ನವದೆಹಲಿ:ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಪ್ರಕರಣದಲ್ಲಿ ತಮ್ಮ ಆಪ್ತ ಸಹಾಯಕನನ್ನು ಬಂಧಿಸಿದ ಬೆನ್ನೆಲ್ಲೇ ದಿಲ್ಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ಈ ವೇಳೆ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:IPL 2024: ಆರ್​ಸಿಬಿ ವಿರುದ್ಧ ಟಾಸ್ ಗೆದ್ದ ಸಿಎಸ್​ಕೆ ಬೌಲಿಂಗ್​ ಆಯ್ಕೆ..!
ಬಿಜೆಪಿ ಆಮ್ ಆದ್ಮಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಜೈಲಿಗೆ ಹಾಕುವ ಮೂಲಕ ನಮ್ಮ ಪಕ್ಷವನ್ನು ಹತ್ತಿಕ್ಕಲು ಬಯಸುತ್ತಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ನಾಳೆ (ಭಾನುವಾರ) ಬಿಜೆಪಿ ಕೇಂದ್ರ ಕಚೇರಿಗೆ ಹೋಗುವುದಾಗಿ ಹೇಳಿದ್ದಾರೆ. ಬಿಜೆಪಿ ಯಾರನ್ನು ಬೇಕಾದರೂ ಬಂಧಿಸಲಿ ಎಂದು ಕೇಜ್ರಿವಾಲ್ ಸವಾಲು ಹಾಕಿದ್ದಾರೆ.
ಬಿಜೆಪಿ ನಾಯಕರು ಆಪ್ ಪಕ್ಷದ ಹಿಂದೆ ಬಿದ್ದಿದ್ದಾರೆ. ಒಬ್ಬರಾದ ಬಳಿಕ ಒಬ್ಬರಂತೆ ನಮ್ಮ ನಾಯಕರನ್ನು ಜೈಲಿಗೆ ಹಾಕಲಾಗುತ್ತಿದೆ. ಮನೀಶ್ ಸಿಸೋಡಿಯ, ಸತ್ಯೇಂದ್ರ ಜೈನ್, ಸಂಜಯ್ ಸಿಂಗ್ ಮತ್ತು ನನ್ನನ್ನು ಜೈಲಿಗೆ ಹಾಕಲಾಯಿತು. ಈಗ ನನ್ನ ಆಪ್ತ ಸಹಾಯಕನನ್ನು ಬಂಧಿಸಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಣ್ಣಿನ ಶಸ್ತ್ರಚಿಕಿತ್ಸೆಯ ನಂತರ ಲಂಡನ್‌ನಿಂದ ಹಿಂತಿರುಗಿ ತಮ್ಮನ್ನು ಭೇಟಿಯಾದ ಎಎಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರನ್ನು ಬಂಧಿಸಲು ಬಿಜೆಪಿ ಈಗ ಯೋಜಿಸುತ್ತಿದೆ ಎಂದು ಆರೋಪ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಸಚಿವರಾದ ಸೌರಭ್ ಭಾರದ್ವಾಜ್ ಮತ್ತು ಅತಿಶಿ ಕೂಡ ಅವರು ಇದ್ದಾರೆ ಎಂದು ದೆಹಲಿ ಸಿಎಂ ಕೇಜ್ರಿವಾಲ್ ಆರೋಪ ಮಾಡಿದರು.
ದೆಹಲಿ ಬಡ ಜನರಿಗೆ ಒಳ್ಳೆಯ ಶಿಕ್ಷಣ, ಉತ್ತಮ ಆರೋಗ್ಯ ನೀಡುತ್ತಿರುವುದು ನಮ್ಮ ತಪ್ಪಾ? ಇದನ್ನು ಅವರು ಮಾಡಲು ಸಾಧ್ಯವಿಲ್ಲ. ಹೀಗಾಗಿ ನಮ್ಮನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಧಾನ ಮಂತ್ರಿಗಳು ಜೈಲಿ ಕಾ ಕೇಲ್ (ಜೈಲಿನ ಆಟ) ಆಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನಾನು ಪ್ರಧಾನಿಗೆ ಕೈಮುಗಿದು ಹೇಳಲು ಬಯಸುತ್ತೇನೆ ನೀವು ಒಬ್ಬೊಬ್ಬರಾಗಿ ಜನರನ್ನು ಬಂಧಿಸುವ ಆಟವನ್ನು ಆಡುತ್ತಿದ್ದೀರಿ, ನಾಳೆ, ನಾನು ನನ್ನ ಎಲ್ಲಾ ಹಿರಿಯ ನಾಯಕರು, ಶಾಸಕರು ಮತ್ತು ಸಂಸದರೊಂದಿಗೆ ಮಧ್ಯಾಹ್ನ ಬಿಜೆಪಿ ಕೇಂದ್ರ ಕಚೇರಿಗೆ ಹೋಗುತ್ತೇನೆ. ನೀವು ಯಾರನ್ನು ಬೇಕಾದರೂ ಜೈಲಿಗೆ ಹಾಕಿಕೊಳ್ಳಿ, ಎಎಪಿಯ ನಾಯಕರನ್ನು ಜೈಲಿಗೆ ತಳ್ಳಬಹುದು ಎಂದು ನೀವು ಭಾವಿಸುತ್ತೀರಿ, ನೀವು ಬಯಸಿದರೆ ಅದನ್ನು ಪ್ರಯತ್ನಿಸಿ ಎಂದು ಸವಾಲು ಹಾಕಿದರು.
“ಆಮ್ ಆದ್ಮಿ ಪಕ್ಷವು ದೇಶಾದ್ಯಂತದ ಜನರ ಹೃದಯದಲ್ಲಿ ತನ್ನ ಸ್ಥಾನವನ್ನು ಕಂಡುಕೊಂಡಿರುವ ಬಗ್ಗೆ ಬಿಜೆಪಿಗೆ ಚಿಂತೆಯಾಗಿದೆ. ನೀವು ಜೈಲಿನಲ್ಲಿ ಎಸೆಯುವ ಪ್ರತಿಯೊಬ್ಬ ಎಎಪಿ ನಾಯಕನಿಗೆ ನೂರಾರು ನಾಯಕರು ಹುಟ್ಟುತ್ತಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿರುಗೇಟು ನೀಡಿದರು.
ಮರಕ್ಕೆ ಕಾರು ಡಿಕ್ಕಿಯಾಗಿ ನಾಲ್ವರು ಕಾನೂನು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು: ಇನ್ನಿಬ್ಬರು ಪಾರು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:13 − five =
Remember me
