ನವದೆಹಲಿ:ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸ್ವತಂತ್ರವಾಗಿ 370 ಮತ್ತು ಎನ್​ಡಿಎ ಒಕ್ಕೂಟ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ದಾಖಲಿಸಿ, ಪ್ರಧಾನಿ ಮೋದಿ ನಾಯಕತ್ವದ ಅಡಿಯಲ್ಲಿ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್​ ಷಾ ಶನಿವಾರ ಹೇಳಿದರು.
ಎಕನಾಮಿಕ್​ ಟೈಮ್ಸ್​ ನೌ ಗ್ಲೋಬಲ್​ ಬಿಜಿನೆಸ್​ ಸಮ್ಮಿಟ್​ 2024 ನಲ್ಲಿ ಮಾತನಾಡಿದ ಅಮಿತ್​ ಷಾ, ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ಯಾವುದೇ ಸಸ್ಪೆನ್ಸ್ ಇಲ್ಲ. ಕಾಂಗ್ರೆಸ್ ಮತ್ತು ಇತರೆ ಪ್ರತಿಪಕ್ಷಗಳು ಸಹ ತಾವು ಮತ್ತೆ ಪ್ರತಿಪಕ್ಷದ ಬೆಂಚ್‌ಗಳಲ್ಲೇ ಕೂರಬೇಕಿದೆ ಎಂಬುದನ್ನು ಅರಿತುಕೊಂಡಿವೆ ಎಂದರು.
ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದಲ್ಲಿ ವಿಶೇಷ ಸ್ಥಾನಮಾನವನ್ನು ನೀಡಿದ್ದ 370ನೇ ಆರ್ಟಿಕಲ್​ ರದ್ದು ಮಾಡಿದ್ದೇವೆ. ಹಾಗಾಗಿ ದೇಶದ ಜನರು ಬಿಜೆಪಿಗೆ 370 ಸ್ಥಾನಗಳನ್ನು ಮತ್ತು ಎನ್‌ಡಿಎಗೆ 400ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಿ ಆಶೀರ್ವದಿಸುತ್ತಾರೆ ಎಂದು ನಾವು ನಂಬುತ್ತೇವೆ ಎಂದರು. ಜಯಂತ್ ಚೌಧರಿ ನೇತೃತ್ವದ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ), ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮತ್ತು ಇತರ ಕೆಲವು ಪ್ರಾದೇಶಿಕ ಪಕ್ಷಗಳು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸೇರುವ ಸಾಧ್ಯತೆಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅಮಿತ್​ ಷಾ, ಬಿಜೆಪಿಗೆ ಕುಟುಂಬ ಯೋಜನೆಯಲ್ಲಿ ನಂಬಿಕೆ ಇದೆ ಹೊರತು ರಾಜಕೀಯದಲ್ಲಿ ಅಲ್ಲ. ಹೆಚ್ಚಿನ ಪಕ್ಷಗಳು ಆಡಳಿತ ಸರ್ಕಾರದ ಒಕ್ಕೂಟಕ್ಕೆ ಸೇರಬಹುದು ಎಂಬ ಸೂಚನೆಯನ್ನು ಅಮಿತ್​ ಷಾ ನೀಡಿದರು.
ಪಕ್ಷಗಳ ಜತೆ ಮಾತುಕತೆಗಳು ನಡೆಯುತ್ತಿವೆ ಆದರೆ ಯಾವುದನ್ನೂ ಅಂತಿಮಗೊಳಿಸಲಾಗಿಲ್ಲ. ಮುಂಬರುವ 2024ರ ಚುನಾವಣೆಯು ಎನ್‌ಡಿಎ ಮತ್ತು ಇಂಡಿಯಾ ಒಕ್ಕೂಟದ ವಿಪಕ್ಷದ ನಡುವಿನ ಚುನಾವಣೆಯಾಗಿರುವುದಿಲ್ಲ. ಆದರೆ, ಅಭಿವೃದ್ಧಿ ಮತ್ತು ಕೇವಲ ಘೋಷಣೆಗಳನ್ನು ನೀಡುವವರ ನಡುವಿನ ಚುನಾವಣೆಯಾಗಿದೆ ಎಂದು ಷಾ ಹೇಳಿದರು.
ಇದೇ ಸಂದರ್ಭದಲ್ಲಿ ಮಹತ್ವದ ಘೋಷಣೆ ಮಾಡಿದ ಅಮಿತ್​ ಷಾ, ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನವೇ ಪೌರತ್ವ ತಿದ್ದುಪತಿ ಕಾಯ್ದೆ (ಸಿಎಎ)ಯನ್ನು ಜಾರಿಗೆ ತರಲಾಗುವುದು ಎಂದರು. ಅದಕ್ಕೂ ಮುನ್ನ ಸಿಎಎ ಕುರಿತು ಕೆಲವು ನಿಯಮಗಳನ್ನು ಹೊರಡಿಸಲಾಗುವುದು ಎಂದರು.
