ನವದೆಹಲಿ:ಕೌಟುಂಬಿಕ ಹಿಂಸಾಚಾರಕ್ಕೆ ಒಳಗಾದ ವಿವಾಹಿತ ಪುರುಷರ ಆತ್ಮಹತ್ಯೆಯನ್ನು ತಡೆಗಟ್ಟಲು ಮಾರ್ಗಸೂಚಿಗಳನ್ನು ರೂಪಿಸಲು ಮತ್ತು ಅದರ ಹಿತಾಸಕ್ತಿಗಳನ್ನು ಕಾಪಾಡಲು ಪುರುಷರಿಗಾಗಿ ರಾಷ್ಟ್ರೀಯ ಆಯೋಗವನ್ನು ರಚಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಜುಲೈ 3ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.
ಇದನ್ನೂ ಓದಿ:ಹನುಮಂತನ ಆರತಿ ಮಾಡಲು ಯುವತಿಯರು ಹೋಟೆಲ್ ರೂಮ್​ಗೆ ಹೋಗಲ್ಲ: ಹರಿಯಾಣ ಮಹಿಳಾ ಆಯೋಗದ ಮುಖ್ಯಸ್ಥೆ!​
ಸುಪ್ರೀಂ ಕೋರ್ಟ್ ವೆಬ್‌ಸೈಟ್ ಪ್ರಕಾರ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ಪೀಠವು ಸೋಮವಾರ ವಿಚಾರಣೆಗೆ PIL ಅನ್ನು ಪಟ್ಟಿ ಮಾಡಿದೆ.
ವಕೀಲ ಮಹೇಶ್ ಕುಮಾರ್ ತಿವಾರಿ ಸಲ್ಲಿಸಿದ್ದ ಮನವಿಯಲ್ಲಿ 2021ರಲ್ಲಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಭಾರತದಲ್ಲಿ ಆಕಸ್ಮಿಕ ಸಾವುಗಳ ಕುರಿತು ಪ್ರಕಟಿಸಿದ ಡೇಟಾವನ್ನು ಉಲ್ಲೇಖಿಸಿ, ಆ ವರ್ಷದಲ್ಲಿ ದೇಶಾದ್ಯಂತ 1,64,033 ಜನರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಈ ಪೈಕಿ 81,063 ವಿವಾಹಿತ ಪುರುಷರು, 28,680 ವಿವಾಹಿತ ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:VIDEO| ಲೇಡಿಸ್​ ಪಿಜಿ ಮುಂಭಾಗ ವ್ಯಕ್ತಿಯ ಅಸಭ್ಯ ವರ್ತನೆ; ಕಠಿಣ ಕ್ರಮಕ್ಕೆ ಆಗ್ರಹಿಸಿದ ಮಹಿಳಾ ಆಯೋಗ
“2021ರಲ್ಲಿ ಸುಮಾರು 33.2 ಪ್ರತಿಶತ ಪುರುಷರು ಕೌಟುಂಬಿಕ ಸಮಸ್ಯೆಗಳಿಂದಾಗಿ ಮತ್ತು ಶೇಕಡಾ 4.8ರಷ್ಟು ವಿವಾಹ ಸಂಬಂಧಿತ ಸಮಸ್ಯೆಗಳಿಂದಾಗಿ ತಮ್ಮ ಜೀವನವನ್ನು ಕೊನೆಗೊಳಿಸಿದ್ದಾರೆ. ಈ ವರ್ಷದಲ್ಲಿ ಒಟ್ಟು 1,18,979 ಪುರುಷರು (ಶೇ. 72) ಮತ್ತು ಒಟ್ಟು 45,026 ಮಹಿಳೆಯರು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. 27 ರಷ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ,” ಎನ್‌ಸಿರ್‌ಬಿ ಒದಗಿಸಿದ ದತ್ತಾಂಶವನ್ನು ಉಲ್ಲೇಖಿಸುವಾಗ ಮನವಿ ಹೇಳಿದೆ.
