ನವದೆಹಲಿ:ದೇಶದಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳ ಸಂಖ್ಯೆಯನ್ನು 5ಕ್ಕೆ ಇಳಿಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಬ್ಯಾಂಕಿಂಗ್​ ಉದ್ಯಮವನ್ನು ಮರುವಿನ್ಯಾಸಗೊಳಿಸುವ ನಿಟ್ಟಿನಲ್ಲಿ ಬ್ಯಾಂಕ್​ಗಳನ್ನು ವಿಲೀನಗೊಳಿಸುವ ಬದಲು ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳನ್ನು ಖಾಸಗೀಕರಣಗೊಳಿಸಲು ಸರ್ಕಾರ ನಿರ್ಧರಿಸಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.
ತನ್ನ ಯೋಜನೆಯ ಮೊದಲ ಭಾಗವಾಗಿ ಸರ್ಕಾರ ಬ್ಯಾಂಕ್​ ಆಫ್​ ಇಂಡಿಯಾ, ಸೆಂಟ್ರಲ್​ ಬ್ಯಾಂಕ್​ ಆಫ್​ ಇಂಡಿಯಾ, ಇಂಡಿಯನ್​ ಓವರ್​ಸೀಸ್​ ಬ್ಯಾಂಕ್​, ಯುಕೋ ಬ್ಯಾಂಕ್​, ಬ್ಯಾಂಕ್​ ಆಫ್​ ಮಹಾರಾಷ್ಟ್ರ ಹಾಗೂ ಪಂಜಾಬ್​ ಆ್ಯಂಡ್​ ಸಿಂಗ್​ ಬ್ಯಾಂಕ್​ಗಳಲ್ಲಿನ ಬಂಡವಾಳ ಹಿಂತೆಗೆತಕ್ಕೆ ಮುಂದಾಗಲಿದೆ ಎಂದು ಹೇಳಲಾಗಿದೆ.
ಭಾರತದಲ್ಲಿ ಸದ್ಯ 12 ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್​ಗಳಿವೆ. ಇವನ್ನು 5ಕ್ಕೆ ಇಳಿಸುವುದು ಸರ್ಕಾರದ ನಿರ್ಧಾರವಾಗಿದೆ. ಸರ್ಕಾರ ಯೋಜನೆಯ ರೂಪರೇಷೆಯನ್ನು ಸಿದ್ಧಪಡಿಸುತ್ತಿದೆ. ಅದು ಸಿದ್ಧವಾದ ಬಳಿಕ ಕೇಂದ್ರ ಸಚಿವ ಸಂಪುಟದ ಅನುಮೋದನೆಗಾಗಿ ಮಂಡಿಸಲಿದೆ ಎನ್ನಲಾಗಿದೆ.
ಇದನ್ನೂ ಓದಿ:ಅಯೋಧ್ಯೆ ಶ್ರೀರಾಮ ಮಂದಿರಕ್ಕಾಗಿ ಉಡುಪಿಯ ಪವಿತ್ರ ಮೃತ್ತಿಕೆ ರವಾನೆ
ಸರ್ಕಾರದ ವಿವಿಧ ಸಮಿತಿಗಳು ಮತ್ತು ಭಾರತೀಯ ರಿಸರ್ವ್​ ಬ್ಯಾಂಕ್​ ಕೂಡ ಐದಕ್ಕಿಂತ ಹೆಚ್ಚಿನ ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳನ್ನು ಹೊಂದಿರಬಾರದು ಎಂದೇ ಸರ್ಕಾರಕ್ಕೆ ಸಲಹೆ ನೀಡುತ್ತಲೇ ಇವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳನ್ನು ವಿಲೀನಗೊಳಿಸುವ ಬದಲು ಅವುಗಳಲ್ಲಿನ ಹೂಡಿಕೆಯನ್ನು ಹಿಂಪಡೆದು ಖಾಸಗೀಕರಣಗೊಳಿಸುವುದು ಒಳಿತು ಎಂಬ ನಿರ್ಧಾರಕ್ಕೆ ಬಂದಿರುವುದಾಗಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್​ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸರ್ಕಾರ ಕಳೆದ ವರ್ಷ 10 ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳನ್ನು ವಿಲೀನಗೊಳಿಸಿ ನಾಲ್ಕು ಬೃಹತ್​ ಬ್ಯಾಂಕ್​ಗಳನ್ನಾಗಿ ಪರಿವರ್ತಿಸಿತ್ತು. ಆದರೆ ಈ ಬಾರಿ ಬ್ಯಾಂಕ್​ಗಳನ್ನು ವಿಲೀನಗೊಳಿಸುವ ಬದಲು ಅವುಗಳನ್ನು ಖಾಸಗೀಕರಣ ಮಾಡಲು ಸರ್ಕಾರ ಚಿಂತನೆ ನಡೆಸಿರುವುದಾಗಿ ಹೇಳಿದ್ದಾರೆ.
ಈ ಬಗ್ಗೆ ಕೇಂದ್ರ ವಿತ್ತ ಸಚಿವಾಲಯದಿಂದ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ. ಆದರೆ, ದೇಶದಲ್ಲಿರುವ ಕೋವಿಡ್​-19 ಪಿಡುಗಿನಿಂದಾಗಿ ಪ್ರಸಕ್ತ ಆರ್ಥಿಕ ವರ್ಷದಲ್ಲೇ ಇದು ಸಾಧ್ಯವಾಗದು ಎಂಬ ಮಾತುಗಳು ಕೇಳಿಬರುತ್ತಿವೆ. ಕೋವಿಡ್​ನಿಂದಾಗಿ ಬ್ಯಾಂಕ್​ಗಳಲ್ಲಿ ಮರುಪಾವತಿಯಾಗದ ಸಾಲಗಳ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದು ಇದಕ್ಕೆ ಕಾರಣ ಎನ್ನಲಾಗುತ್ತಿದೆ.
PHOTOS |ನತಾಶಾ ಪ್ರೆಗ್ನನ್ಸಿ ಫೋಟೋಶೂಟ್ ಮಾಡಿಸಿದ ಹಾರ್ದಿಕ್​ ಪಾಂಡ್ಯ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 + twenty =
Remember me
