ಲಿರುವ 200 ಮಿಲಿಯನ್​ ಜನರ ಸಂರಕ್ಷಣೆ ನಮ್ಮ ಸರ್ಕಾರದ ಜವಾಬ್ದಾರಿ ಎಂದಿದ್ದಾರೆ.ಇದನ್ನೂ ಓದಿ:ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ 36,216ಕ್ಕೆ ಏರಿಕೆ; ಇಂದು 2 ಸಾವಿರಕ್ಕೂ ಹೆಚ್ಚು ಕೇಸ್​ಗಳು
ಹಾಗೇ ಲಾಕ್​ಡೌನ್​ ಸಂದರ್ಭದಲ್ಲಿ ರಾಜ್ಯಕ್ಕೆ ವಾಪಸ್​ ಬಂದ ವಲಸೆ ಕಾರ್ಮಿಕರ ಬಗ್ಗೆ ಮಾತನಾಡಿದ ಯೋಗಿ ಆದಿತ್ಯನಾಥ್​ ಅವರು, ಕೊವಿಡ್-19 ಸಾಂಕ್ರಾಮಿಕ ರೋಗ ಬಂದು ಲಾಕ್​ಡೌನ್ ಆದ ಬಳಿಕ ಸುಮಾರು 4 ಮಿಲಿಯನ್​ ವಲಸೆ ಕಾರ್ಮಿಕರು ರಾಜ್ಯಕ್ಕೆ ವಾಪಸ್​ ಆಗಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಎಲ್ಲ ವಲಸೆ ಕಾರ್ಮಿಕರಿಗೂ ಕೆಲಸ ಒದಗಿಸಲು ಕ್ರಮ ಕೈಗೊಂಡಿದ್ದೇವೆ. ಅಷ್ಟೇ ಅಲ್ಲ, ಮೊದಲು ಇದ್ದಲ್ಲಿಗೇ ವಾಪಸ್​ ಹೋಗಿ ಕೆಲಸ ಮಾಡುತ್ತೇವೆ ಎಂದು ಇಚ್ಛೆ ಪಡುವ ಕಾರ್ಮಿಕರಿಗೆ ಅದಕ್ಕೂ ವ್ಯವಸ್ಥೆ ಮಾಡುತ್ತೇವೆ ಎಂದಿದ್ದಾರೆ. (ಏಜೆನ್ಸೀಸ್​)
ತುಘಲಕ್​ ಅರವಿಂದ್​ ಕೇಜ್ರಿವಾಲ್​ಗೆ ಈಗ ಎಲ್ಲ ಕ್ರೆಡಿಟ್​ ಬೇಕಾಗಿದೆ: ಸಂಸದ ಗೌತಮ್​ ಗಂಭೀರ್​ ಅಸಮಾಧಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