ವಿವಾಹಿತ ಪುರುಷರ ಆತ್ಮಹತ್ಯೆಯ ಸಮಸ್ಯೆಯನ್ನು ನಿಭಾಯಿಸಲು ಮತ್ತು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಪುರುಷರ ದೂರುಗಳನ್ನು ಸ್ವೀಕರಿಸಲು ರಾಷ್ಟ್ರೀಯ ಮಾನದ ಹಕ್ಕುಗಳ ಆಯೋಗಕ್ಕೆ ನಿರ್ದೇಶನವನ್ನು ಅರ್ಜಿಯಲ್ಲಿ ಕೋರಲಾಗಿದೆ.
ಇದನ್ನೂ ಓದಿ:ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆಯ ಮೇಲೆ ಕಾರು ಚಾಲಕನಿಂದ ದೌರ್ಜನ್ಯ: ವಿಡಿಯೋ ಬಹಿರಂಗ
ಕೌಟುಂಬಿಕ ಹಿಂಸಾಚಾರಕ್ಕೆ ಒಳಗಾದವರ ದೂರನ್ನು ಸ್ವೀಕರಿಸಲು ಪ್ರತಿ ಪೊಲೀಸ್ ಠಾಣೆಯ ಪೊಲೀಸ್ ಪ್ರಾಧಿಕಾರಕ್ಕೆ ಸ್ಟೇಷನ್‌ ಹೌಸ್ ಆಫೀಸರ್‌ಗೆ ಗೃಹ ಸಚಿವಾಲಯದ ಮೂಲಕ ಸರಿಯಾದ ಮಾರ್ಗಸೂಚಿಗಳನ್ನು ನೀಡಲು ಪ್ರತಿವಾದಿ ನಂ1 ಗೆ (ಭಾರತೀಯ ಒಕ್ಕೂಟ) ನಿರ್ದೇಶನ ನೀಡಿ, ಕೌಟುಂಬಿಕ ಸಮಸ್ಯೆಗಳು ಮುತ್ತು ಮದುವೆ ಸಂಬಂಧಿತ ಸಮಸ್ಯೆಗಳಿಂದಾಗಿ ಒತ್ತಡದಲ್ಲಿ ಮತ್ತು ಭಾರತ ಸರ್ಕಾರದಿಂದ ಸರಿಯಾದ ಕಾನೂನು ಜಾರಿಗೆ ಬರುವವರೆಗೆ ಅದನ್ನು ಸರಿಯಾದ ವಿಲೇವಾರಿಗಾಗಿ ರಾಜ್ಯ ಮಾನವ ಹಕ್ಕು ಆಯೋಗಕ್ಕೆ ಉಲ್ಲೇಖಿಸಿ,” ಎಂದು ಅದು ಹೇಳಿದೆ.
“ಕೌಟುಂಬಿಕ ಹಿಂಸಾಚಾರ ಅಥವಾ ಕೌಟುಂಬಿಕ ಸಮಸ್ಯೆ ಮತ್ತು ವಿವಾಹ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವಿವಾಹಿತ ಪುರುಷರ ಆತ್ಮಹತ್ಯೆಯ ವಿಷಯದ ಬಗ್ಗೆ ಸಂಶೋಧನೆ ನಡೆಸಲು ಮತ್ತು ರಾಷ್ಟ್ರೀಯ ರೀತಿಯ ವೇದಿಕೆಯನ್ನು ರಚಿಸುವ (ಪುರುಷರ ಆಯೋಗ) ಸಲುವಾಗಿ ಅಗತ್ಯ ವರದಿಯನ್ನು ಮಾಡಲು ಭಾರತೀಯ ಕಾನೂನು ಆಯೋಗಕ್ಕೆ ನಿರ್ದೇಶನ/ಶಿಫಾರಸು ನೀಡಿದೆ’ ಎಂದು ಮನವಿಯಲ್ಲಿ ಕೋರಲಾಗಿದೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 11 =
Remember me