ಸಿಎಎ ವಿಚಾರದಲ್ಲಿ ನಮ್ಮ ಮುಸ್ಲಿಂ ಸಹೋದರರನ್ನು ದಾರಿತಪ್ಪಿಸಲಾಗುತ್ತಿದೆ ಮತ್ತು ಪ್ರಚೋದಿಸಲಾಗುತ್ತಿದೆ. ಸಿಎಎ ಕೇವಲ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಕಿರುಕುಳವನ್ನು ಎದುರಿಸಿ ಭಾರತಕ್ಕೆ ಬಂದವರಿಗೆ ಪೌರತ್ವವನ್ನು ನೀಡಲು ಉದ್ದೇಶಿಸಲಾಗಿದೆ ಹೊರತು ಇದು ಯಾರೊಬ್ಬರ ಭಾರತೀಯ ಪೌರತ್ವವನ್ನು ಕಸಿದುಕೊಳ್ಳುವುದಿಲ್ಲ ಎಂದು ಷಾ ಹೇಳಿದರು.
2014ರ ಸಮಯದಲ್ಲಿ ದೇಶದ ಆರ್ಥಿಕತೆಯು ಕೆಟ್ಟ ಸ್ಥಿತಿಯಲ್ಲಿತ್ತು. ಎಲ್ಲೆಲ್ಲೂ ಹಗರಣಗಳಿದ್ದವು. ವಿದೇಶಿ ಬಂಡವಾಳ ಬರುತ್ತಿರಲಿಲ್ಲ. ಅಂದು ನಾವು ಶ್ವೇತಪತ್ರ ಹೊರತಂದಿದ್ದರೆ ಅದು ಜಗತ್ತಿಗೆ ತಪ್ಪು ಸಂದೇಶ ನೀಡುತ್ತಿತ್ತು. ಆದರೆ 10 ವರ್ಷಗಳ ನಂತರ ನಮ್ಮ ಸರ್ಕಾರ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಿದೆ, ವಿದೇಶಿ ಹೂಡಿಕೆಯನ್ನು ತಂದಿದೆ ಮತ್ತು ಯಾವುದೇ ಭ್ರಷ್ಟಾಚಾರವಿಲ್ಲ. ಆದ್ದರಿಂದ ಶ್ವೇತಪತ್ರವನ್ನು ಪ್ರಕಟಿಸಲು ಇದು ಸರಿಯಾದ ಸಮಯ ಎಂದು ಹೇಳಿದರು.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಕುರಿತು ಮಾತನಾಡಿದ ಗೃಹ ಸಚಿವರು, ರಾಮನ ಜನ್ಮ ಸ್ಥಳದಲ್ಲಿಯೇ ಮಂದಿರ ನಿರ್ಮಾಣವಾಗಬೇಕು ಎಂದು ದೇಶದ ಜನತೆ 500-550 ವರ್ಷಗಳಿಂದ ನಂಬಿದ್ದರು. ಆದರೆ, ತುಷ್ಟೀಕರಣ ರಾಜಕಾರಣ ಮತ್ತು ಕಾನೂನು ಸುವ್ಯವಸ್ಥೆಯನ್ನು ಮುಂದಿಟ್ಟುಕೊಂಡು ರಾಮಮಂದಿರ ನಿರ್ಮಾಣಕ್ಕೆ ಅವಕಾಶ ಸಿಗಲಿಲ್ಲ. ಆದರೆ, ಇದೀಗ ಮಂದಿರ ನಿರ್ಮಾಣವಾಗಿದ್ದು, ಭಾರತೀಯರ ಕನಸು ನನಸಾಗಿದೆ ಎಂದರು.(ಏಜೆನ್ಸೀಸ್​)
ಹನ್ನೊಂದು ದಿನ ಉಪವಾಸ ಇದ್ದು ರಾಮನ ಪೂಜೆ ಮಾಡಿದ ಮೋದಿ ಗ್ರೇಟ್: ಎಚ್​.ಡಿ.ದೇವೇಗೌಡ

ಪ್ರಧಾನಿ ಮೋದಿ ನಿಂದನೆ: ರಾಹುಲ್​ ವಿರುದ್ಧ ಅಮಿತ್​ ಶಾ ಆಕ್ರೋಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 17 =
Remember me
